ಉಡುಪಿ: ನಗರದ ವೆಂಕಟರಮಣ ದೇವಾಲಯದ ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಬೆಳ್ಳಂಪಳ್ಳಿಯ ಕುಕ್ಕೆಹಳ್ಳಿ ನಿವಾಸಿ ಕೃಷ್ಣ ನಾಯಕ್ ಅವರ ಪುತ್ರ, 9ನೇ ತರಗತಿ ವಿದ್ಯಾರ್ಥಿ ಆದಿತ್ಯ(14) ಮೃತ ವಿದ್ಯಾರ್ಥಿ. ಇಂದು ವೆಂಕಟರಮಣ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದು, ಈ ವೇಳೆ ಕೆರೆಯಲ್ಲಿ ಸ್ನಾನಕ್ಕೆ ಇಳಿದ ವೇಳೆ ವಿದ್ಯಾರ್ಥಿ ನೀರುಪಾಲಾಗಿದ್ದಾನೆ.
ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ರಕ್ಷಣಾ ತಂಡದವರು ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ನೀರುಪಾಲಾದ ವಿದ್ಯಾರ್ಥಿಯ ಪತ್ತೆಗಾಗಿ ಖ್ಯಾತ ಈಜುಪಟು ಈಶ್ವರ್ ಮಲ್ಪೆ ನೇತೃತ್ವದ ತಂಡ ಕೆರೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿ, ವಿದ್ಯಾರ್ಥಿಯನ್ನು ಕೆರೆಯಿಂದ ಮೇಲಕ್ಕೆತ್ತಿದೆ. ಬಳಿಕ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ, ಉಡುಪಿ ನಗರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ








