Close Menu
    What's Hot

    ಮಂಗಳೂರು: ಬ್ಲಿಂಕ್‌ಇಟ್‌ ಗೋಡೌನ್‌ಗೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ಕೊಳೆತ ಮೊಟ್ಟೆ ಪತ್ತೆ, ಗೋದಾಮುಗೆ ಸೀಲ್‌ ಮಾಡಿ ನೋಟಿಸ್

    September 4, 2026

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮೊಬೈಲ್‌ಗಾಗಿ ತಂಗಿಯನ್ನೇ ಸುತ್ತಿಗೆಯಿಂದ ಕೊಲೆ; ಆರೋಪಿಗೆ 4 ವರ್ಷ ಜೈಲು ಶಿಕ್ಷೆ
    ಅಪರಾಧ

    ಮೊಬೈಲ್‌ಗಾಗಿ ತಂಗಿಯನ್ನೇ ಸುತ್ತಿಗೆಯಿಂದ ಕೊಲೆ; ಆರೋಪಿಗೆ 4 ವರ್ಷ ಜೈಲು ಶಿಕ್ಷೆ

    adminBy adminAugust 27, 2026No Comments2 Mins Read

    ಮಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ವಂತ ತಂಗಿಯನ್ನೇ ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳಪದವು ನಿವಾಸಿ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾ ಶಿಕ್ಷೆಗೆ ಗುರಿಯಾದ ಅಪರಾಧಿಯಾಗಿದ್ದಾನೆ.

    ನ್ಯಾಯಾಲಯವು ಐಪಿಸಿ ಕಲಂ 304 (II) ಅನ್ವಯ ಅಪರಾಧಿಗೆ 4 ವರ್ಷಗಳ ಸಜಾ ಶಿಕ್ಷೆ ಹಾಗೂ ₹10,000 ದಂಡ ಮತ್ತು ಸಾಕ್ಷ್ಯ ನಾಶಪಡಿಸಿದ ಐಪಿಸಿ ಕಲಂ 201ರ ಅನ್ವಯ 1 ವರ್ಷ ಶಿಕ್ಷೆ ಹಾಗೂ ₹1,000 ದಂಡ ವಿಧಿಸಿ ಸೋಮವಾರ ಆದೇಶ ಹೊರಡಿಸಿದೆ.

    2019ರ ಆಕ್ಟೋಬರ್‌ 8 ರ ಮಧ್ಯಾಹ್ನ ಸುಮಾರು 12 ಗಂಟೆಗೆ ಕಂಬಳಪದವಿನಲ್ಲಿರುವ ತನ್ನ ಮನೆಯಲ್ಲಿ ಆರೋಪಿ ಸ್ಯಾಮ್ಸನ್, ತನ್ನ ತಂಗಿ ಫಿಯೋನಾ ಸ್ವೀಡಲ್ ಕುಟಿನ್ಹಾ ಬಳಿ ಮೊಬೈಲ್ ಫೋನ್ ಬಳಸಲು ನೀಡುವಂತೆ ಕೇಳಿದ್ದ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳ ನಡೆದಿತ್ತು. ಈ ವೇಳೆ ತೀವ್ರ ಕೋಪಗೊಂಡ ಸ್ಯಾಮ್ಸನ್, ಸುತ್ತಿಗೆಯಿಂದ ತಂಗಿಯ ತಲೆಗೆ ಬಲವಾಗಿ ಹಲ್ಲೆ ನಡೆಸಿ ಆಕೆಯನ್ನು ಕೊಲೆ ಮಾಡಿದ್ದ. ಬಳಿಕ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಆಕೆಯ ಮೃತದೇಹವನ್ನು ಮನೆಯ ಹಿಂಭಾಗದ ಪೊದೆಯಲ್ಲಿ ಬಚ್ಚಿಟ್ಟಿದ್ದನು.

    ಘಟನೆಯ ಬಳಿಕ ಮಗಳು ಕಾಣೆಯಾಗಿದ್ದಾಳೆ ಎಂದು ಮೃತ ಫಿಯೋನಾರ ತಂದೆ ಫ್ರಾನ್ಸಿಸ್ ಕುಟಿನ್ಹಾ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಅನ್ವಯ ಪೊಲೀಸರು ಅಪಹರಣ ಪ್ರಕರಣ (ಕಲಂ 363 ಐಪಿಸಿ) ದಾಖಲಿಸಿಕೊಂಡಿದ್ದರು. ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡ ಮಂಗಳೂರು ದಕ್ಷಿಣ ಉಪವಿಭಾಗದ ಅಂದಿನ ಎಸಿಪಿ ಟಿ. ಕೋದಂಡ ರಾಮ್ ಅವರು, ತನಿಖೆ ನಡೆಸಿ ಕೊಲೆ ರಹಸ್ಯವನ್ನು ಬಯಲಿಗೆಳೆದಿದ್ದರು. ತನಿಖೆ ಪೂರ್ಣಗೊಳಿಸಿದ ಪೊಲೀಸರು, 2020ರ ಜನವರಿ 10 ರಂದು ನ್ಯಾಯಾಲಯಕ್ಕೆ ಕಲಂ 302 ಮತ್ತು 201 ಐಪಿಸಿ ಅಡಿಯಲ್ಲಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

    ಪ್ರಕರಣದ ಸಮಗ್ರ ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು, ದಿನಾಂಕ 24-08-2026 ರಂದು ಆರೋಪಿಗೆ ಶಿಕ್ಷೆ ಪ್ರಕಟಿಸಿದೆ. ಅಭಿಯೋಜನ ಪರವಾಗಿ ಜ್ಯೋತಿ ಪ್ರಮೋದ ನಾಯಕ್ ವಾದ ಮಂಡಿಸಿದ್ದರು.

    #breakingnews #crimenews
    Previous Articleಕುಂದಾಪುರ: ಹೆದ್ದಾರಿ ದಾಟಲು ನಿಂತಿದ್ದ ಪಾದಚಾರಿಗೆ ವೇಗದ ಕಾರು ಡಿಕ್ಕಿಯಾಗಿ ಸಾವು
    Next Article ನಿಯಂತ್ರಣ ತಪ್ಪಿ ಟಿಟಿ ಮೇಲೆ ಉರುಳಿದ ಲಾರಿ; ಮೂವರಿಗೆ ಗಂಭೀರ ಗಾಯ

    Related Posts

    ಮಂಗಳೂರು: ಬ್ಲಿಂಕ್‌ಇಟ್‌ ಗೋಡೌನ್‌ಗೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ಕೊಳೆತ ಮೊಟ್ಟೆ ಪತ್ತೆ, ಗೋದಾಮುಗೆ ಸೀಲ್‌ ಮಾಡಿ ನೋಟಿಸ್

    September 4, 2026

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಂಗಳೂರು: ಬ್ಲಿಂಕ್‌ಇಟ್‌ ಗೋಡೌನ್‌ಗೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ಕೊಳೆತ ಮೊಟ್ಟೆ ಪತ್ತೆ, ಗೋದಾಮುಗೆ ಸೀಲ್‌ ಮಾಡಿ ನೋಟಿಸ್

    September 4, 2026

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.