Close Menu
    What's Hot

    ಕೆಲಸದ ನೆಪದಲ್ಲಿ ಮಹಿಳೆ ಕರೆಸಿ ಅಪಹರಣ; ಹಲ್ಲೆ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ

    September 4, 2026

    ಪಣಂಬೂರು ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ; ಓರ್ವ ಪ್ರಯಾಣಿಕನಿಗೆ ಗಾಯ

    September 4, 2026

    ಫ್ರಾಂಚೈಸಿ ಕೊಡಿಸುವುದಾಗಿ ನಂಬಿಸಿ ಸೈಬರ್ ವಂಚನೆ; ಮಹಿಳೆಗೆ ಜೀವ ಬೆದರಿಕೆ

    September 4, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಪುತ್ತೂರಿನಲ್ಲಿ ಓಮ್ನಿ ಕಾರು ಕಳ್ಳತನ; ನಾಲ್ವರು ಅಂತರ್‌ರಾಜ್ಯ ಕಳ್ಳರು ಅರೆಸ್ಟ್
    ಅಪರಾಧ

    ಪುತ್ತೂರಿನಲ್ಲಿ ಓಮ್ನಿ ಕಾರು ಕಳ್ಳತನ; ನಾಲ್ವರು ಅಂತರ್‌ರಾಜ್ಯ ಕಳ್ಳರು ಅರೆಸ್ಟ್

    adminBy adminAugust 27, 2026No Comments1 Min Read

    ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಓಮ್ನಿ ಕಾರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು  ಅಂತರ್ ರಾಜ್ಯ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.

    ಕೇರಳ ಕಾಸರಗೋಡು ನಿವಾಸಿಗಳಾದ ಅಬ್ದುಲ್ ಸಾಯಿಲ್ ಜೆ (25), ಮೊಹಮ್ಮದ್ ಆಸೀಕ್ (25) ಮೊಹಮ್ಮದ್ ಸಿರಾಜ್ (28) ಹಾಗೂ ತಮಿಳುನಾಡು ಕರೂರು ನಿವಾಸಿ ಶಕ್ತಿವೇಲು ಜಿ (24) ಬಂಧಿತ ಆರೋಪಿಗಳು.

    ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಡ್ನೂರು ಕಾವು ಎಂಬಲ್ಲಿ ಜೂನ್ 19 ರಿಂದ ಜೂನ್ 20 ರ ಅವಧಿಯಲ್ಲಿ ನಡೆದ ಓಮ್ನಿ ಕಾರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಅ.ಕ್ರ: 94/2026, 303(2)ಬಿಎನ್‌ಎಸ್ ರಂತೆ ಪ್ರಕರಣ ದಾಖಲಾಗಿತ್ತು. ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಮೋದ್ ಕುಮಾರ್ ರವರ ಹಾಗೂ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪ್ರಭಾರ ಪೊಲೀಸ್ ನಿರೀಕ್ಷಕರಾದ ತಿಮ್ಮಪ್ಪ ನಾಯ್ಕ್ ರವರ ಮಾರ್ಗದರ್ಶನದಲ್ಲಿ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಗುಣಪಾಲ ಜೆ ಮತ್ತು ಪಿಎಸ್‌ಐ ಸುಷ್ಮಾ.ಜಿ ಭಂಡಾರಿ ಅವರ ನೇತೃತ್ವದಲ್ಲಿ ತನಿಖೆ ನಡೆಸಲಾಯಿತು.

    ಈ ತನಿಖಾ ತಂಡವು ಪ್ರಕರಣ ಆರೋಪಿಗಳ ಪತ್ತೆಗಾಗಿ ಕೇರಳ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ತನಿಖೆ ನಡೆಸಿ, ಅಂತರ್ ರಾಜ್ಯಗಳಲ್ಲಿ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ದಸ್ತಗಿರಿ ಮಾಡಿದೆ. ಬಂಧಿತರಿಂದ ಕಳ್ಳತನ ಮಾಡಿದ ಓಮ್ನಿ ಕಾರ್ (2.5 ಲಕ್ಷ ರೂ ಅಂದಾಜು ಮೌಲ್ಯ) ಹಾಗೂ ಕಳ್ಳತನ ಮಾಡಲು ಉಪಯೋಗಿಸಿದ ಕೆಟಿಎಂ ಬೈಕ್ ನ್ನು (1 ಲಕ್ಷ ಅಂದಾಜು ಮೌಲ್ಯ) ಸ್ವತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

    ವಿಚಾರಣೆ ವೇಳೆ ಈ ಆರೋಪಿಗಳು ಓಮ್ನಿ ಕಾರ್ ನ್ನು ಕದ್ದು, ಕೇರಳ ರಾಜ್ಯಕ್ಕೆ ತೆಗೆದುಕೊಂಡು ಹೋಗಿರುವುದು, ಕೇರಳದಿಂದ ತಮಿಳುನಾಡು ರಾಜ್ಯಕ್ಕೆ ಮಾರಾಟ ಮಾಡಿರುವುದು ಹಾಗೂ ತಮಿಳುನಾಡಿನಲ್ಲಿ ಈ ಕದ್ದ ವಾಹನವನ್ನು ಆಂಬುಲೆನ್ಸ್ ಆಗಿ ಪರಿವರ್ತಿಸಿರುವುದು ತಿಳಿದುಬಂದಿದೆ.

    ಈ ಆರೋಪಿಗಳ ವಿರುದ್ಧ ಕೇರಳದ ಬದಿಯಡ್ಕ ಪೊಲೀಸ್ ಠಾಣೆ, ವಿದ್ಯಾನಗರ ಪೊಲೀಸ್ ಠಾಣೆ ಗಳಲ್ಲಿ ಈಗಾಗಲೇ ಕಳ್ಳತನ ಪ್ರಕರಣಗಳು ದಾಖಲಾಗಿರುತ್ತದೆ. ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ, ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತಾರೆ.




    #crime #dakshinakannada
    Previous Articleನಿಯಂತ್ರಣ ತಪ್ಪಿ ಟಿಟಿ ಮೇಲೆ ಉರುಳಿದ ಲಾರಿ; ಮೂವರಿಗೆ ಗಂಭೀರ ಗಾಯ
    Next Article ಗಂಗೊಳ್ಳಿ ಅಳಿವೆಯಲ್ಲಿ ಅಲೆಗಳ ಹೊಡೆತಕ್ಕೆ ಪರ್ಸಿನ್ ಬೋಟ್ ಮುಳುಗಡೆ; 27 ಮೀನುಗಾರರ ರಕ್ಷಣೆ

    Related Posts

    ಕೆಲಸದ ನೆಪದಲ್ಲಿ ಮಹಿಳೆ ಕರೆಸಿ ಅಪಹರಣ; ಹಲ್ಲೆ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ

    September 4, 2026

    ಪಣಂಬೂರು ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ; ಓರ್ವ ಪ್ರಯಾಣಿಕನಿಗೆ ಗಾಯ

    September 4, 2026

    ಫ್ರಾಂಚೈಸಿ ಕೊಡಿಸುವುದಾಗಿ ನಂಬಿಸಿ ಸೈಬರ್ ವಂಚನೆ; ಮಹಿಳೆಗೆ ಜೀವ ಬೆದರಿಕೆ

    September 4, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕೆಲಸದ ನೆಪದಲ್ಲಿ ಮಹಿಳೆ ಕರೆಸಿ ಅಪಹರಣ; ಹಲ್ಲೆ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ

    September 4, 2026

    ಪಣಂಬೂರು ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ; ಓರ್ವ ಪ್ರಯಾಣಿಕನಿಗೆ ಗಾಯ

    September 4, 2026

    ಫ್ರಾಂಚೈಸಿ ಕೊಡಿಸುವುದಾಗಿ ನಂಬಿಸಿ ಸೈಬರ್ ವಂಚನೆ; ಮಹಿಳೆಗೆ ಜೀವ ಬೆದರಿಕೆ

    September 4, 2026

    ಟಿಟಿಡಿ ಉಪ ಇಒ ಲೋಕನಾಥಮ್ ನಿವಾಸಗಳ ಮೇಲೆ ಎಸಿಬಿ ದಾಳಿ; ₹5 ಕೋಟಿ ಅಕ್ರಮ ಆಸ್ತಿ ಪತ್ತೆ

    September 4, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕೆಲಸದ ನೆಪದಲ್ಲಿ ಮಹಿಳೆ ಕರೆಸಿ ಅಪಹರಣ; ಹಲ್ಲೆ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ

    September 4, 2026

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.