Close Menu
    What's Hot

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಬೀಗ ಹಾಕಿದ ಮನೆಗಳೇ ಟಾರ್ಗೆಟ್; ಉಡುಪಿಯಲ್ಲಿ ಸರಣಿ ಕಳ್ಳತನ,ಇಬ್ಬರು ಖತರ್ನಾಕ್ ಕಳ್ಳರು ಅರೆಸ್ಟ್
    ಅಪರಾಧ

    ಬೀಗ ಹಾಕಿದ ಮನೆಗಳೇ ಟಾರ್ಗೆಟ್; ಉಡುಪಿಯಲ್ಲಿ ಸರಣಿ ಕಳ್ಳತನ,ಇಬ್ಬರು ಖತರ್ನಾಕ್ ಕಳ್ಳರು ಅರೆಸ್ಟ್

    adminBy adminAugust 28, 2026No Comments2 Mins Read

    ಉಡುಪಿ: ಬೀಗ ಹಾಕಿದ ಮನೆಗಳನ್ನೇ ಗುರಿಯಾಗಿಸಿಕೊಂಡು ಸರಣಿ ಕಳ್ಳತನ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಬಂಧಿತರಿಂದ ಸುಮಾರು 23,56,230 ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಪೆರಂಪಳ್ಳಿ ಕುಂಜಿಬೆಟ್ಟುವಿನ ಅರುಣ್ ಎಸ್.ವಿ. ಅಲಿಯಾಸ್ ಅರುಣ್ ಆಚಾರಿ (43) ಹಾಗೂ ತೆಂಕನಿಡಿಯೂರಿನ ಕೌಶೀಕ್ (19) ಬಂಧಿತ ಆರೋಪಿಗಳು.

    ಪುತ್ತೂರು ಗ್ರಾಮದ ಭಗವತಿ ಲೇಔಟ್ ನಿವಾಸಿ ಸನಂ ಎಂಬುವರು ವಿದೇಶದಲ್ಲಿದ್ದ ಗಂಡನ ಮನೆಗೆ ಬಂದಿದ್ದು, ಆಗಸ್ಟ್ 8ರಂದು ಸಂಬಂಧಿಕರ ಮನೆಗೆ ತೆರಳಿದ್ದರು. ಆಗಸ್ಟ್ 11ರಂದು ವಾಪಸ್ ಬಂದು ನೋಡಿದಾಗ ಮನೆಯ ಟೆರೇಸ್ ಬಾಗಿಲು ಮುರಿದು ಕಪಾಟಿನಲ್ಲಿದ್ದ ವಿದೇಶಿ ಕರೆನ್ಸಿ ಸೇರಿದಂತೆ 2.14 ಲಕ್ಷ ರೂ. ಕಳುವಾಗಿತ್ತು. ಈ ಕುರಿತು ಉಡುಪಿ ನಗರ ಠಾಣೆಯಲ್ಲಿ (ಅಕ್ರ 108/2026) ಪ್ರಕರಣ ದಾಖಲಾಗಿತ್ತು.
    ಉಡುಪಿ ನಗರ ಠಾಣಾ ಪೊಲೀಸ್ ನಿರೀಕ್ಷಕ ಮಹೇಶ ಪ್ರಸಾದ್ ಮಾರ್ಗದರ್ಶನದಲ್ಲಿ, ಉಪನಿರೀಕ್ಷಕ ಪ್ರಕಾಶ್ ನೇತೃತ್ವದ ವಿಶೇಷ ಪಡೆ ಆಗಸ್ಟ್ 23ರಂದು ಪೆರಂಪಳ್ಳಿಯ ಸಂತೋಷ ನಗರದಲ್ಲಿ ಖಚಿತ ಮಾಹಿತಿ ಮೇರೆಗೆ ಆರೋಪಿಗಳನ್ನು ಬಂಧಿಸಿತು.

    ವಶಪಡಿಸಿಕೊಂಡ ಸಾಮಗ್ರಿಗಳು:

    ಚಿನ್ನದ ಆಭರಣಗಳು ಹಾಗೂ ನಾಣ್ಯ: 88.400 ಗ್ರಾಂ ತೂಕದ ಚಿನ್ನ (ಮೌಲ್ಯ ₹13,26,000) ಹಾಗೂ 1.45 ಗ್ರಾಂ ಚಿನ್ನದ ನಾಣ್ಯ (ಮೌಲ್ಯ ₹22,500)

    ಬೆಳ್ಳಿ ಆಭರಣಗಳು: 1 ಕೆಜಿ 360 ಗ್ರಾಂ (ಮೌಲ್ಯ ₹2,86,730)

    ವಿದೇಶಿ ಕರೆನ್ಸಿ ಮತ್ತು ನಗದು: ₹2,00,000 ಮೌಲ್ಯದ ವಿದೇಶಿ ನೋಟುಗಳು ಹಾಗೂ ₹33,000 ನಗದು

    ವಾಹನಗಳು: ಆಟೋರಿಕ್ಷಾ (ಮೌಲ್ಯ ₹4,00,000) ಮತ್ತು ಕೃತ್ಯಕ್ಕೆ ಬಳಸಿದ ಕಳವು ಮಾಡಿದ್ದ ಪಲ್ಸರ್ ಬೈಕ್ (ಮೌಲ್ಯ ₹45,000)

    ಇತರ ಸಾಮಗ್ರಿಗಳು: 2 ಮೊಬೈಲ್ ಫೋನ್‌ಗಳು (₹13,000) ಹಾಗೂ 1 ವಿದೇಶಿ ಕೈಗಡಿಯಾರ (₹30,000)

    ಆರೋಪಿಗಳು ಕಳವು ಮಾಡಿದ ಬೈಕ್‌ನಲ್ಲಿ ತೆರಳಿ ಬೀಗ ಹಾಕಿದ ಮನೆಗಳನ್ನು ಗುರುತಿಸಿ ಕಳ್ಳತನ ಮಾಡುತ್ತಿದ್ದರು. ಉಡುಪಿ ನಗರ ಠಾಣೆಯ 2 ಹಾಗೂ ಮಲ್ಪೆ ಠಾಣಾ ವ್ಯಾಪ್ತಿಯ 3 (ಒಂದು ಬೈಕ್ ಕಳವು ಸೇರಿದಂತೆ) ಒಟ್ಟು 5 ಸರಣಿ ಕಳ್ಳತನ ಪ್ರಕರಣಗಳು ಈ ಬಂಧನದಿಂದ ಬೆಳಕಿಗೆ ಬಂದಿವೆ. ಆರೋಪಿ ಅರುಣ್ ಆಚಾರಿ ಈ ಹಿಂದೆ ಪೋಕ್ಸೋ (POCSO) ಪ್ರಕರಣದಲ್ಲಿ 9 ವರ್ಷ ಜೈಲು ಶಿಕ್ಷೆ ಅನುಭವಿಸಿ, ಜುಲೈ 2025ರಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ ಎನ್ನಲಾಗಿದೆ




    #crime #karnataka
    Previous Articleಮಂಗಳೂರು: ನರ್ಸ್‌ಗೆ ‘ತಲೆ ತೆಗೀತೀನಿ’ ವಾಟ್ಸಾಪ್‌ನಲ್ಲಿ ಕೊಲೆ ಬೆದರಿಕೆ; ದೂರು ನೀಡಿದರೂ ಕ್ರಮವಿಲ್ಲ, ಆರೋಪಿಗೆ ಜಾಮೀನು
    Next Article ಟಾಕ್ಸಿಕ್ ಅಬ್ಬರದ ನಡುವೆಯೂ ‘ಇರುಮುಡಿ’ದೆ ಹವಾ: ಸ್ಟಾರ್‌ಗಳೇ ಫಿದಾ

    Related Posts

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.