Close Menu
    What's Hot

    ಉಡುಪಿಯ ರಶ್ಮಿ ಸಾಮಂತ್‌ಗೆ ರಾಷ್ಟ್ರಮಟ್ಟದ ಹೊಣೆಗಾರಿಕೆ : ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಿಣಿಗೆ ನೇಮಕ

    October 21, 2026

    ಸೌಜನ್ಯ ಪ್ರಕರಣ ಮರುತನಿಖೆ ಚುರುಕು : ಅಪರಾಧ ಸ್ಥಳಕ್ಕೆ ಭೇಟಿ ನೀಡಲಿರುವ ಎಸ್‌ಐಟಿ ತಂಡ

    October 21, 2026

    ಸೌದಿಯಲ್ಲಿ ವಿಮಾನ ಸಂಚಾರ ಅಸ್ತವ್ಯಸ್ತ : ಮಂಗಳೂರು ಕರಾವಳಿಯ ಪ್ರಯಾಣಿಕರಿಗೆ ಸಂಕಷ್ಟ

    October 21, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಕುನಾಲ್ ಕಾಮ್ರಾ ಶೋ ವಿವಾದ: ವೈಟ್‌ಫೀಲ್ಡ್ ಪೊಲೀಸರಿಗೆ ಹೈಕೋರ್ಟ್ ಮತ್ತೆ ತರಾಟೆ; ಎಸಿಪಿ, ಡಿಸಿಪಿಗೆ ಖಡಕ್ ಸೂಚನೆ
    ಅಪರಾಧ

    ಕುನಾಲ್ ಕಾಮ್ರಾ ಶೋ ವಿವಾದ: ವೈಟ್‌ಫೀಲ್ಡ್ ಪೊಲೀಸರಿಗೆ ಹೈಕೋರ್ಟ್ ಮತ್ತೆ ತರಾಟೆ; ಎಸಿಪಿ, ಡಿಸಿಪಿಗೆ ಖಡಕ್ ಸೂಚನೆ

    adminBy adminAugust 29, 2026No Comments1 Min Read

    ಬೆಂಗಳೂರು: ನಗರದ ವೈಟ್‌ಫೀಲ್ಡ್ ಪೊಲೀಸರ ಕಾರ್ಯವೈಖರಿ ಕುರಿತು ಹೈಕೋರ್ಟ್‌ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದು, ಪ್ರಕರಣದ ವಿಚಾರಣೆಗೆ ಎಸಿಪಿ ಹಾಗೂ ಡಿಸಿಪಿ ಖುದ್ದಾಗಿ ಹಾಜರಾಗುವಂತೆ ಸೂಚಿಸಿದೆ. ಅಧಿಕಾರಿಗಳು ವಿಚಾರಣೆಗೆ ಹಾಜರಾಗದಿದ್ದಲ್ಲಿ ಪೊಲೀಸ್‌ ಕಮಿಷನರ್‌ಗೆ ಸಮನ್ಸ್‌ ಜಾರಿಗೊಳಿಸುವುದಾಗಿ ನ್ಯಾಯಾಲಯ ಎಚ್ಚರಿಕೆ ನೀಡಿದೆ.

    ವೈಟ್‌ಫೀಲ್ಡ್‌ನಲ್ಲಿ ಸ್ಟ್ಯಾಂಡ್‌ಅಪ್‌ ಕಾಮಿಡಿಯನ್ ಕುನಾಲ್‌ ಕಾಮ್ರಾ ಅವರ ಕಾರ್ಯಕ್ರಮ ಆಯೋಜನೆಗೊಂಡಿದ್ದ ಸಂದರ್ಭದಲ್ಲಿ, ಶೋ ರದ್ದುಗೊಳಿಸುವಂತೆ ಮೋಹನ್‌ ಗೌಡ ಎಂಬುವರು ವೈಟ್‌ಫೀಲ್ಡ್‌ ಪೊಲೀಸ್‌ ಠಾಣೆಗೆ ಮನವಿ ಸಲ್ಲಿಸಿದ್ದರು. ಮನವಿ ಸಲ್ಲಿಕೆಯ ಬಳಿಕ ಕಾರ್ಯಕ್ರಮ ರದ್ದುಗೊಂಡಿತ್ತು.

    ಶೋ ರದ್ದಾದ ವಿಚಾರವನ್ನು ಮೋಹನ್‌ ಗೌಡ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡುವ ಮೂಲಕ ಸಂತಸ ವ್ಯಕ್ತಪಡಿಸಿದ್ದರು. ಆದರೆ, ಇದೇ ಪೋಸ್ಟ್‌ ಆಧರಿಸಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪದಡಿ ಅವರ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು.

    ಈ ಎಫ್‌ಐಆರ್‌ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ವೇಳೆ ವೈಟ್‌ಫೀಲ್ಡ್‌ ಪೊಲೀಸರ ಕ್ರಮಗಳ ಬಗ್ಗೆ ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಡೆಯಲಿರುವ ವಿಚಾರಣೆಗೆ ಎಸಿಪಿ ಹಾಗೂ ಡಿಸಿಪಿ ಖುದ್ದಾಗಿ ಹಾಜರಾಗಬೇಕು ಎಂದು ನ್ಯಾಯಾಲಯ ಸೂಚಿಸಿದೆ.

    ಅಧಿಕಾರಿಗಳು ಖುದ್ದು ಹಾಜರಾಗದಿದ್ದರೆ ಪೊಲೀಸ್‌ ಕಮಿಷನರ್‌ ಅವರಿಗೆ ಸಮನ್ಸ್‌ ನೀಡುವ ಎಚ್ಚರಿಕೆಯನ್ನೂ ನ್ಯಾಯಾಲಯ ನೀಡಿದೆ. ಹೀಗಾಗಿ, ಮೋಹನ್‌ ಗೌಡ ವಿರುದ್ಧದ ಎಫ್‌ಐಆರ್‌ ಹಾಗೂ ಪೊಲೀಸರು ಕೈಗೊಂಡಿರುವ ಕ್ರಮಗಳ ಕುರಿತು ಮುಂದಿನ ವಿಚಾರಣೆಯಲ್ಲಿ ನ್ಯಾಯಾಲಯ ಯಾವ ನಿಲುವು ತೆಗೆದುಕೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.

     




    #crime #karnataka
    Previous Articleಚಲಿಸುತ್ತಿದ್ದ ಬಸ್ ಹತ್ತುವಾಗ ಆಯತಪ್ಪಿದ ವೃದ್ಧ; ಸಮಯಪ್ರಜ್ಞೆಯಿಂದ ರಕ್ಷಿಸಿದ ಕ್ಲೀನರ್
    Next Article ಮಂಗಳೂರು: 8 ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಅರೆಸ್ಟ್

    Related Posts

    ಉಡುಪಿಯ ರಶ್ಮಿ ಸಾಮಂತ್‌ಗೆ ರಾಷ್ಟ್ರಮಟ್ಟದ ಹೊಣೆಗಾರಿಕೆ : ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಿಣಿಗೆ ನೇಮಕ

    October 21, 2026

    ಸೌಜನ್ಯ ಪ್ರಕರಣ ಮರುತನಿಖೆ ಚುರುಕು : ಅಪರಾಧ ಸ್ಥಳಕ್ಕೆ ಭೇಟಿ ನೀಡಲಿರುವ ಎಸ್‌ಐಟಿ ತಂಡ

    October 21, 2026

    “ಅವರೇ ಪಾಕಿಸ್ತಾನದ ಜೊತೆ ನಂಟು ಬೆಳೆಸುತ್ತಿದ್ದಾರೆ” : ಆರ್‌ಎಸ್‌ಎಸ್‌ ವಿರುದ್ಧ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ

    October 21, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಉಡುಪಿಯ ರಶ್ಮಿ ಸಾಮಂತ್‌ಗೆ ರಾಷ್ಟ್ರಮಟ್ಟದ ಹೊಣೆಗಾರಿಕೆ : ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಿಣಿಗೆ ನೇಮಕ

    October 21, 2026

    ಸೌಜನ್ಯ ಪ್ರಕರಣ ಮರುತನಿಖೆ ಚುರುಕು : ಅಪರಾಧ ಸ್ಥಳಕ್ಕೆ ಭೇಟಿ ನೀಡಲಿರುವ ಎಸ್‌ಐಟಿ ತಂಡ

    October 21, 2026

    ಸೌದಿಯಲ್ಲಿ ವಿಮಾನ ಸಂಚಾರ ಅಸ್ತವ್ಯಸ್ತ : ಮಂಗಳೂರು ಕರಾವಳಿಯ ಪ್ರಯಾಣಿಕರಿಗೆ ಸಂಕಷ್ಟ

    October 21, 2026

    ಎಸ್‌ಬಿಐ ಗ್ರಾಹಕರಿಗೆ ಶಾಕ್ : ಡಾರ್ಕ್ ವೆಬ್‌ನಲ್ಲಿ ಸಾವಿರಾರು ಗ್ರಾಹಕರ ವೈಯಕ್ತಿಕ ಮಾಹಿತಿ ಸೋರಿಕೆ

    October 21, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    “ಅವರೇ ಪಾಕಿಸ್ತಾನದ ಜೊತೆ ನಂಟು ಬೆಳೆಸುತ್ತಿದ್ದಾರೆ” : ಆರ್‌ಎಸ್‌ಎಸ್‌ ವಿರುದ್ಧ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ

    October 21, 2026

    ಬೀಡಿ ಹಚ್ಚಲು ಕಡ್ಡಿ ಗೀರಿದಾಗ ಸಿಲಿಂಡರ್ ಸ್ಫೋಟ; 6 ಜನ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ

    October 19, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.