Close Menu
    What's Hot

    ಎಸ್‌ಬಿಐ ಗ್ರಾಹಕರಿಗೆ ಶಾಕ್ : ಡಾರ್ಕ್ ವೆಬ್‌ನಲ್ಲಿ ಸಾವಿರಾರು ಗ್ರಾಹಕರ ವೈಯಕ್ತಿಕ ಮಾಹಿತಿ ಸೋರಿಕೆ

    October 21, 2026

    “ಅವರೇ ಪಾಕಿಸ್ತಾನದ ಜೊತೆ ನಂಟು ಬೆಳೆಸುತ್ತಿದ್ದಾರೆ” : ಆರ್‌ಎಸ್‌ಎಸ್‌ ವಿರುದ್ಧ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ

    October 21, 2026

    ದೆಹಲಿಯ ದಸರಾ ಆಚರಣೆಯಲ್ಲಿ ಹೊಸ ವಿವಾದ : ರಾವಣನ ಜೊತೆ ಜಿರಳೆ ಪ್ರತಿಕೃತಿ ದಹನಕ್ಕೆ ಆಕ್ಷೇಪ

    October 21, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಮರಣೋತ್ತರ ಪರೀಕ್ಷೆಯಲ್ಲಿ ವೈದ್ಯರಿಗೇ ಶಾಕ್; ಯುವಕನ ಹೊಟ್ಟೆಯಲ್ಲಿ ಲೈಟರ್, ಬ್ಯಾಟರಿ ಸೆಲ್, ಕೀಗಳು ಪತ್ತೆ
    ಕರ್ನಾಟಕ

    ಮರಣೋತ್ತರ ಪರೀಕ್ಷೆಯಲ್ಲಿ ವೈದ್ಯರಿಗೇ ಶಾಕ್; ಯುವಕನ ಹೊಟ್ಟೆಯಲ್ಲಿ ಲೈಟರ್, ಬ್ಯಾಟರಿ ಸೆಲ್, ಕೀಗಳು ಪತ್ತೆ

    adminBy adminAugust 31, 2026No Comments1 Min Read

    ಚಿಕ್ಕಬಳ್ಳಾಪುರ: ಅನುಮಾನಾಸ್ಪದವಾಗಿ ಮೃತಪಟ್ಟ ಯುವಕನ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರೇ ಬೆಚ್ಚಿಬಿದ್ದ ಘಟನೆಯೊಂದು ಚಿಕ್ಕಬಳ್ಳಾಪುರ  ತಾಲೂಕಿನ ಗುಡಿಬಂಡೆ ಪಟ್ಟಣದಲ್ಲಿ ನಡೆದಿದೆ. ಮೃತನ ಹೊಟ್ಟೆಯನ್ನು ಪರಿಶೀಲಿಸಿದಾಗ ಲೈಟರ್, ಬ್ಯಾಟರಿ ಸೆಲ್, ಬೀಗದ ಕೀಗಳು ಸೇರಿದಂತೆ ಹಲವು ಅಪಾಯಕಾರಿ ಲೋಹದ ವಸ್ತುಗಳು ಪತ್ತೆಯಾಗಿವೆ. ಸದ್ಯ ಈ ಘಟನೆ ಅಚ್ಚರಿಗೂ ಕಾರಣವಾಗಿದ್ದು, ಯುವಕನ ಸಾವಿನ ಸುತ್ತ ಹತ್ತಾರು ಅನುಮಾನಗಳು ಹುಟ್ಟಿಕೊಂಡಿವೆ.

    ನಡೆದಿದ್ದೇನು?

    ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಬಾಪೂಜಿನಗರದಲ್ಲಿ 28 ವರ್ಷದ ಮಹೇಶ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಮೂಲತಃ ಚಿಕ್ಕಬಳ್ಳಾಪುರ ತಾಲೂಕಿನ ನಲ್ಲಕದಿರೇನಹಳ್ಳಿ ಗ್ರಾಮದ ನಿವಾಸಿಯಾಗಿರುವ ಮಹೇಶ್, ಕಳೆದ ಕೆಲವು ದಿನಗಳಿಂದ ಅಕ್ಕನ ಮನೆಯಲ್ಲಿ ವಾಸವಾಗಿದ್ದ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಂದರೆ ನಿನ್ನೆ ಮಹೇಶ್​ ನೇಣು ಬಿಗಿದುಕೊಂಡಿದ್ದಾನೆ ಎನ್ನಲಾಗಿದೆ. ಆದರೆ ಮೃತದೇಹ ನೆಲದ ಮೇಲೆ ಪತ್ತೆಯಾಗಿರುವುದು ಪೊಲೀಸರ ಅನುಮಾನಕ್ಕೆ ಕಾರಣವಾಗಿದೆ. ಹೀಗಾಗಿ ಯುವಕನ ಸಾವು ಆತ್ಮಹತ್ಯೆಯೋ ಅಥವಾ ಬೇರೆ ಏನಾದರೂ ನಡೆದಿದೆಯೋ ಎನ್ನುವ ಕುರಿತು ಮರಣೋತ್ತರ ಪರೀಕ್ಷೆಗೆ ಗುಡಿಬಂಡೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

    ಹೊಟ್ಟೆಯಲ್ಲಿತ್ತು ವಸ್ತುಗಳ ಸಂತೆ!

    ವೈದ್ಯರು ಮರಣೋತ್ತರ ಪರೀಕ್ಷೆ ವೇಳೆ ಮೃತನ ಹೊಟ್ಟೆಯಲ್ಲಿ ಲೈಟರ್, ಬ್ಯಾಟರಿ ಸೆಲ್, ಬೀಗದ ಕೀಗಳು, ಹೇರ್ ಪಿನ್, ಔಷಧಿ ಟ್ಯೂಬ್‌ಗಳು, ಕಬ್ಬಿಣದ ಚೂರುಗಳು ಪತ್ತೆಯಾಗಿದ್ದು, ವೈದ್ಯರೇ ಶಾಕ್​ ಆಗಿದ್ದಾರೆ. ಯುವಕನ ಹೊಟ್ಟೆಯಲ್ಲಿದ್ದ ವಸ್ತುಗಳನ್ನು ಆಚೆ ತೆಗೆಯಲಾಗಿದೆ. ಇಷ್ಟೊಂದು ವಸ್ತುಗಳು ಒಬ್ಬ ವ್ಯಕ್ತಿಯ ಹೊಟ್ಟೆಯೊಳೆಗೆ ಹೇಗೆ ಸೇರಿದವು? ಇದು ಆತ್ಮಹತ್ಯೆನಾ ಅಥವಾ ಬೇರೆ ಯಾವುದಾದರೂ ರಹಸ್ಯವಿದೆಯಾ ಎಂದು ಪೊಲೀಸರು ತನಿಖೆ ನಡೆಸಿದ್ದಾರೆ.

    ಮತ್ತೊಂದೆಡೆ ಮೃತ ಮಹೇಶ್‌ಗೆ ಸಾಲದ ಸಮಸ್ಯೆ ಇತ್ತು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಈ ಹಿಂದೆಯೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಆದರೆ ಇದೀಗ ಪತ್ತೆಯಾದ ವಸ್ತುಗಳು ಯಾವಾಗ, ಹೇಗೆ ಹೊಟ್ಟೆಯೊಳಗೆ ಸೇರಿದವು. ಆತ ಯಾವತ್ತು ತಮ್ಮ ಎದುರುಗಡೆ ವಸ್ತುಗಳನ್ನು ನುಂಗಿರಲಿಲ್ಲ ಎನ್ನುತ್ತಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಗುಡಿಬಂಡೆ ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿದ್ದಾರೆ. ಯುವಕನ ಸಾವಿನ ರಹಸ್ಯ ಬಯಲಾಗುತ್ತಾ ಕಾದು ನೋಡಬೇಕು.




    #karnataka
    Previous Articleಸೊಲ್ಲಾಪುರ–ಧಾರವಾಡ ರೈಲಿನಲ್ಲಿ ಅರೆಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ; ಅತ್ಯಾಚಾರ, ಕೊಲೆಯ ಶಂಕೆ
    Next Article ಪಿಡಿಒ ದಂಪತಿಯ ಮನೆಗೆ ಕನ್ನ; 1.42 ಕೋಟಿ ರೂ. ಮೌಲ್ಯದ ಚಿನ್ನ, ಬೆಳ್ಳಿ, ನಗದು ದೋಚಿ ಪರಾರಿ

    Related Posts

    “ಅವರೇ ಪಾಕಿಸ್ತಾನದ ಜೊತೆ ನಂಟು ಬೆಳೆಸುತ್ತಿದ್ದಾರೆ” : ಆರ್‌ಎಸ್‌ಎಸ್‌ ವಿರುದ್ಧ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ

    October 21, 2026

    ಬೀಡಿ ಹಚ್ಚಲು ಕಡ್ಡಿ ಗೀರಿದಾಗ ಸಿಲಿಂಡರ್ ಸ್ಫೋಟ; 6 ಜನ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ

    October 19, 2026

    ಟ್ರಾಲಿ ಬ್ಯಾಗ್‌ಗಳಲ್ಲಿ ನಕಲಿ ಸಿಗರೇಟ್ ಸಾಗಾಟ : ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ

    October 19, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಎಸ್‌ಬಿಐ ಗ್ರಾಹಕರಿಗೆ ಶಾಕ್ : ಡಾರ್ಕ್ ವೆಬ್‌ನಲ್ಲಿ ಸಾವಿರಾರು ಗ್ರಾಹಕರ ವೈಯಕ್ತಿಕ ಮಾಹಿತಿ ಸೋರಿಕೆ

    October 21, 2026

    “ಅವರೇ ಪಾಕಿಸ್ತಾನದ ಜೊತೆ ನಂಟು ಬೆಳೆಸುತ್ತಿದ್ದಾರೆ” : ಆರ್‌ಎಸ್‌ಎಸ್‌ ವಿರುದ್ಧ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ

    October 21, 2026

    ದೆಹಲಿಯ ದಸರಾ ಆಚರಣೆಯಲ್ಲಿ ಹೊಸ ವಿವಾದ : ರಾವಣನ ಜೊತೆ ಜಿರಳೆ ಪ್ರತಿಕೃತಿ ದಹನಕ್ಕೆ ಆಕ್ಷೇಪ

    October 21, 2026

    ಫೇಸ್‌ಬುಕ್ ಜಾಹೀರಾತು ನಂಬಿ ಎಪಿಕೆ ಫೈಲ್ ಡೌನ್‌ಲೋಡ್ : ವ್ಯಕ್ತಿಯ ಬ್ಯಾಂಕ್ ಖಾತೆಯಿಂದ ₹1.78 ಲಕ್ಷ ಮಾಯ

    October 21, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    “ಅವರೇ ಪಾಕಿಸ್ತಾನದ ಜೊತೆ ನಂಟು ಬೆಳೆಸುತ್ತಿದ್ದಾರೆ” : ಆರ್‌ಎಸ್‌ಎಸ್‌ ವಿರುದ್ಧ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ

    October 21, 2026

    ಬೀಡಿ ಹಚ್ಚಲು ಕಡ್ಡಿ ಗೀರಿದಾಗ ಸಿಲಿಂಡರ್ ಸ್ಫೋಟ; 6 ಜನ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ

    October 19, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.