Close Menu
    What's Hot

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»KRIDL ಕಮಿಷನ್ ದಂಧೆ ಆರೋಪ: ಅಧಿಕಾರಿಗಳ ವಿರುದ್ಧ ಸಿಎಂಗೆ ದೂರು ನೀಡಿದ ಶಾಸಕ ಅಶೋಕ್ ರೈ
    ಕರಾವಳಿ ಸುದ್ದಿ

    KRIDL ಕಮಿಷನ್ ದಂಧೆ ಆರೋಪ: ಅಧಿಕಾರಿಗಳ ವಿರುದ್ಧ ಸಿಎಂಗೆ ದೂರು ನೀಡಿದ ಶಾಸಕ ಅಶೋಕ್ ರೈ

    adminBy adminSeptember 1, 2026No Comments2 Mins Read

    ಮಂಗಳೂರು: ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (KRIDL) ಮಂಗಳೂರು ವಿಭಾಗದ ಅಧಿಕಾರಿಗಳು ಸರ್ಕಾರದ ವಿವಿಧ ಅಭಿವೃದ್ಧಿ ಕಾಮಗಾರಿ ನಡೆಸುವ ಗುತ್ತಿಗೆದಾರರಿಂದ ಶೇ. 7ರಷ್ಟು ಹೆಚ್ಚುವರಿ ಕಮಿಷನ್‌ಗೆ ಪಟ್ಟುಹಿಡಿದು ಕಿರುಕುಳ ನೀಡುತ್ತಿದ್ದಾರೆ ಎಂದು ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಆರೋಪಿಸಿದ್ದಾರೆ.

    ಈ ಕುರಿತು ತಕ್ಷಣವೇ ಸಮಗ್ರ ತನಿಖೆ ನಡೆಸಿ, ಭ್ರಷ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಿಮಿನಲ್ ಹಾಗೂ ಶಿಸ್ತುಕ್ರಮ ಕೈಗೊಳ್ಳುವಂತೆ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
    ಕೆಆರ್‌ಐಡಿಎಲ್ ಮಂಗಳೂರು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ವಿಜಯ್ ಮತ್ತು ಜೂನಿಯರ್ ಇಂಜಿನಿಯರ್ ಪ್ರಜ್ವಲ್ ಎಂಬುವವರು ಗುತ್ತಿಗೆದಾರರಿಂದ ಲಂಚಕ್ಕೆ ಬೇಡಿಕೆಯಿಡುತ್ತಿದ್ದಾರೆ ಎಂದು ಪತ್ರದಲ್ಲಿ ನೇರವಾಗಿ ಉಲ್ಲೇಖಿಸಲಾಗಿದೆ. “ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಹೆಸರಿನಲ್ಲಿ ಇಂಜಿನಿಯರ್‌ಗಳು ಮಾಸಿಕ ಪಾವತಿಗಳನ್ನು (Monthly cuts) ವಸೂಲಿ ಮಾಡುತ್ತಿದ್ದಾರೆ. ಲಂಚ ನೀಡಲು ನಿರಾಕರಿಸಿದ ಅಥವಾ ಪ್ರಶ್ನಿಸಿದ ಗುತ್ತಿಗೆದಾರರಿಗೆ ಬೆದರಿಕೆ ಹಾಕಿ ಕಿರುಕುಳ ನೀಡುತ್ತಿದ್ದಾರೆ,” ಎಂದು ಶಾಸಕರು ಕಳವಳ ವ್ಯಕ್ತಪಡಿಸಿದ್ದಾರೆ.

    ಸಾರ್ವಜನಿಕ ನಿಧಿಯ ದುರುಪಯೋಗವು ಇಲಾಖೆಯ ಘನತೆಗೆ ಕುಂದು ತರುವುದಲ್ಲದೆ ಸರ್ಕಾರದ ಮೇಲಿನ ಜನರ ವಿಶ್ವಾಸವನ್ನು ದುರ್ಬಲಗೊಳಿಸುತ್ತದೆ. ಸರ್ಕಾರಿ ಕಾಮಗಾರಿಗಳಲ್ಲಿ ಪಾರದರ್ಶಕತೆ, ಕಟ್ಟುನಿಟ್ಟಿನ ನಿಯಮ ಪಾಲನೆ ಮತ್ತು ಗುಣಮಟ್ಟ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ,” ಎಂದು ರೈ ಪ್ರತಿಪಾದಿಸಿದ್ದಾರೆ. ಆರೋಪ ಎದುರಿಸುತ್ತಿರುವ ಅಧಿಕಾರಿಗಳನ್ನು ತಕ್ಷಣವೇ ಸೇವೆಯಿಂದ ಅಮಾನತುಗೊಳಿಸಬೇಕು, ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಮತ್ತು ಗುತ್ತಿಗೆದಾರರಿಂದ ಕಾನೂನುಬಾಹಿರವಾಗಿ ಸಂಗ್ರಹಿಸಲಾದ ಹಣವನ್ನು ವಸೂಲಿ ಮಾಡಬೇಕು ಎಂದು ಶಾಸಕ ಅಶೋಕ್ ಕುಮಾರ್ ರೈ ಒತ್ತಾಯಿಸಿದ್ದಾರೆ.

    ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (KRIDL) ಸಂಸ್ಥೆಯಲ್ಲಿ ನಡೆಯುತ್ತಿರುವ ಕಮಿಷನ್ ದಂದೆ ಕುರಿತು ಮುಖ್ಯಮಂತ್ರಿಗಳಿಗೆ ದೂರು ಪತ್ರ ಬರೆದಿರುವುದು ನಿಜ ಎಂದು ಪುತ್ತೂರು ಶಾಸಕ ಅಶೋಕ್ ರೈ ಸ್ಪಷ್ಟಪಡಿಸಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ತಮ್ಮ ಪತ್ರದ ಕುರಿತು ಉದ್ಭವಿಸಿರುವ ಚರ್ಚೆಗಳಿಗೆ ಸ್ಪಷ್ಟನೆ ನೀಡಿದರು.
    “ನಾನು ಮುಖ್ಯಮಂತ್ರಿಗಳಿಗೆ ದೂರು ಪತ್ರ ನೀಡಿರುವುದು ನಿಜ. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೂ ಈ ಕಮಿಷನ್ ದಂದೆ ಇತ್ತು. ಭ್ರಷ್ಟಾಚಾರ ಎಂಬುದು ಎಲ್ಲಾ ಸರ್ಕಾರಗಳ ಅವಧಿಯಲ್ಲೂ ಇದೆ. ವಿಚಾರವನ್ನು ಸರ್ಕಾರದ ಗಮನಕ್ಕೆ ತಂದು ನಾನು ಶಾಸಕನಾಗಿ ನನ್ನ ಕರ್ತವ್ಯ ಮಾಡಿದ್ದೇನೆ.”
    — ಅಶೋಕ್ ರೈ, ಪುತ್ತೂರು ಶಾಸಕ




    #dakshinakannada
    Previous Articleಆಡಿಯೋ ವೈರಲ್ ಬೆನ್ನಲ್ಲೇ ಬಿಗ್ ಆ್ಯಕ್ಷನ್: ಎಸ್‌ಐಟಿ ಸಬ್ ಇನ್ಸ್‌ಪೆಕ್ಟರ್ ವಿನೋದ್ ರೆಡ್ಡಿ ಅಮಾನತು
    Next Article ಮಂಗಳೂರಿನಿಂದ ಮೀನುಗಾರಿಕೆಗೆ ತೆರಳಿದ್ದ ಯುವಕ ಸಮುದ್ರಕ್ಕೆ ಬಿದ್ದು ನಾಪತ್ತೆ

    Related Posts

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ಯತೀಶ್ ಪೆರುವಾಯಿ ಗಡಿಪಾರು ಪ್ರಕ್ರಿಯೆ ಕೈಬಿಡಲು ಅಧಿಕಾರಿಗಳ ಆದೇಶ

    September 2, 2026

    ಕುತ್ತಾರು ‘ಸೌಹಾರ್ದ ವೃತ್ತ’  ವಿವಾದಕ್ಕೆ ತೆರೆ: ಕೊರಗಜ್ಜನ ಮುಟ್ಟಾಲೆ–ದಂಟೆ ವಿಶೇಷ ಆಕರ್ಷಣೆಯೊಂದಿಗೆ ಲೋಕಾರ್ಪಣೆ

    September 2, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.