Close Menu
    What's Hot

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ರೆಸಾರ್ಟ್‌ಗಳಲ್ಲಿ ಪರೀಕ್ಷೆ, ಕೋಟ್ಯಂತರ ಹಣದ ಡೀಲ್: KPSC ಹಗರಣದ ತನಿಖೆಯಲ್ಲಿ ಬಿಗ್ ಟ್ವಿಸ್ಟ್
    ಅಪರಾಧ

    ರೆಸಾರ್ಟ್‌ಗಳಲ್ಲಿ ಪರೀಕ್ಷೆ, ಕೋಟ್ಯಂತರ ಹಣದ ಡೀಲ್: KPSC ಹಗರಣದ ತನಿಖೆಯಲ್ಲಿ ಬಿಗ್ ಟ್ವಿಸ್ಟ್

    adminBy adminSeptember 1, 2026No Comments2 Mins Read

    ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯ ಬೃಹತ್ ಅಕ್ರಮ ಪ್ರಕರಣದ ತನಿಖೆಯನ್ನು ಸಿಐಡಿ  ತೀವ್ರಗೊಳಿಸಿದ್ದು, ಸ್ಫೋಟಕ ವಿಚಾರಗಳು ಹೊರಬಿದ್ದಿವೆ. ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಪರೀಕ್ಷಾ ನಿಯಂತ್ರಕ, ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ (A5) ಹಾಗೂ ಮಧ್ಯವರ್ತಿ ಬಸವರಾಜ ಕನ್ನಾಳೆಯನ್ನು ಸಿಐಡಿ ಬಂಧಿಸಿದ್ದು, ನ್ಯಾಯಾಲಯವು ಆರೋಪಿಗಳನ್ನು 10 ದಿನಗಳ ಕಾಲ ಸಿಐಡಿ ಕಸ್ಟಡಿಗೆ ಒಪ್ಪಿಸಿದೆ.

    ಸ್ನೇಹದ ದುರ್ಬಳಕೆ ಹಾಗೂ ಕೋಟಿ ಕೋಟಿ ಡೀಲ್

    ಬೀದರ್‌ನ ಭಾಲ್ಕಿಯಲ್ಲಿ ಕೆಲಸ ಮಾಡುತ್ತಿದ್ದ ಸಮಯದಿಂದಲೂ ಜ್ಞಾನೇಂದ್ರ ಹಾಗೂ ಬಸವರಾಜ್ ಕನ್ನಾಳೆ ನಡುವೆ ಆಪ್ತ ಸ್ನೇಹವಿತ್ತು. ‘ನಾನು ಮುಂದೆ ರಾಜಕೀಯ ನಾಯಕರ ನಂಟಿನಿಂದ ಎಂಎಲ್‌ಎ ಆಗುತ್ತೇನೆ, ನಮಗೆ ಹಣದ ಅಗತ್ಯವಿದೆ’ ಎಂದು ಆಮಿಷವೊಡ್ಡಿದ್ದ ಬಸವರಾಜ್, ಜ್ಞಾನೇಂದ್ರನಿಂದ ಪರೀಕ್ಷಾ ಪ್ರಶ್ನೆಪತ್ರಿಕೆಗಳನ್ನು ಪಡೆದುಕೊಂಡಿದ್ದ. ಬಳಿಕ, ಪ್ರತಿ ಹುದ್ದೆಗೆ 40 ಲಕ್ಷದಿಂದ 80 ಲಕ್ಷ ರೂ.ವರೆಗೆ ಬೇಡಿಕೆಯಿಟ್ಟು 29ಕ್ಕೂ ಹೆಚ್ಚು ಅಭ್ಯರ್ಥಿಗಳಿಂದ ಕೋಟ್ಯಂತರ ರೂಪಾಯಿ ಮುಂಗಡ ಹಣ ವಸೂಲಿ ಮಾಡಿ ಪೇಪರ್ ಲೀಕ್ ಮಾಡಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ.

    ರೆಸಾರ್ಟ್‌ಗಳಲ್ಲಿ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳು

    ಬೆಂಗಳೂರಿನ ರಾಜಾಜಿನಗರದ ಕಚೇರಿಯೊಂದರಲ್ಲಿ ಡೀಲ್ ಕುದುರಿಸಿ, ವಾಟ್ಸಾಪ್ ಮೂಲಕ ಮುಂಗಡ ಹಣ ಪಡೆದು ಪರೀಕ್ಷೆಗೂ ಮುನ್ನವೇ ಪ್ರಶ್ನೆಪತ್ರಿಕೆ ನೀಡಲಾಗಿತ್ತು. ಸಾಮಾನ್ಯ ಪರೀಕ್ಷಾ ಕೇಂದ್ರಗಳ ಬದಲಿಗೆ ಬೆಂಗಳೂರು, ತುಮಕೂರಿನ ದೇವರಾಯನದುರ್ಗ ಹಾಗೂ ಆಂಧ್ರಪ್ರದೇಶದ ರೆಸಾರ್ಟ್‌ಗಳಲ್ಲಿ ಅಭ್ಯರ್ಥಿಗಳನ್ನು ಕೂರಿಸಿ ಪರೀಕ್ಷೆ ಬರೆಸಲಾಗಿತ್ತು ಎಂಬ ಸತ್ಯ ತನಿಖೆಯಲ್ಲಿ ಹೊರಬಿದ್ದಿದೆ.

    ಸಾಕ್ಷಿ ಹೇಳಲು ಅಭ್ಯರ್ಥಿಗಳು ಮುಂದು

    ಪ್ರಕರಣದಲ್ಲಿ ಸಿಐಡಿ ವಿಚಾರಣೆ ಚುರುಕುಗೊಳಿಸುತ್ತಿದ್ದಂತೆ, ಸುಹೇಲ್ ಸೇರಿದಂತೆ ಒಟ್ಟು 10 ಅಭ್ಯರ್ಥಿಗಳು ತಮ್ಮ ತಪ್ಪೊಪ್ಪಿಗೆ ಹೇಳಿಕೆ ನೀಡಿ ‘ಅಪ್ರೂವರ್’ (ಸಾಕ್ಷಿ) ಆಗಲು ಮುಂದಾಗಿದ್ದಾರೆ. ಈಗಾಗಲೇ 6 ಅಭ್ಯರ್ಥಿಗಳ ಹೇಳಿಕೆ ದಾಖಲಾಗಿದ್ದು, ಇವರನ್ನು ಅಪ್ರೂವರ್ ಮಾಡಿಕೊಳ್ಳುವ ಬಗ್ಗೆ ಸಿಐಡಿ ಕಾನೂನು ತಜ್ಞರ ಸಲಹೆ ಪಡೆಯುತ್ತಿದೆ.

    ಸಿಐಡಿ ಸಲ್ಲಿಸಿರುವ ರಿಮಾಂಡ್ ಅರ್ಜಿಯಲ್ಲಿ KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು A1, ಆಯೋಗದ ಸದಸ್ಯರನ್ನು A2, ಅಧಿಕಾರಿಗಳನ್ನು A3, 29 ಅಭ್ಯರ್ಥಿಗಳನ್ನು A4 ಹಾಗೂ ಜ್ಞಾನೇಂದ್ರ ಕುಮಾರ್ ಅವರನ್ನು A5 ಎಂದು ಉಲ್ಲೇಖಿಸಲಾಗಿದೆ. ಸದ್ಯ ಬ್ಯಾಂಕ್ ಖಾತೆಗಳು, ಮೊಬೈಲ್ ಸಾಧನಗಳ ಡಿಜಿಟಲ್ ಪುರಾವೆಗಳ ಪರಿಶೀಲನೆ ನಡೆಯುತ್ತಿದೆ.

     




    #crime #karnataka
    Previous Articleಕಾಫಿ ಎಸ್ಟೇಟ್‌ಗೆ ಬಂದೂಕು ಹಿಡಿದು ತೆರಳಿದ್ದ ರೈತ ಶವವಾಗಿ ಪತ್ತೆ
    Next Article ಓಣಂ ಆಚರಿಸಲು ತಾಯಿಯ ಬಳಿಗೆ ಹೋಗಿದ್ದ ಬಾಲಕನ ದಾರುಣ ಅಂತ್ಯ

    Related Posts

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026

    ಉಡುಪಿ: ಪಡಿತರ ಅಕ್ಕಿ ವಿಚಾರದಲ್ಲಿ ಅವಾಚ್ಯ ನಿಂದನೆ, ಕೊಲೆ ಬೆದರಿಕೆ; ಮೂವರು ಆರೋಪಿಗಳ ಬಂಧನ

    September 3, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.