Close Menu
    What's Hot

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»KRIDL ಕಮಿಷನ್ ಆರೋಪಕ್ಕೆ ಸಚಿವ ಖಂಡ್ರೆ ಆ್ಯಕ್ಷನ್: ‘ಇದು ಭ್ರಷ್ಟಾಚಾರವಲ್ಲ, ನಿಯಮ’ ಎಂದ ಅಧಿಕಾರಿಗಳು
    ಕರಾವಳಿ ಸುದ್ದಿ

    KRIDL ಕಮಿಷನ್ ಆರೋಪಕ್ಕೆ ಸಚಿವ ಖಂಡ್ರೆ ಆ್ಯಕ್ಷನ್: ‘ಇದು ಭ್ರಷ್ಟಾಚಾರವಲ್ಲ, ನಿಯಮ’ ಎಂದ ಅಧಿಕಾರಿಗಳು

    adminBy adminSeptember 1, 2026No Comments2 Mins Read

    ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ (ಕೆಆರ್‌ಐಡಿಎಲ್) ಸಂಸ್ಥೆಯ ಇಂಜಿನಿಯರ್‌ಗಳು ಉಸ್ತುವಾರಿ ಸಚಿವರ ಹೆಸರಿನಲ್ಲಿ ಕಮಿಷನ್ ಪಡೆಯುತ್ತಿದ್ದಾರೆ ಎಂಬ ಪುತ್ತೂರು ಶಾಸಕ ಅಶೋಕ್ ರೈ ಅವರ ಆರೋಪವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಈಶ್ವರ ಬಿ. ಖಂಡ್ರೆ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಿದ್ದಾರೆ.

    ಉಸ್ತುವಾರಿ ಸಚಿವರು ಅಥವಾ ಇಲಾಖೆಯ ಸಚಿವರ ಹೆಸರಿನಲ್ಲಿ ಇಲಾಖೆಯ ಸಿಬ್ಬಂದಿ ಅಥವಾ ಅಧಿಕಾರಿಗಳು ಹಣ ವಸೂಲಿ ಮಾಡಿರುವುದು ಸಾಬೀತಾದರೆ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.

    ಮಂಗಳೂರು ಕೆಆರ್‌ಐಡಿಎಲ್‌ನ ಕಾರ್ಯನಿರ್ವಾಹಕ ಇಂಜಿನಿಯರ್ ಮತ್ತು ಕಿರಿಯ ಇಂಜಿನಿಯರ್ ವಿರುದ್ಧದ ಭ್ರಷ್ಟಾಚಾರ ಆರೋಪಗಳಲ್ಲಿ ಸತ್ಯಾಂಶವಿದೆಯೇ ಎಂಬುದನ್ನು ಪರಿಶೀಲಿಸಲು ಸೂಪರಿಂಟೆಂಡೆಂಟ್ ಇಂಜಿನಿಯರ್ ದರ್ಜೆಯ ಅಧಿಕಾರಿಯ ನೇತೃತ್ವದಲ್ಲಿ ತ್ರಿಸದಸ್ಯ ತನಿಖಾ ತಂಡ ರಚಿಸಲಾಗಿದೆ. ಆರೋಪ ಸತ್ಯವೆಂದು ಕಂಡುಬಂದರೆ ಶಿಸ್ತು ಕ್ರಮಕ್ಕೆ ಶಿಫಾರಸು ಸೇರಿದಂತೆ ಏಳು ದಿನಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.

    ಇದೇ ವೇಳೆ, ಕೆಆರ್‌ಐಡಿಎಲ್ ವ್ಯವಸ್ಥಾಪಕ ನಿರ್ದೇಶಕರು ಕಮಿಷನ್ ಆರೋಪದ ಕುರಿತು ಸ್ಪಷ್ಟನೆ ನೀಡಿದ್ದು, ಸಂಸ್ಥೆಗೆ ಪ್ರತ್ಯೇಕ ಅನುದಾನ ಇಲ್ಲದ ಕಾರಣ ಗುತ್ತಿಗೆ ಕಾಮಗಾರಿಗಳಲ್ಲಿ ಒಟ್ಟು ಶೇ.10ರಷ್ಟು ಮೊತ್ತವನ್ನು ಸಂಸ್ಥೆಯ ನಿಯಮದಂತೆ ಕಡಿತ ಮಾಡಲಾಗುತ್ತದೆ. ಇದು ಭ್ರಷ್ಟಾಚಾರವಲ್ಲ, ಸಂಸ್ಥೆಯ ನಿಯಮದ ಭಾಗವಾಗಿದೆ ಎಂದು ತಿಳಿಸಿದ್ದಾರೆ.

    ಕೆಆರ್‌ಐಡಿಎಲ್‌ನ ಪ್ರಕಾರ, ಅಂದಾಜು ವೆಚ್ಚದ ಮೇಲೆ ಶೇ.3ರಷ್ಟು ಸಂಸ್ಥೆಯ ಸೇವಾ ಶುಲ್ಕ ಮತ್ತು ಗುತ್ತಿಗೆದಾರರ ಉಳಿತಾಯದ ಶೇ.7ರಷ್ಟು ಮೊತ್ತವನ್ನು ಸೇರಿಸಿ ಒಟ್ಟು ಶೇ.10ರಷ್ಟು ಮೊತ್ತವನ್ನು ಸಂಸ್ಥೆಯ ಖಾತೆಗೆ ಜಮಾ ಮಾಡಲಾಗುತ್ತದೆ. ಇದೇ ಸಂಸ್ಥೆಯಲ್ಲಿ ಜಾರಿಯಲ್ಲಿರುವ ನಿಯಮ ಎಂದು ವ್ಯವಸ್ಥಾಪಕ ನಿರ್ದೇಶಕರು ವಿವರಿಸಿದ್ದಾರೆ.

    ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 1,800 ಖಾಯಂ ಹಾಗೂ ಹೊರಗುತ್ತಿಗೆ ಸಿಬ್ಬಂದಿಯ ವೇತನ ಮತ್ತು ಇತರ ಆಡಳಿತಾತ್ಮಕ ವೆಚ್ಚಗಳನ್ನು ಈ ಮೊತ್ತದಿಂದಲೇ ಭರಿಸಲಾಗುತ್ತದೆ. ಸರ್ಕಾರದಿಂದ ಸಂಸ್ಥೆಗೆ ವೇತನ, ಭತ್ಯೆ ಸೇರಿದಂತೆ ಆಡಳಿತಾತ್ಮಕ ವೆಚ್ಚಕ್ಕಾಗಿ ಪ್ರತ್ಯೇಕ ಅನುದಾನ ನೀಡಲಾಗುವುದಿಲ್ಲ ಎಂದು ಕೆಆರ್‌ಐಡಿಎಲ್ ತಿಳಿಸಿದೆ.

    ಶಾಸಕ ಅಶೋಕ್ ರೈ ಅವರು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿರುವಂತೆ, ಅಧಿಕಾರಿಗಳು ಶೇ.3ರಷ್ಟು ಸೇವಾ ಶುಲ್ಕ ಹಾಗೂ ಗುತ್ತಿಗೆದಾರರ ಉಳಿತಾಯದ ಶೇ.7ರಷ್ಟು ಮೊತ್ತವನ್ನು ಕಡಿತ ಮಾಡಿ ಸಂಸ್ಥೆಯ ಖಾತೆಗೆ ಜಮಾ ಮಾಡಿದ್ದಾರೆ ಎಂದು ಕೆಆರ್‌ಐಡಿಎಲ್ ಸ್ಪಷ್ಟಪಡಿಸಿದೆ. ಹೀಗಾಗಿ ಶಾಸಕರು ಉಲ್ಲೇಖಿಸಿರುವ ಅಂಶದಲ್ಲಿ ತಪ್ಪಿಲ್ಲ, ಆದರೆ ಇದು ಸಂಸ್ಥೆಯ ನಿಯಮದಂತೆ ನಡೆಯುವ ಪ್ರಕ್ರಿಯೆಯಾಗಿದ್ದು ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಎಂದು ವ್ಯವಸ್ಥಾಪಕ ನಿರ್ದೇಶಕರು ಹೇಳಿದ್ದಾರೆ.




    #dakshinakannada #karnataka
    Previous Articleಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ: ವಿದ್ಯಾರ್ಥಿಗಳ ವಿರುದ್ಧದ ಎಫ್‌ಐಆರ್‌ ರದ್ದುಪಡಿಸಿದ ಸುಪ್ರೀಂ ಕೋರ್ಟ್
    Next Article ‘ರೌಡಿಗಳನ್ನು ಬಿಟ್ಟು ನನ್ನ ಕೊಲೆ ಮಾಡಲು ಯತ್ನ’ : ಶಾಸಕರ ವಿರುದ್ಧ ಹಕೀಂ ಕೂರ್ನಡ್ಕ ಗಂಭೀರ ಆರೋಪ

    Related Posts

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026

    ಉಡುಪಿ: ಪಡಿತರ ಅಕ್ಕಿ ವಿಚಾರದಲ್ಲಿ ಅವಾಚ್ಯ ನಿಂದನೆ, ಕೊಲೆ ಬೆದರಿಕೆ; ಮೂವರು ಆರೋಪಿಗಳ ಬಂಧನ

    September 3, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.