Close Menu
    What's Hot

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಓವರ್‌ಟೇಕ್ ವಿಚಾರಕ್ಕೆ ಗಲಾಟೆ; ದುನಿಯಾ ವಿಜಯ್ ಪುತ್ರನ ವಿರುದ್ಧ ಅಪಹರಣ, ಹಲ್ಲೆ ಪ್ರಕರಣ ದಾಖಲು
    ಕರ್ನಾಟಕ

    ಓವರ್‌ಟೇಕ್ ವಿಚಾರಕ್ಕೆ ಗಲಾಟೆ; ದುನಿಯಾ ವಿಜಯ್ ಪುತ್ರನ ವಿರುದ್ಧ ಅಪಹರಣ, ಹಲ್ಲೆ ಪ್ರಕರಣ ದಾಖಲು

    adminBy adminSeptember 1, 2026No Comments2 Mins Read

    ಬೆಂಗಳೂರು: ಸ್ಯಾಂಡಲ್‌ವುಡ್ ನಟ ‘ದುನಿಯಾ’ ವಿಜಯ್ ಅವರ ಪುತ್ರ ಸಾಮ್ರಾಟ್ ವಿರುದ್ಧ ಹಲ್ಲೆ ಹಾಗೂ ಅಪಹರಣ ಆರೋಪ ಕೇಳಿಬಂದಿದೆ. ಕಾರು ಓವರ್‌ಟೇಕ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ಸಹಪಾಠಿಯನ್ನೇ ಕಾರಿನಲ್ಲಿ ಎಳೆದೊಯ್ದು ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡ ಮನೀಶ್ ಗೌಡ ಎಂಬ ಯುವಕ ಪ್ರಸ್ತುತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೆಂಗೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

    ನಿನ್ನೆ ಸಂಜೆ ನಟ ವಿಜಯ್ ಪುತ್ರ ಸಾಮ್ರಾಟ್ ಹಾಗೂ ಆತನ ಸ್ನೇಹಿತರು ಜಿಪ್ಸಿ  ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ರಾಜರಾಜೇಶ್ವರಿನಗರದಲ್ಲಿ ಮನೀಶ್ ಗೌಡ ಮತ್ತು ಆತನ ಸ್ನೇಹಿತರು ತಮ್ಮ ಐ20 ಕಾರಿನಲ್ಲಿ ಸಾಮ್ರಾಟ್ ಚಲಾಯಿಸುತ್ತಿದ್ದ ಕಾರನ್ನು ಓವರ್‌ಟೇಕ್ ಮಾಡಿದ್ದರು. ಈ ವಿಚಾರಕ್ಕೆ ಇಬ್ಬರ ನಡುವೆ ಸಣ್ಣ ಗಲಾಟೆಯಾಗಿತ್ತು.

    ನಿನ್ನೆಯ ಗಲಾಟೆಯ ಹಿನ್ನೆಲೆಯಲ್ಲಿ, ಇಂದು ಮಧ್ಯಾಹ್ನ ಮೈಸೂರು ರಸ್ತೆಯ ಆರ್‌ವಿ ಯೂನಿವರ್ಸಿಟಿ ಹೊರಭಾಗದಲ್ಲಿದ್ದ ಮನೀಶ್ ಗೌಡನನ್ನು ಸಾಮ್ರಾಟ್ ಹಾಗೂ ಆತನ ಕಡೆಯವರು ಬಲವಂತವಾಗಿ ಕಾರಿನಲ್ಲಿ ಎಳೆದೊಯ್ದು ತೀವ್ರವಾಗಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹಲ್ಲೆಗೊಳಗಾದ ಮನೀಶ್ ಗೌಡ ಹಾಗೂ ಆರೋಪ ಎದುರಿಸುತ್ತಿರುವ ಸಾಮ್ರಾಟ್ ಇಬ್ಬರೂ ಒಂದೇ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೆಂಗೇರಿ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

    ‘ಸಾಫಾರಿ ಕಾರಿನಲ್ಲಿ ಬಂದು ಮನೀಶ್ ಕಿಡ್ನ್ಯಾಪ್ ಮಾಡಿ ಹೊಡೆದಿದ್ದಾರೆ’

    ನಟ ‘ದುನಿಯಾ’ ವಿಜಯ್ ಪುತ್ರ ಸಾಮ್ರಾಟ್ ವಿಜಯ್ ಹಾಗೂ ಆತನ ತಂಡವು ಸಹಪಾಠಿ ಮನೀಶ್ ಗೌಡ ಎಂಬ ಯುವಕನನ್ನು ಕಾರಿನಲ್ಲಿ ಅಪಹರಿಸಿ ತೀವ್ರವಾಗಿ ಹಲ್ಲೆ ನಡೆಸಿದೆ ಎಂದು ಮನೀಶ್ ಪರ ವಕೀಲ ಮಂಜುನಾಥ್ ಗಂಭೀರ ಆರೋಪ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸಾಮ್ರಾಟ್ ವಿಜಯ್‌ನನ್ನು ಎ-1 (A-1) ಆರೋಪಿಯನ್ನಾಗಿ ಮಾಡಿ ಒಟ್ಟು 6 ಜನರ ವಿರುದ್ಧ ಕೆಂಗೇರಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

    “ನಿನ್ನೆ ಕಾರು ಓವರ್‌ಟೇಕ್ ಮಾಡಿದ ಸಣ್ಣ ವಿಚಾರಕ್ಕೆ ಗಲಾಟೆ ನಡೆದಿತ್ತು. ಆದರೆ ಇವತ್ತು ಸಾಮ್ರಾಟ್ ಹಾಗೂ ಆತನ ಕಡೆಯವರು ಸಫಾರಿ ಕಾರಿನಲ್ಲಿ ಬಂದು ಮನೀಶ್‌ನನ್ನು ಅಪಹರಿಸಿದ್ದಾರೆ. ತದನಂತರ ಆರು ಜನರು ಸೇರಿಕೊಂಡು ಆತನ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ” ಎಂದು ವಕೀಲರು ತಿಳಿಸಿದ್ದಾರೆ. “ನಾವು ನೀಡಿದ ದೂರಿನಲ್ಲಿ ನಟ ದುನಿಯಾ ವಿಜಯ್ ಪುತ್ರ ಸಾಮ್ರಾಟ್ ವಿಜಯ್‌ನನ್ನು ಎ-1 (ಮೊದಲ ಆರೋಪಿ) ಎಂದು ಹೆಸರಿಸಿದ್ದೇವೆ. ಆತನ ಜೊತೆಗಿದ್ದ ಇತರ ಆರು ಜನರ ವಿರುದ್ಧವೂ ದೂರು ನೀಡಲಾಗಿದೆ” ಎಂದು ವಿವರಿಸಿದ್ದಾರೆ.

    “ಘಟನೆ ನಡೆದ ಸ್ಥಳಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಕೆಲ ಗೊಂದಲಗಳಿವೆ. ಆದಾಗ್ಯೂ, ಪೊಲೀಸರು ಸೂಕ್ತ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಳ್ಳುವ ಭರವಸೆ ನೀಡಿದ್ದಾರೆ” ಎಂದು ವಕೀಲ ಮಂಜುನಾಥ್ ಹೇಳಿದ್ದಾರೆ.

     




    #karnataka
    Previous Article‘ಕೇರಳ ಲಾಟರಿಯಲ್ಲಿ ₹8 ಲಕ್ಷ ಬಹುಮಾನ’ ಎಂದು ನಂಬಿಸಿ ₹3.81 ಲಕ್ಷ ಎಗರಿಸಿದ ಸೈಬರ್ ವಂಚಕರು
    Next Article ‘ಶೀಘ್ರದಲ್ಲೇ ನಿಮ್ಮ ಹತ್ಯೆ’ ಎಂದ ಅನಾಮಧೇಯ ಪತ್ರ: ಚಿರಾಗ್ ಪಾಸ್ವಾನ್‌ಗೆ ಜೀವ ಬೆದರಿಕೆ

    Related Posts

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026

    ಉಡುಪಿ: ಪಡಿತರ ಅಕ್ಕಿ ವಿಚಾರದಲ್ಲಿ ಅವಾಚ್ಯ ನಿಂದನೆ, ಕೊಲೆ ಬೆದರಿಕೆ; ಮೂವರು ಆರೋಪಿಗಳ ಬಂಧನ

    September 3, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.