ಶಿವಮೊಗ್ಗ: ನ್ಯಾಯಾಲಯ ಮೂರು ಬಾರಿ ಜಾಮೀನು ರಹಿತ ವಾರಂಟ್ ಹೊರಡಿಸಿದ್ದರೂ ವಿಚಾರಣೆಗೆ ಹಾಜರಾಗದೆ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ಭದ್ರಾವತಿ ಮೂಲದ ಆರೋಪಿ, ರೌಡಿಶೀಟರ್ ದಿಲೀಪ್ ಅಲಿಯಾಸ್ ಕರಿಯಾನನ್ನು ಬುಧವಾರ ಸಂಜೆ ಪೊಲೀಸರು ಬಂಧಿಸಿದ್ದಾರೆ.
ಪೊಲೀಸರಿಂದ ತಪ್ಪಿಸಿಕೊಳ್ಳಲು ಅನನ್ಯ ಶಾಲೆ ಹಿಂಭಾಗದ ಕೆರೆಯ ನೀರಿನಲ್ಲಿ ಅಡಗಿ ಕುಳಿತಿದ್ದ ಆರೋಪಿಯನ್ನು ಭದ್ರಾವತಿ ನ್ಯೂ ಟೌನ್ ಠಾಣೆಯ ಪಿಎಸ್‌ಐ ರಮೇಶ್ ಹಾಗೂ ಸಿಬ್ಬಂದಿ ಪ್ರಸನ್ನ ಅವರು ನೀರಿಗೆ ಧುಮುಕಿ ಬಂಧಿಸಿದ್ದಾರೆ.
ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಸಿಎಚ್‌ಸಿ ಗಂಗಾಧರ ಹಾಗೂ ಹಾಲಪ್ಪ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಸಾಹಸಮಯ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ ನ್ಯೂ ಟೌನ್ ಠಾಣೆಯ ಪೊಲೀಸ್ ತಂಡದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260903-42-558801410








