ಕಾರ್ಕಳ: ಸುಮಾರು 42 ವರ್ಷಗಳಿಂದ ತಲೆಮರೆಸಿಕೊಂಡಿದ್ದಾನೆ ಎನ್ನಲಾದ ಪಳ್ಳಿ ಗ್ರಾಮದ ನಿವಾಸಿ ರವೀಂದ್ರ ಶೆಟ್ಟಿ (65) ಎಂಬಾತನನ್ನು ಕಾರ್ಕಳ ನಗರ ಪೊಲೀಸರು ಮಹಾರಾಷ್ಟ್ರದಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ.
ಕಾರ್ಕಳ ನಗರ ಪೊಲೀಸರು ನಡೆಸಿದ ನಿರಂತರ ಪತ್ತೆ ಕಾರ್ಯಾಚರಣೆಯ ಬಳಿಕ ಸೆಪ್ಟೆಂಬರ್ 1ರಂದು ಮಹಾರಾಷ್ಟ್ರದ ಮುಲುಂಡ್ ಪಶ್ಚಿಮದಲ್ಲಿ ರವೀಂದ್ರ ಶೆಟ್ಟಿಯನ್ನು ಬಂಧಿಸಲಾಯಿತು. ಬಳಿಕ ಸೆಪ್ಟೆಂಬರ್ 2ರಂದು ಆತನನ್ನು ಕಾರ್ಕಳ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.
ಪೊಲೀಸ್ ಪ್ರಕಟಣೆಯ ಪ್ರಕಾರ, ನ್ಯಾಯಾಲಯವು ರವೀಂದ್ರ ಶೆಟ್ಟಿಗೆ ಜಾಮೀನು ಮಂಜೂರು ಮಾಡಿದೆ.








