Close Menu
    What's Hot

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ
    ಅಪರಾಧ

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    adminBy adminSeptember 3, 2026No Comments1 Min Read

    ಬೆಂಗಳೂರು: ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ ಐಪಿಎಸ್ ಅಧಿಕಾರಿಯ ಹೆಸರಿನಲ್ಲಿ ಜನರಿಂದ ಹಣ ವಸೂಲಿ ಮಾಡುತ್ತಿದ್ದ ಆರೋಪದಡಿ ರಾಜಸ್ಥಾನದ 17 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಡಿಸಿಪಿ ಐಪಿಎಸ್ ಅಧಿಕಾರಿ ನಾರಾಯಣ ಎಂ. ಅವರ ಹೆಸರಿನಲ್ಲಿ ಆರೋಪಿ ನಕಲಿ ಖಾತೆ ಸೃಷ್ಟಿಸಿದ್ದ ಎನ್ನಲಾಗಿದೆ. ಬಂಧಿತನನ್ನು ರಾಜಸ್ಥಾನದ ಕೊಟಕುರ್ದ್ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ.

    ವಂಚನೆ ನಡೆಸುತ್ತಿದ್ದಿದ್ದು ಹೇಗೆ?

    ನಾರಾಯಣ್ ಅವರ ಭಾವಚಿತ್ರ ಬಳಸಿ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿದ್ದ ಆರೋಪಿ ಅವರ ಪರಿಚಿತರು ಮತ್ತು ಸಾರ್ವಜನಿಕರಿಂದ ಹಣ ವಸೂಲಿಗಿಳಿದಿದ್ದ. ನಕಲಿ ಖಾತೆ ಮೂಲಕ ಕಡಿಮೆ ಬೆಲೆಗೆ ಪೀಠೋಪಕರಣ ಮಾರಾಟ ಆಮಿಷ ಒಡ್ಡುತ್ತಿದ್ದ ಈತ, ತನ್ನ ಸ್ನೇಹಿತ ಸಿಆರ್‌ಪಿಎಫ್ ಕಮಾಂಡೆಂಟ್ ಆಗಿದ್ದಾನೆ. ಅವನ ಬಳಿ ಪೀಠೋಪಕರಣಗಳು ಮತ್ತು ಗೃಹ ಬಳಕೆಯ ವಸ್ತುಗಳು ಇವೆ. ಅವುಗಳನ್ನು ಕಡಿಮೆ ಬೆಲೆ ಖರೀದಿಸಬಹುದು ಎಂದು ನಂಬಿಸಿ ಹಣ ಪಡೆದು ಸಾರ್ವಜನಿಕರಿಗೆ ವಂಚಿಸುತ್ತಿದ್ದ. ಈ ಸಂಬಂಧ ಜುಲೈನಲ್ಲಿ ಸಂತ್ರಸ್ತರೊಬ್ಬರು ನೀಡಿದ ದೂರಿನ ಬಳಿಕ ವಂಚನೆ ಪ್ರಕರಣ ಬೆಳಕಿಗೆ ಬಂದಿತ್ತು.

    ಉಳಿದ ಆರೋಪಿಗಳಿಗಾಗಿ ಶೋಧ

    ಪೊಲೀಸರು ಆರೋಪಿ ಬಾಲಕನಿಂದ 2 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದು, ಈ ಹಣ ನಕಲಿ ಬ್ಯಾಂಕ್ ಖಾತೆಗಳ ಮೂಲಕ ವಂಚಿಸಿ ಸಂಗ್ರಹಿಸಿದ ಮೊತ್ತದ ಭಾಗವೆಂದು ಶಂಕಿಸಲಾಗಿದೆ. ಇನ್ನು ವಿಚಾರಣೆ ವೇಳೆ ಬಾಲಕ ಕೆಲವು ಸಹಚರರೊಂದಿಗೆ ಸೇರಿ ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾನೆ. ದೇಶದಾದ್ಯಂತ ಹಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆಗಳನ್ನು ಸೃಷ್ಟಿಸಿ, ಅವರಂತೆ ನಟಿಸುವ ಮೂಲಕ ಜನರಿಂದ ಹಣ ವಸೂಲಿ ಮಾಡುತ್ತಿದ್ದುದಾಗಿ ತಿಳಿಸಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೀಗಾಗಿ ಉಳಿದ ಆರೋಪಿಗಳಿಗಾಗಿಯೂ ಶೋಧ ಮುಂದುವರಿದಿದೆ.

    #crime #karnataka
    Previous ArticleKPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ
    Next Article ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    Related Posts

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026

    ಉಡುಪಿ: ಪಡಿತರ ಅಕ್ಕಿ ವಿಚಾರದಲ್ಲಿ ಅವಾಚ್ಯ ನಿಂದನೆ, ಕೊಲೆ ಬೆದರಿಕೆ; ಮೂವರು ಆರೋಪಿಗಳ ಬಂಧನ

    September 3, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026

    ಉಡುಪಿ: ಪಡಿತರ ಅಕ್ಕಿ ವಿಚಾರದಲ್ಲಿ ಅವಾಚ್ಯ ನಿಂದನೆ, ಕೊಲೆ ಬೆದರಿಕೆ; ಮೂವರು ಆರೋಪಿಗಳ ಬಂಧನ

    September 3, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.