Close Menu
    What's Hot

    ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ರೂಪ: ಮಂಗಳೂರು–ಕಾರವಾರ–ಗೋವಾ ಕ್ರೂಸ್‌ ಸೇವೆಗೆ ಒತ್ತು

    September 6, 2026

    ಪತ್ನಿಗೆ ಹಲ್ಲೆ ಆರೋಪ ವಿಚಾರಿಸಲು ಹೋದ ಪೊಲೀಸರಿಗೇ ಹಲ್ಲೆ: ಪುತ್ತೂರಿನಲ್ಲಿ ಪ್ರಕರಣ ದಾಖಲು

    September 6, 2026

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»9 ತಿಂಗಳ ಗರ್ಭಿಣಿ ಪತ್ನಿಯ ಹತ್ಯೆ: ಪತಿಗೆ ಜೀವಾವಧಿ ಶಿಕ್ಷೆ, ₹75 ಸಾವಿರ ದಂಡ
    ಅಪರಾಧ

    9 ತಿಂಗಳ ಗರ್ಭಿಣಿ ಪತ್ನಿಯ ಹತ್ಯೆ: ಪತಿಗೆ ಜೀವಾವಧಿ ಶಿಕ್ಷೆ, ₹75 ಸಾವಿರ ದಂಡ

    adminBy adminSeptember 4, 2026No Comments2 Mins Read

    ಚಿಕ್ಕಮಗಳೂರು: ಒಂಬತ್ತು ತಿಂಗಳ ಗರ್ಭಿಣಿ ಪತ್ನಿಯನ್ನೇ ನಿರ್ದಯವಾಗಿ ಹತ್ಯೆ ಮಾಡಿದ್ದ 38 ವರ್ಷದ ವ್ಯಕ್ತಿಗೆ ಚಿಕ್ಕಮಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ಆದೇಶ ನೀಡಿದೆ, ಚಿಕ್ಕಮಗಳೂರು ನಗರದ ಶಂಕರಪುರ ನಿವಾಸಿ ಲಕ್ಷ್ಮಣಗೌಡ ಅವರ ಪುತ್ರ ಮಂಜುನಾಥ್ ಅಲಿಯಾಸ್ ಮಂಜು ಶಿಕ್ಷೆಗೆ ಗುರಿಯಾದ ವ್ಯಕ್ತಿಯಾಗಿದ್ದು, 2025ರ ಜನವರಿ 14ರಂದು ಈತ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ಪರಿಣಾಮ ಮಗುವಿಗೆ ಜನ್ಮ ನೀಡಿ ಆಕೆ ಪ್ರಾಣಬಿಟ್ಟಿದ್ದಳು.

    ಪ್ರಕರಣ ಏನು?

    ಜನವರಿ 14ರಂದು ಸಂಜೆ 6ರ ಸುಮಾರಿಗೆ ಕೆಲಸ ಮುಗಿಸಿ ಮದ್ಯ ಸೇವಿಸಿ ಮನೆಗೆ ಬಂದಿದ್ದ ಮಂಜುನಾಥ್, ಪತ್ನಿ ಶಾರದಾ ಬಳಿ ಊಟ ಕೇಳಿದ್ದ. ಬಳಿಕ ಜಗಳ ಆರಂಭಿಸಿದ್ದ ಈತ ಆಕೆಯ ಕೂದಲನ್ನು ಹಿಡಿದು ಎಳೆದಾಡಿ ನೆಲಕ್ಕೆ ತಳ್ಳಿ, ತಲೆಗೆ ಗುದ್ದಿ, ಹೊಟ್ಟೆಗೆ ಕಾಲಿನಿಂದ ಒದ್ದು, ನಿನ್ನನ್ನೂ ಮಗುವನ್ನೂ ಕೊಲ್ಲುತ್ತೇನೆ ಎಂದು ಬೆದರಿಸಿದ್ದ. ಘಟನೆಯಲ್ಲೊ ಗಂಭೀರ ಗಾಯಗೊಂಡಿದ್ದ ಶಾರದಾ ಅವರನ್ನು ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ  ದಾಖಲಿಸಲಾಗಿತ್ತು. ಅಲ್ಲಿ ಅವರು ಗಂಡು ಮಗುವಿಗೆ ಜನ್ಮ ನೀಡಿದ ಬಳಿಕ ಗಾಯಗಳಿಂದಾಗಿ ಮೃತಪಟ್ಟಿದ್ದರು.

    ಪ್ರಕರಣಕ್ಕೆ ಸಂಬಂಧಿಸಿದಂತೆ ಶಾರದಾ ಕುಟುಂಬದ ದೂರಿನ ಆಧಾರದ ಮೇಲೆ ಚಿಕ್ಕಮಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್‌ಸ್ಪೆಕ್ಟರ್ ಅಭಯ್ ಪ್ರಕಾಶ್ ಸೋಮನಾಳ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರಿ ಅಭಿಯೋಜಕ ಎಚ್.ಎಸ್. ಲೋಹಿತಾಶಾಚಾರ್ ಅವರು ಪ್ರಕರಣದ ವಾದ ಮಂಡಿಸಿದ್ದರು. ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 103ರ ಅಡಿಯಲ್ಲಿ ಮಂಜುನಾಥ್ ತಪ್ಪಿತಸ್ಥನೆಂದು ತೀರ್ಪು ನೀಡಿದ ನ್ಯಾಯಾಧೀಶ ಕಿರಣ್ ಕಿಣಿ, ಜೀವಾವಧಿ ಶಿಕ್ಷೆ ಹಾಗೂ 75,000 ರೂಪಾಯಿ ದಂಡ ವಿಧಿಸಿ ಆದೇಶಿಸಿದ್ದಾರೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ 10 ತಿಂಗಳ ಸರಳ ಜೈಲು ಶಿಕ್ಷೆ ಅನುಭವಿಸಬೇಕು ಎಂದು ತಿಳಿಸಿದ್ದಾರೆ.. ಅಲ್ಲದೆ, ಶಾರದಾ ಅವರ ತಾಯಿ ಶಂಕರಪುರದ ಸಿದ್ದಮ್ಮ ಅವರಿಗೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ (DLSA) ನ್ಯಾಯಾಲಯ ಶಿಫಾರಸು ಮಾಡಿದೆ ಎಂದು ಪೊಲೀಸರು ತಿಳಿಸಿರೋದಾಗಿ ದಿ ಟೈಮ್ಸ್​​ ಆಫ್​​ ಇಂಡಿಯಾ ವರದಿ ಮಾಡಿದೆ.

    #crime #karnataka
    Previous Articleಆರ್‌ಜಿ ಕರ್ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಟಿಎಂಸಿ ನಾಯಕ ಸೋಮನಾಥ್ ಡೇ ಬಂಧನ
    Next Article ಜೈಲಿನಲ್ಲೇ ವಾರ್ಡನ್‌ಗೆ ಕತ್ತು ಹಿಸುಕಿ ಕೊಲೆ ಮಾಡಲು ಯತ್ನ: ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ 5 ಆರೋಪಿಗಳ ವಿರುದ್ಧ ಕೇಸ್

    Related Posts

    ಪತ್ನಿಗೆ ಹಲ್ಲೆ ಆರೋಪ ವಿಚಾರಿಸಲು ಹೋದ ಪೊಲೀಸರಿಗೇ ಹಲ್ಲೆ: ಪುತ್ತೂರಿನಲ್ಲಿ ಪ್ರಕರಣ ದಾಖಲು

    September 6, 2026

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ರೂಪ: ಮಂಗಳೂರು–ಕಾರವಾರ–ಗೋವಾ ಕ್ರೂಸ್‌ ಸೇವೆಗೆ ಒತ್ತು

    September 6, 2026

    ಪತ್ನಿಗೆ ಹಲ್ಲೆ ಆರೋಪ ವಿಚಾರಿಸಲು ಹೋದ ಪೊಲೀಸರಿಗೇ ಹಲ್ಲೆ: ಪುತ್ತೂರಿನಲ್ಲಿ ಪ್ರಕರಣ ದಾಖಲು

    September 6, 2026

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.