Close Menu
    What's Hot

    ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ತೀರ್ಪು ನೀಡಲು ಜ್ಯೂರಿ ವಿಫಲ

    September 5, 2026

    ‘ಆಪರೇಷನ್ ಅಶ್‌ದಾರ್’ ಯಶಸ್ಸು: ಲಷ್ಕರ್ ಉಗ್ರ ಕಮಾಂಡರ್ ಯಾಸಿರ್ ಹತ್ಯೆ

    September 5, 2026

    ಅವೈಜ್ಞಾನಿಕ ರಸ್ತೆಗೆ ಮತ್ತೊಂದು ಬಲಿ: ಬೈಕ್‌ನಿಂದ ಬಿದ್ದ ಮಹಿಳೆ ಕಾಲಿನ ಮೇಲೆ ಹರಿದ ಟಿಪ್ಪರ್

    September 5, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಹಾಸನ ಜೈಲಲ್ಲಿ ವಿಚಾರಣಾಧೀನ ಕೈದಿಗಳ ಭೀಕರ ಮಾರಾಮಾರಿ: ಜಗಳ ಬಿಡಿಸಲು ಹೋದ ಸಿಬ್ಬಂದಿಗೂ ಹಲ್ಲೆ
    ಅಪರಾಧ

    ಹಾಸನ ಜೈಲಲ್ಲಿ ವಿಚಾರಣಾಧೀನ ಕೈದಿಗಳ ಭೀಕರ ಮಾರಾಮಾರಿ: ಜಗಳ ಬಿಡಿಸಲು ಹೋದ ಸಿಬ್ಬಂದಿಗೂ ಹಲ್ಲೆ

    adminBy adminSeptember 4, 2026No Comments1 Min Read

    ಹಾಸನ : ನಗರದ ಸಂತೇಪೇಟೆಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ  ವಿಚಾರಣಾಧೀನ ಕೈದಿಗಳ ನಡುವೆ ಭೀಕರ ಮಾರಾಮಾರಿ ನಡೆದಿದೆ. ಜಗಳ ಬಿಡಿಸಲು ಹೋದ ಜೈಲು ಸಿಬ್ಬಂದಿಯ ಮೇಲೆಯೂ ಕೈದಿಗಳು ಏಕಾಏಕಿ ಹಲ್ಲೆ ನಡೆಸಿದ್ದು, ಘಟನೆಗೆ ಸಂಬಂಧಿಸಿದಂತೆ ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಫೋನ್ ಕರೆ ವಿಚಾರಕ್ಕೆ ಶುರುವಾಯ್ತು ಜಗಳ

    ಜೈಲಿನೊಳಗೆ ಫೋನ್ ಮಾಡಲು ಸರತಿ ಸಾಲಿನಲ್ಲಿ ನಿಂತಿದ್ದ ವಿಚಾರಣಾಧೀನ ಕೈದಿಗಳಾದ ಮೋಹನಕುಮಾರ ಹಾಗೂ ರಂಗಸ್ವಾಮಿ ನಡುವೆ ಮೊದಲು ಫೋನ್ ಮಾಡುವ ವಿಚಾರವಾಗಿ ಮಾತಿನ ಚಕಮಕಿ ಶುರುವಾಗಿದೆ. ಜಗಳ ತಾರಕಕ್ಕೇರಿ ಇಬ್ಬರೂ ಪರಸ್ಪರ ಬಡಿದಾಡಿಕೊಳ್ಳಲು ಆರಂಭಿಸಿದ್ದಾರೆ. ಈ ವೇಳೆ ಜಗಳ ಬಿಡಿಸಲು ಜೈಲು ಮುಖ್ಯ ವೀಕ್ಷಕರಾದ ಪರಶುರಾಮ ಹಾಗೂ ವೀರೇಶ್ ಸಂಗಮದ್ ಮುಂದಾಗಿದ್ದಾರೆ.

    ಕೊಠಡಿಯೊಳಗೆ ನುಗ್ಗಿ ಹಲ್ಲೆ: ಜೈಲು ಸಿಬ್ಬಂದಿಗೆ ಗಾಯ

    ಇದೇ ಸಂದರ್ಭದಲ್ಲಿ ಏಕಾಏಕಿ ಪಿ.ಸಿ.ಎಸ್. (PCS) ಕೊಠಡಿಯೊಳಗೆ ನುಗ್ಗಿದ ಶಶಿಧರ, ರಾಕೇಶ, ಯಲ್ಲಾಲಿಂಗ, ಆಕಾಶ, ಉಮೇಶ, ಸಾಯಿನಾಥ, ನಿರೂಪ್, ಭರತ ಹಾಗೂ ಚೇತನ್ ಎಂಬ ಒಂಭತ್ತು ಮಂದಿ ವಿಚಾರಣಾಧೀನ ಕೈದಿಗಳು ಸೇರಿಕೊಂಡು ರಂಗಸ್ವಾಮಿ ಎಂಬ ಕೈದಿಯ ಮೇಲೆ ದಾಳಿ ನಡೆಸಿದ್ದಾರೆ.

    ರಂಗಸ್ವಾಮಿ ರಕ್ಷಣೆಗೆ ಧಾವಿಸಿದ ಜೈಲು ಸಿಬ್ಬಂದಿಗಳಾದ ವೀರೇಶ್ ಸಂಗಮದ್, ಶಿವಕುಮಾರ ಮತ್ತು ಪರಶುರಾಮ.ಹೆಚ್ ಅವರ ಮೇಲೆಯೂ ಈ 9 ಮಂದಿ ಕೈದಿಗಳು ಹಲ್ಲೆ ಮಾಡಿದ್ದಾರೆ. ಜೈಲು ವೀಕ್ಷಕ ವೀರೇಶ್ ಸಂಗಮದ್ ಅವರನ್ನು ನೆಲಕ್ಕೆ ತಳ್ಳಿ ತೀವ್ರವಾಗಿ ಹಲ್ಲೆ ನಡೆಸಲಾಗಿದ್ದು, ಗಾಯಗೊಂಡ ಅವರಿಗೆ ಹಾಸನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

    ರೌಡಿಶೀಟರ್ ಕೊಲೆ ಪ್ರಕರಣದ ಆರೋಪಿಗಳ ಕೃತ್ಯ

    ಹಲ್ಲೆ ನಡೆಸಿದ ಮೋಹನಕುಮಾರ, ಶಶಿಧರ, ರಾಕೇಶ, ಯಲ್ಲಾಲಿಂಗ, ಆಕಾಶ, ಉಮೇಶ, ಸಾಯಿನಾಥ, ನಿರೂಪ್, ಭರತ ಹಾಗೂ ಚೇತನ್ ನಟೋರಿಯಸ್ ರೌಡಿಶೀಟರ್ ಮಂಜೇಶ್ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದಾರೆ ಎಂದು ತಿಳಿದುಬಂದಿದೆ. ಜೈಲಿನೊಳಗೆ ಕಾನೂನು ಕೈಗೆತ್ತಿಕೊಂಡ ಆರೋಪಿಗಳ ವಿರುದ್ಧ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.




    #crime #karnataka
    Previous Articleಅಮೆರಿಕದ ‘ಮೋಸ್ಟ್ ವಾಂಟೆಡ್’ ಪಟ್ಟಿಗೆ ಭಾರತೀಯ ಮೂಲದ ವಂಚಕ: ಬಂಧನಕ್ಕೆ ₹1.25 ಕೋಟಿ ಬಹುಮಾನ
    Next Article ಶಾಸಕ ಅಶೋಕ್ ರೈ ಆರೋಪ ನಿರಾಕರಿಸಿ ವರ್ಗಾವಣೆಗೆ ಕೆಆರ್‌ಐಡಿಎಲ್‌ ಎಂಜಿನಿಯರ್‌ಗಳ ಮನವಿ

    Related Posts

    ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ತೀರ್ಪು ನೀಡಲು ಜ್ಯೂರಿ ವಿಫಲ

    September 5, 2026

    ‘ಆಪರೇಷನ್ ಅಶ್‌ದಾರ್’ ಯಶಸ್ಸು: ಲಷ್ಕರ್ ಉಗ್ರ ಕಮಾಂಡರ್ ಯಾಸಿರ್ ಹತ್ಯೆ

    September 5, 2026

    ಅವೈಜ್ಞಾನಿಕ ರಸ್ತೆಗೆ ಮತ್ತೊಂದು ಬಲಿ: ಬೈಕ್‌ನಿಂದ ಬಿದ್ದ ಮಹಿಳೆ ಕಾಲಿನ ಮೇಲೆ ಹರಿದ ಟಿಪ್ಪರ್

    September 5, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ತೀರ್ಪು ನೀಡಲು ಜ್ಯೂರಿ ವಿಫಲ

    September 5, 2026

    ‘ಆಪರೇಷನ್ ಅಶ್‌ದಾರ್’ ಯಶಸ್ಸು: ಲಷ್ಕರ್ ಉಗ್ರ ಕಮಾಂಡರ್ ಯಾಸಿರ್ ಹತ್ಯೆ

    September 5, 2026

    ಅವೈಜ್ಞಾನಿಕ ರಸ್ತೆಗೆ ಮತ್ತೊಂದು ಬಲಿ: ಬೈಕ್‌ನಿಂದ ಬಿದ್ದ ಮಹಿಳೆ ಕಾಲಿನ ಮೇಲೆ ಹರಿದ ಟಿಪ್ಪರ್

    September 5, 2026

    ‘ಚಂದ್ರನತ್ತ ತಲುಪಿದ ಭಾರತ, ಜಾತಿ ಪಿಡುಗಿನಿಂದ ಇನ್ನೂ ಮುಕ್ತವಾಗಿಲ್ಲ’: ಬಾಂಬೆ ಹೈಕೋರ್ಟ್

    September 5, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಅವೈಜ್ಞಾನಿಕ ರಸ್ತೆಗೆ ಮತ್ತೊಂದು ಬಲಿ: ಬೈಕ್‌ನಿಂದ ಬಿದ್ದ ಮಹಿಳೆ ಕಾಲಿನ ಮೇಲೆ ಹರಿದ ಟಿಪ್ಪರ್

    September 5, 2026

    ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ: 40 ಕೆಜಿ ಎಕ್ಸ್‌ಪೈರ್ಡ್ ಮೆಣಸಿನಕಾಯಿ ಪತ್ತೆ, ಕ್ಲಬ್‌ಗೆ ಬೀಗ

    September 5, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.