Close Menu
    What's Hot

    ಪುತ್ತೂರು: ದೇವಸ್ಥಾನದ ಕಾಣಿಕೆ ಡಬ್ಬಿ ಕಳವು; ಕೇರಳದ ಆರೋಪಿಯ ಬಂಧನ

    September 4, 2026

    ಸುಮಂತ್ ನಿಗೂಢ ಸಾವು ಪ್ರಕರಣ: ಸಹೋದರ, ಇಬ್ಬರು ಚಿಕ್ಕಪ್ಪನ ಬ್ರೈನ್ ಮ್ಯಾಪಿಂಗ್

    September 4, 2026

    ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್ ಕಳ್ಳತನ: ಉಪ್ಪಿನಂಗಡಿಯಲ್ಲಿ ಇಬ್ಬರ ಬಂಧನ

    September 4, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಪುತ್ತೂರು: ದೇವಸ್ಥಾನದ ಕಾಣಿಕೆ ಡಬ್ಬಿ ಕಳವು; ಕೇರಳದ ಆರೋಪಿಯ ಬಂಧನ
    ಅಪರಾಧ

    ಪುತ್ತೂರು: ದೇವಸ್ಥಾನದ ಕಾಣಿಕೆ ಡಬ್ಬಿ ಕಳವು; ಕೇರಳದ ಆರೋಪಿಯ ಬಂಧನ

    adminBy adminSeptember 4, 2026No Comments2 Mins Read

    ಪುತ್ತೂರು: ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹೊರಗಡೆ ಇಡಲಾಗಿದ್ದ ಕಾಣಿಕೆ ಡಬ್ಬಿಯನ್ನು ಕಳವು ಮಾಡಿದ ಆರೋಪದ ಮೇಲೆ ಕೇರಳ ಮೂಲದ ವ್ಯಕ್ತಿಯೋರ್ವನನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

    ಬಂಧಿತನನ್ನು ಕೇರಳ ಕಾಸರಗೋಡು ನಿವಾಸಿ ಸತೀಶ (31) ಎಂದು ಗುರುತಿಸಲಾಗಿದೆ.

    ಪುತ್ತೂರು ಬೆಟ್ಟಂಪಾಡಿ ನಿವಾಸಿ ಹಾಗೂ ದೇವಸ್ಥಾನದ ಆಡಳಿತ ಪದಾಧಿಕಾರಿ ವಿನೋದ್ ಕುಮಾರ ಬಿ. (44) ಅವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿತ್ತು. ಆಗಸ್ಟ್ 25ರಂದು ಬೆಳಗ್ಗೆ ದೇವಸ್ಥಾನಕ್ಕೆ ತೆರಳಿದಾಗ ಹೊರಗಡೆ ಇಡಲಾಗಿದ್ದ ಕಾಣಿಕೆ ಡಬ್ಬಿ ನಾಪತ್ತೆಯಾಗಿರುವುದು ಗಮನಕ್ಕೆ ಬಂದಿತ್ತು. ಪರಿಸರದಲ್ಲಿ ಹುಡುಕಾಟ ನಡೆಸಿದರೂ ಡಬ್ಬಿ ಪತ್ತೆಯಾಗಿರಲಿಲ್ಲ.

    ನಂತರ ದೇವಸ್ಥಾನದ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಿದಾಗ, ಆಗಸ್ಟ್ 24ರಂದು ರಾತ್ರಿ ಅಪರಿಚಿತ ವ್ಯಕ್ತಿಯೊಬ್ಬರು ಕಾಣಿಕೆ ಡಬ್ಬಿಯನ್ನು ಎತ್ತಿಕೊಂಡು ಹೋಗುತ್ತಿರುವುದು ಕಂಡುಬಂದಿತ್ತು. ಡಬ್ಬಿಯಲ್ಲಿ ಸುಮಾರು ₹4,500 ನಗದು ಇದ್ದಿರಬಹುದೆಂದು ಅಂದಾಜಿಸಲಾಗಿದ್ದು, ಕಾಣಿಕೆ ಡಬ್ಬಿಯ ಮೌಲ್ಯ ಸುಮಾರು ₹2,500 ಎಂದು ದೂರಿನಲ್ಲಿ ತಿಳಿಸಲಾಗಿತ್ತು.

    ಈ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 110/2026, ಕಲಂ 305(e) ಬಿಎನ್‌ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.

    ಆರೋಪಿಯ ಪತ್ತೆಗಾಗಿ ತನಿಖಾ ತಂಡವು ಕೇರಳದ ಕಿನ್ನಿಂಗಾರು, ಬದಿಯಡ್ಕ ಹಾಗೂ ಆದೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ತನಿಖೆ ನಡೆಸಿತ್ತು. ಈ ವೇಳೆ ಅಂತರ್‌ರಾಜ್ಯ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದ ಸತೀಶನನ್ನು ಕೇರಳದ ಬದಿಯಡ್ಕದಲ್ಲಿ ಬಂಧಿಸಲಾಗಿದೆ.

    ಬಂಧಿತನಿಂದ ಕಳವು ಮಾಡಲಾಗಿದ್ದ ಕಾಣಿಕೆ ಡಬ್ಬಿ ಹಾಗೂ ಕಳ್ಳತನಕ್ಕೆ ಬಳಸಿದ್ದ ಅಂದಾಜು ₹1 ಲಕ್ಷ ಮೌಲ್ಯದ ಬೈಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

    ಬಂಧಿತ ಸತೀಶನ ವಿರುದ್ಧ ಈಗಾಗಲೇ ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ಅಡಿಕೆ ಕಳ್ಳತನ ಪ್ರಕರಣ ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ.

    ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಮೋದ್ ಕುಮಾರ್ ಅವರ ನಿರ್ದೇಶನದಲ್ಲಿ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪ್ರಭಾರ ನಿರೀಕ್ಷಕ ತಿಮ್ಮಪ್ಪ ನಾಯ್ಕ್ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ.

    ಪುತ್ತೂರು ಗ್ರಾಮಾಂತರ ಠಾಣೆಯ ಪಿಎಸ್ಐ ಗುಣ ಪಾಲ್ ಹಾಗೂ ಪಿಎಸ್ಐ ಸುಷ್ಮಾ ಜಿ. ಭಂಡಾರಿ ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

    ಹೆಚ್‌ಸಿ 1040 ರಮೇಶ್, ಹೆಚ್‌ಸಿ 2309 ನಾಗರಾಜ, ಪಿಸಿ 2287 ಮಂಜುನಾಥ, ಪಿಸಿ 452 ಆಕಾಶ್, ಪಿಸಿ 485 ಕಾರ್ತಿಕ್, ಅಪರಾಧ ವಿಭಾಗದ ಪಿಸಿ 2394 ಶರಣಪ್ಪ ಪಾಟೀಲ್, ಪಿಸಿ 2370 ಈರಣ್ಣ ಹಾಗೂ ಹೆಚ್‌ಜಿ 483 ಹರಿಪ್ರಸಾದ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಸಿಡಿಆರ್ ವಿಭಾಗದ ಸಂಪತ್ ಮತ್ತು ದಿವಾಕರ್ ಅವರು ಸಹಕರಿಸಿದ್ದಾರೆ.




    #crime #dakshinakannada
    Previous Articleಸುಮಂತ್ ನಿಗೂಢ ಸಾವು ಪ್ರಕರಣ: ಸಹೋದರ, ಇಬ್ಬರು ಚಿಕ್ಕಪ್ಪನ ಬ್ರೈನ್ ಮ್ಯಾಪಿಂಗ್

    Related Posts

    ಸುಮಂತ್ ನಿಗೂಢ ಸಾವು ಪ್ರಕರಣ: ಸಹೋದರ, ಇಬ್ಬರು ಚಿಕ್ಕಪ್ಪನ ಬ್ರೈನ್ ಮ್ಯಾಪಿಂಗ್

    September 4, 2026

    ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್ ಕಳ್ಳತನ: ಉಪ್ಪಿನಂಗಡಿಯಲ್ಲಿ ಇಬ್ಬರ ಬಂಧನ

    September 4, 2026

    ಬೆಳ್ತಂಗಡಿಯಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಗಂಭೀರ, ಬಳಿಕ ಸಾವು

    September 4, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಪುತ್ತೂರು: ದೇವಸ್ಥಾನದ ಕಾಣಿಕೆ ಡಬ್ಬಿ ಕಳವು; ಕೇರಳದ ಆರೋಪಿಯ ಬಂಧನ

    September 4, 2026

    ಸುಮಂತ್ ನಿಗೂಢ ಸಾವು ಪ್ರಕರಣ: ಸಹೋದರ, ಇಬ್ಬರು ಚಿಕ್ಕಪ್ಪನ ಬ್ರೈನ್ ಮ್ಯಾಪಿಂಗ್

    September 4, 2026

    ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್ ಕಳ್ಳತನ: ಉಪ್ಪಿನಂಗಡಿಯಲ್ಲಿ ಇಬ್ಬರ ಬಂಧನ

    September 4, 2026

    9 ದಿನ ‘ಹರೇ ಕೃಷ್ಣ’ ಜಪ, ಜನ್ಮಾಷ್ಟಮಿಯಂದೇ ರಕ್ಷಣೆ: ಸಾವಿನ ದವಡೆಯಿಂದ ಪಾರಾದ ಕಾರ್ಮಿಕ

    September 4, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಾಸನ ಜೈಲಲ್ಲಿ ವಿಚಾರಣಾಧೀನ ಕೈದಿಗಳ ಭೀಕರ ಮಾರಾಮಾರಿ: ಜಗಳ ಬಿಡಿಸಲು ಹೋದ ಸಿಬ್ಬಂದಿಗೂ ಹಲ್ಲೆ

    September 4, 2026

    ಬಡ್ಡಿ ಹಣ ಕೊಡದ ಮಹಿಳೆಯ ಕಿಡ್ನಾಪ್: ನಗ್ನಗೊಳಿಸಿ ಹಲ್ಲೆ, ವಿಡಿಯೋ ವೈರಲ್ ಮಾಡುವ ಬೆದರಿಕೆ-ಆರೋಪಿಗಳ ಬಂಧನ

    September 4, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.