ಮಂಗಳೂರು: ನಗರದ ಇಬ್ಬರು ಅಪ್ರಾಪ್ತ ಬಾಲಕರು ನಾಪತ್ತೆಯಾಗಿರುವ ಕುರಿತು ಮಾಹಿತಿ ಲಭ್ಯವಾಗಿದ್ದು, ಅವರ ಪತ್ತೆಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ.ಮೊಹಮ್ಮದ್ ಶಯಾನ್ (14) ಹಾಗೂ ಮೊಹಮ್ಮದ್ ಶಾಝಿಲ್ (13) ಎಂಬ ಇಬ್ಬರು ಬಾಲಕರು ಕಾಣೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಬಾಲಕರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ತಕ್ಷಣವೇ ಸಂಬಂಧಪಟ್ಟವರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.
ಬಾಲಕರ ಕುರಿತು ಮಾಹಿತಿ ದೊರೆತರೆ ಮ್ಯಾನ್ಸೂರ್ ಮಂಚಿಲಾ ಅವರನ್ನು +91 96323 22351 ಸಂಖ್ಯೆಯಲ್ಲಿ ಸಂಪರ್ಕಿಸುವಂತೆ ಕೋರಲಾಗಿದೆ.
ಇಬ್ಬರು ಬಾಲಕರ ಪತ್ತೆಗೆ ಸಾರ್ವಜನಿಕರು ಸಹಕರಿಸುವಂತೆ ಹಾಗೂ ಈ ಮಾಹಿತಿಯನ್ನು ತಮ್ಮ ವಾಟ್ಸ್ಆ್ಯಪ್ ಗ್ರೂಪ್ಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವಂತೆ ಮನವಿ ಮಾಡಲಾಗಿದೆ








