ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಹಾಡಹಗಲೇ ರೌಡಿಶೀಟರ್ ಕೊಲೆಯಾಗಿದೆ.
ಸುಖದೇವ್ ಭಂಡಾರಿ (32) ಕೊಲೆಯಾದ ರೌಡಿಶೀಟರ್ (Rowdy Sheeter) ಎಂದು ತಿಳಿದುಬಂದಿದೆ.ಹಳೆ ವೈಷಮ್ಯಕ್ಕೆ ರೌಡಿಶೀಟರ್ನನ್ನು ಬರ್ಬರವಾಗಿ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸದ್ಯ ಸ್ಥಳಕ್ಕೆ ಇಂಡಿ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಇಂಡಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








