Close Menu
    What's Hot

    ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ: ಸರ್ಕಾರದ ಮಟ್ಟದಲ್ಲಿ ಚಿಂತನೆ

    September 12, 2026

    ಹೋಟೆಲ್ ಕೊಠಡಿಯಲ್ಲಿ ಬ್ಯೂಟಿಷಿಯನ್ ಶವ ಪತ್ತೆ: ಜೊತೆಗಿದ್ದ ಉದ್ಯಮಿ ನಾಪತ್ತೆ, ಸಾವಿನ ಸುತ್ತ ಅನುಮಾನ

    September 12, 2026

    ಶಾಲೆಗೆ ಹೋಗಬೇಕಿದ್ದ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡ ಆರೋಪ: 71 ಬಾಲಕಾರ್ಮಿಕರ ರಕ್ಷಣೆ, 5 ಪ್ರಕರಣ ದಾಖಲು

    September 12, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಅಪಘಾತಕ್ಕೀಡಾದ ವಾಹನ ತೆರವು ವೇಳೆ ಮತ್ತೊಂದು ಅವಘಡ: ಲಾರಿ ಡಿಕ್ಕಿಗೆ ಬೈಕ್ ಸವಾರ ಸಾವು
    ಕರಾವಳಿ ಸುದ್ದಿ

    ಅಪಘಾತಕ್ಕೀಡಾದ ವಾಹನ ತೆರವು ವೇಳೆ ಮತ್ತೊಂದು ಅವಘಡ: ಲಾರಿ ಡಿಕ್ಕಿಗೆ ಬೈಕ್ ಸವಾರ ಸಾವು

    adminBy adminSeptember 10, 2026No Comments1 Min Read

    ಬೈಂದೂರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದ್ದ ವಾಹನವೊಂದನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದ್ದ ವೇಳೆ, ಲಾರಿಯೊಂದು ನಿಯಂತ್ರಣ ತಪ್ಪಿ ಸರಣಿ ಅಪಘಾತ ಎಸಗಿದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಸಮೀಪ ಗುರುವಾರ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರ, ಶಿರೂರು ನಿವಾಸಿ ನಾಗೇಂದ್ರ ಮಹಾಲೆ (45) ಎಂಬುವವರು ಸ್ಥಳದಲ್ಲೇ ಸಾವನಪ್ಪಿದ್ದಾರೆ.

    ಶಿರೂರು ಸಮೀಪದ ಹೆದ್ದಾರಿಯಲ್ಲಿ ಸರಕು ತುಂಬಿದ್ದ ಲಾರಿಯೊಂದು ಅಪಘಾತಕ್ಕೀಡಾಗಿತ್ತು. ಆ ವಾಹನವನ್ನು ತೆರವುಗೊಳಿಸಲು ಹೆದ್ದಾರಿ ನಿರ್ವಹಣಾ ಸಿಬ್ಬಂದಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ತಡೆಹಿಡಿದಿದ್ದರು. ಈ ವೇಳೆ ರಸ್ತೆಯಲ್ಲಿ ಹಲವು ವಾಹನಗಳು ಸಾಲಾಗಿ ನಿಂತಿದ್ದವು. ಇಳಿಜಾರು ರಸ್ತೆಯಾಗಿದ್ದ ಕಾರಣ, ಕೇರಳದಿಂದ ಮಹಾರಾಷ್ಟ್ರದ ಕಡೆಗೆ ರಬ್ಬರ್ ಸಾಗಿಸುತ್ತಿದ್ದ ಮತ್ತೊಂದು ಲಾರಿ ಅತಿವೇಗವಾಗಿ ಬಂದು ಚಾಲಕನ ನಿಯಂತ್ರಣ ತಪ್ಪಿದೆ. ಭರದಿಂದ ನುಗ್ಗಿದ ಲಾರಿಯು ಹೆದ್ದಾರಿ ಗಸ್ತು ತಿರುಗುವಿಕೆಯ ಪೊಲೀಸ್ ವಾಹನಕ್ಕೆ ಹಾಗೂ ನಿಂತಿದ್ದ ನಾಲ್ಕು ದ್ವಿಚಕ್ರ ವಾಹನಗಳಿಗೆ ಸರಣಿಯಾಗಿ ಡಿಕ್ಕಿ ಹೊಡೆದಿದೆ.

    ಈ ಭೀಕರ ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ನಾಗೇಂದ್ರ ಮಹಾಲೆ ತೀವ್ರವಾಗಿ ಗಾಯಗೊಂಡು ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಬೈಂದೂರು ವೃತ್ತ ನಿರೀಕ್ಷಕ (CPI) ಸಂತೋಷ್ ಕಾಯ್ಕಿಣಿ ಹಾಗೂ ಠಾಣೆಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಘಟನೆಗೆ ಸಂಬಂಧಿಸಿದಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಚಾಲಕನ ನಿರ್ಲಕ್ಷ್ಯದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    #karnataka
    Previous Articleಆಟೋದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ: ಪುತ್ತೂರಿನಲ್ಲಿ ಚಾಲಕ ವಶಕ್ಕೆ
    Next Article ಬೆಂಗಳೂರು-ಮಂಗಳೂರು ವಂದೇ ಭಾರತ್‌ಗೆ ಮತ್ತೊಂದು ಟ್ರಯಲ್ ರನ್: ಸುಬ್ರಹ್ಮಣ್ಯ, ಪುತ್ತೂರು ಮಾರ್ಗವಾಗಿ ಸಂಚಾರ

    Related Posts

    ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ: ಸರ್ಕಾರದ ಮಟ್ಟದಲ್ಲಿ ಚಿಂತನೆ

    September 12, 2026

    ಶಾಲೆಗೆ ಹೋಗಬೇಕಿದ್ದ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡ ಆರೋಪ: 71 ಬಾಲಕಾರ್ಮಿಕರ ರಕ್ಷಣೆ, 5 ಪ್ರಕರಣ ದಾಖಲು

    September 12, 2026

    ಊಟ ಮಾಡುತ್ತಿದ್ದ ಯುವಕನನ್ನು ಮಚ್ಚಿನಿಂದ ಕೊಚ್ಚಿ ಕೊಲೆ: ಬಳಿಕ ಪೊಲೀಸ್ ಠಾಣೆಗೆ ತೆರಳಿ ಶರಣಾದ ಆರೋಪಿ

    September 12, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ: ಸರ್ಕಾರದ ಮಟ್ಟದಲ್ಲಿ ಚಿಂತನೆ

    September 12, 2026

    ಹೋಟೆಲ್ ಕೊಠಡಿಯಲ್ಲಿ ಬ್ಯೂಟಿಷಿಯನ್ ಶವ ಪತ್ತೆ: ಜೊತೆಗಿದ್ದ ಉದ್ಯಮಿ ನಾಪತ್ತೆ, ಸಾವಿನ ಸುತ್ತ ಅನುಮಾನ

    September 12, 2026

    ಶಾಲೆಗೆ ಹೋಗಬೇಕಿದ್ದ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡ ಆರೋಪ: 71 ಬಾಲಕಾರ್ಮಿಕರ ರಕ್ಷಣೆ, 5 ಪ್ರಕರಣ ದಾಖಲು

    September 12, 2026

    ಸ್ನೇಹಿತನ ಪತ್ನಿಯೊಂದಿಗೆ ಅಕ್ರಮ ಸಂಬಂಧದ ಶಂಕೆ: ಬಾಲ್ಯದ ಗೆಳೆಯನನ್ನೇ ಕಬ್ಬಿಣದ ರಾಡ್‌ನಿಂದ ಕೊಂದು ಹಾಕಿದ ಸ್ನೇಹಿತ

    September 12, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ: ಸರ್ಕಾರದ ಮಟ್ಟದಲ್ಲಿ ಚಿಂತನೆ

    September 12, 2026

    ಶಾಲೆಗೆ ಹೋಗಬೇಕಿದ್ದ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡ ಆರೋಪ: 71 ಬಾಲಕಾರ್ಮಿಕರ ರಕ್ಷಣೆ, 5 ಪ್ರಕರಣ ದಾಖಲು

    September 12, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.