ಪುತ್ತೂರು: ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉಪ್ಪಿನಂಗಡಿ ಠಾಣಾ ಪೊಲೀಸರು ಸೆ. 10ರಂದು ಬಂಧಿಸಿದ್ದಾರೆ.
ಕೌಕ್ರಾಡಿ ನಿವಾಸಿ ರಮೇಶ ಬಂಧಿತ ಆರೋಪಿ.
ಆರೋಪಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣಾ ಅಕ್ರ:18/2005, ಕಲಂ: 4, 6 ಅಡಿ ಪೋಕ್ಸೋ ಪ್ರಕರಣ ದಾಖಲಾಗಿರುತ್ತದೆ. ಈತನು ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ.
ಉಪ್ಪಿನಂಗಡಿ ಠಾಣಾ ಸಿಬ್ಬಂದಿಯವರಾದ ದಯಾನಂದ ಹಾಗೂ ರವಿರಾಜ್ ರವರು ನೆಲ್ಯಾಡಿ ಎಂಬಲ್ಲಿ ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ








