Close Menu
    What's Hot

    ಕೊಕ್ಕಡ ಬಳಿ ಕಾರು-ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ: ಹಲವರಿಗೆ ಗಾಯ

    September 12, 2026

    ಭಾರತೀಯ ಮೂಲದ ಮಹಿಳೆಗೆ ನಿರಂತರ ಕಿರುಕುಳ: ಕೆಲಸದ ಸ್ಥಳದ ಹೊರಗೆ ಬೆನ್ನಟ್ಟಿ ಗುಂಡಿಕ್ಕಿ ಕೊಲೆ, ಆರೋಪಿ ಆತ್ಮಹತ್ಯೆ

    September 12, 2026

    ಮಹಿಳೆ-ಯುವಕನ ಪ್ರೀತಿಗೆ ಕುಟುಂಬದ ವಿರೋಧ: ಪ್ರೇಮಿಗಳಿಬ್ಬರು ಆತ್ಮಹತ್ಯೆ, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

    September 12, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮಂಗಳೂರಿನಲ್ಲಿ ಡ್ರಗ್ಸ್ ಮುಕ್ತ ಕ್ಯಾಂಪಸ್ ಅಭಿಯಾನಕ್ಕೆ ಫಲಿತಾಂಶ: ಮರುಪರೀಕ್ಷೆಯಲ್ಲಿ 75%ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಸನಮುಕ್ತ
    ಅಪರಾಧ

    ಮಂಗಳೂರಿನಲ್ಲಿ ಡ್ರಗ್ಸ್ ಮುಕ್ತ ಕ್ಯಾಂಪಸ್ ಅಭಿಯಾನಕ್ಕೆ ಫಲಿತಾಂಶ: ಮರುಪರೀಕ್ಷೆಯಲ್ಲಿ 75%ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಸನಮುಕ್ತ

    adminBy adminSeptember 12, 2026No Comments1 Min Read

    ಮಂಗಳೂರು: ‘ಡ್ರಗ್ಸ್ ಮುಕ್ತ ಮಂಗಳೂರು’ ಅಭಿಯಾನದ ಭಾಗವಾಗಿ ಮಂಗಳೂರು ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯ ಕಾಲೇಜುಗಳಲ್ಲಿ ನಡೆದಿರುವ ವಿದ್ಯಾರ್ಥಿಗಳ ಮಾದಕ ವಸ್ತು ತಪಾಸಣೆ ಹಾಗೂ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಸಕಾರಾತ್ಮಕ ಹಾಗೂ ಆಶಾದಾಯಕ ಫಲಿತಾಂಶಗಳು ಕಂಡುಬಂದಿವೆ.

    ಈ ವರ್ಷ ಕಮಿಷನರೆಟ್ ವ್ಯಾಪ್ತಿಯ ವಿವಿಧ ಕಾಲೇಜುಗಳ ಒಟ್ಟು 8,310 ವಿದ್ಯಾರ್ಥಿಗಳನ್ನು ಡ್ರಗ್ಸ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ 98 ವಿದ್ಯಾರ್ಥಿಗಳಲ್ಲಿ ಮಾದಕ ವಸ್ತು ಸೇವನೆ ದೃಢಪಟ್ಟಿತ್ತು. ಪಾಸಿಟಿವ್ ವರದಿ ಬಂದಿದ್ದ ವಿದ್ಯಾರ್ಥಿಗಳನ್ನು ತಕ್ಷಣವೇ ಕಾಲೇಜು ಆಡಳಿತ ಮಂಡಳಿ ಹಾಗೂ ಪೋಷಕರ ನೆರವಿನಿಂದ 6 ತಿಂಗಳ ಕಾಲ ನಿರಂತರ ಕೌನ್ಸೆಲಿಂಗ್‌ಗೆ  ಒಳಪಡಿಸಲಾಗಿತ್ತು. ಆರು ತಿಂಗಳ ಸಮಾಲೋಚನೆ ಹಾಗೂ ಕೌನ್ಸೆಲಿಂಗ್ ಬಳಿಕ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ಬದಲಾವಣೆಯನ್ನು ದೃಢಪಡಿಸಲು ಗುರುವಾರ (ಸೆ. 10) ಪ್ರಥಮ ಹಂತದಲ್ಲಿ ಪಾಸಿಟಿವ್ ಬಂದಿದ್ದವರ ಪೈಕಿ 50 ವಿದ್ಯಾರ್ಥಿಗಳನ್ನು ಮತ್ತೆ ಮರು ಪರೀಕ್ಷೆಗೆ ಒಳಪಡಿಸಲಾಯಿತು.

    ಈ ವೇಳೆ 38 ವಿದ್ಯಾರ್ಥಿಗಳ ಫಲಿತಾಂಶ ನೆಗೆಟಿವ್ ಬಂದಿದ್ದು, ಅವರು ಮಾದಕ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ತೊರೆದಿರುವುದು ದೃಢಪಟ್ಟಿದೆ. ಕೌನ್ಸೆಲಿಂಗ್‌ಗೆ ಒಳಪಟ್ಟವರಲ್ಲಿ ಶೇ. 75ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಂಪೂರ್ಣವಾಗಿ ಡ್ರಗ್ಸ್ ಮುಕ್ತರಾಗಿರುವುದು ಅತ್ಯಂತ ಆಶಾದಾಯಕ ಬೆಳವಣಿಗೆಯಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಆದರೆ, ಮರು ಪರೀಕ್ಷೆಗೆ ಒಳಗಾದ 12 ವಿದ್ಯಾರ್ಥಿಗಳಲ್ಲಿ ಮತ್ತೆ ಮಾದಕ ವಸ್ತು ಸೇವನೆಯ ಪಾಸಿಟಿವ್ ವರದಿ ಬಂದಿದೆ. ಈ ವಿದ್ಯಾರ್ಥಿಗಳ ಕುರಿತು ಪೋಷಕರು ಹಾಗೂ ಕಾಲೇಜು ಆಡಳಿತ ಮಂಡಳಿಯು ಹೆಚ್ಚಿನ ನಿಗಾ ವಹಿಸಬೇಕು ಮತ್ತು ಸಮಾಲೋಚನಾ ಪ್ರಕ್ರಿಯೆಯನ್ನು ಮತ್ತಷ್ಟು ತೀವ್ರಗೊಳಿಸಿ ಮುಂದುವರಿಸಬೇಕು ಎಂದು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

    #crime #dakshinakannada
    Previous Articleಮಿಠಾಯಿ ತರಲು ಹೋಗಿದ್ದ 6 ವರ್ಷದ ಬಾಲಕಿ ಬಸ್ ಡಿಕ್ಕಿಗೆ ಬಲಿ
    Next Article ₹3 ಕೋಟಿ ಅನುದಾನದಲ್ಲಿ ನಿರ್ಮಾಣ: ಉದ್ಘಾಟನೆಗೂ ಮುನ್ನವೇ ಕಿತ್ತುಬಂದ ಕಾಂಕ್ರೀಟ್, ವಸತಿ ನಿಲಯದಲ್ಲಿ ಕಳಪೆ ಕಾಮಗಾರಿ ಆರೋಪ

    Related Posts

    ಕೊಕ್ಕಡ ಬಳಿ ಕಾರು-ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ: ಹಲವರಿಗೆ ಗಾಯ

    September 12, 2026

    ಭಾರತೀಯ ಮೂಲದ ಮಹಿಳೆಗೆ ನಿರಂತರ ಕಿರುಕುಳ: ಕೆಲಸದ ಸ್ಥಳದ ಹೊರಗೆ ಬೆನ್ನಟ್ಟಿ ಗುಂಡಿಕ್ಕಿ ಕೊಲೆ, ಆರೋಪಿ ಆತ್ಮಹತ್ಯೆ

    September 12, 2026

    ED ದಾಳಿ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಪರ ವಿಜಯ್ ಮಲ್ಯ ಹೇಳಿದ್ದೇನು?

    September 12, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕೊಕ್ಕಡ ಬಳಿ ಕಾರು-ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ: ಹಲವರಿಗೆ ಗಾಯ

    September 12, 2026

    ಭಾರತೀಯ ಮೂಲದ ಮಹಿಳೆಗೆ ನಿರಂತರ ಕಿರುಕುಳ: ಕೆಲಸದ ಸ್ಥಳದ ಹೊರಗೆ ಬೆನ್ನಟ್ಟಿ ಗುಂಡಿಕ್ಕಿ ಕೊಲೆ, ಆರೋಪಿ ಆತ್ಮಹತ್ಯೆ

    September 12, 2026

    ಮಹಿಳೆ-ಯುವಕನ ಪ್ರೀತಿಗೆ ಕುಟುಂಬದ ವಿರೋಧ: ಪ್ರೇಮಿಗಳಿಬ್ಬರು ಆತ್ಮಹತ್ಯೆ, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

    September 12, 2026

    ED ದಾಳಿ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಪರ ವಿಜಯ್ ಮಲ್ಯ ಹೇಳಿದ್ದೇನು?

    September 12, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮಹಿಳೆ-ಯುವಕನ ಪ್ರೀತಿಗೆ ಕುಟುಂಬದ ವಿರೋಧ: ಪ್ರೇಮಿಗಳಿಬ್ಬರು ಆತ್ಮಹತ್ಯೆ, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

    September 12, 2026

    ED ದಾಳಿ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಪರ ವಿಜಯ್ ಮಲ್ಯ ಹೇಳಿದ್ದೇನು?

    September 12, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.