Close Menu
    What's Hot

    ಊಟ ಮಾಡುವಾಗ ಗಂಟಲಿನಲ್ಲಿ ಆಹಾರ ಸಿಲುಕಿ: 12 ವರ್ಷದ ಬಾಲಕನ ದಾರುಣ ಸಾವು

    September 15, 2026

    ‘ಮಾತೆರೆಗ್‌ಲ ಸೊಲ್ಮೆಲು’ ಎಂದ ಡಿಕೆಶಿ: ಸೆ.18ಕ್ಕೆ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ

    September 15, 2026

    ಮಹಿಳಾ ಬೈಕ್ ಸವಾರೆಗೆ ಡಿಕ್ಕಿ ಹೊಡೆದು ಪರಾರಿ ಪ್ರಕರಣ: ‘ಕೊಲೆ ಯತ್ನ’ ಕೇಸ್, ಆರೋಪಿಯ ಬಂಧನ

    September 15, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಕಾಪು: ದೇವಸ್ಥಾನದ ಚಿಲಕ ಮುರಿದು ಒಳನುಗ್ಗಿದ ಕಳ್ಳರು: ಬೆಳ್ಳಿ ಮುಖವಾಡ, ಕಾಣಿಕೆ ಡಬ್ಬಿಯ ಹಣ ಕಳವು
    ಅಪರಾಧ

    ಕಾಪು: ದೇವಸ್ಥಾನದ ಚಿಲಕ ಮುರಿದು ಒಳನುಗ್ಗಿದ ಕಳ್ಳರು: ಬೆಳ್ಳಿ ಮುಖವಾಡ, ಕಾಣಿಕೆ ಡಬ್ಬಿಯ ಹಣ ಕಳವು

    adminBy adminSeptember 14, 2026No Comments1 Min Read

    ಕಾಪು : ಬೆಳಪು ಗ್ರಾಮದ ಶ್ರದ್ಧಾಕೇಂದ್ರವಾಗಿರುವ ಶ್ರೀ ಬ್ರಹ್ಮಲಿಂಗೇಶ್ವರ ಮತ್ತು ಖಡ್ಗೇಶ್ವರಿ ದೇವಸ್ಥಾನದಲ್ಲಿ ಕಳ್ಳರು ಬಾಗಿಲಿನ ಚಿಲಕ ಮುರಿದು ದೇವರ ಬೆಳ್ಳಿಯ ಮುಖವಾಡ ಹಾಗೂ ಕಾಣಿಕೆ ಡಬ್ಬಿಯಲ್ಲಿದ್ದ ನಗದನ್ನು ದೋಚಿರುವ ಘಟನೆ ಸಂಭವಿಸಿದೆ. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಪ್ರಕಾಶ್ ರಾವ್ (50) ಅವರು ನೀಡಿದ ದೂರಿನಂತೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಆಗಸ್ಟ್ 24ರಂದು ಸಂಜೆ 6:30ಕ್ಕೆ ಅರ್ಚಕರು ದೇವಸ್ಥಾನದ ಬಾಗಿಲನ್ನು ಬೀಗ ಹಾಕಿ ಭದ್ರಪಡಿಸಿ ತೆರಳಿದ್ದರು. ಮರುದಿನ, ಆಗಸ್ಟ್ 25ರಂದು ಬೆಳಿಗ್ಗೆ 7:30ರ ಸುಮಾರಿಗೆ ಸ್ಥಳೀಯರಾದ ಗಣೇಶ್ ದೇವಾಡಿಗ ಎಂಬುವರು ದೇವಸ್ಥಾನದ ಎದುರಿನ ಬಾಗಿಲು ಅರ್ಧ ತೆರೆದಿರುವುದನ್ನು ಗಮನಿಸಿ ಕಾರ್ಯದರ್ಶಿಯವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಅಧ್ಯಕ್ಷರು ಹಾಗೂ ಕಾರ್ಯದರ್ಶಿ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದಾಗ ಕಳವು ಪ್ರಕರಣ ಬೆಳಕಿಗೆ ಬಂದಿದೆ. ಅಪರಿಚಿತ ಕಳ್ಳರು ದೇವಸ್ಥಾನದ ಮುಂಭಾಗದ ಬಾಗಿಲಿನ ಚಿಲಕವನ್ನು ಮುರಿದು ಒಳಪ್ರವೇಶಿಸಿ, ಬಳಿಕ ಗರ್ಭಗುಡಿಯ ಬಾಗಿಲ ಬೀಗ ಒಡೆದು ಒಳಗೆ ಪ್ರವೇಶಿಸಿದ್ದಾರೆ.

    ಗರ್ಭಗುಡಿಯಲ್ಲಿದ್ದ ಎರಡು ದೇವರ ಮೂರ್ತಿಗಳಿಗೆ ತೊಡಿಸಲಾಗಿದ್ದ ಅಂದಾಜು ₹1,30,000 ಮೌಲ್ಯದ ಬೆಳ್ಳಿಯ ಮುಖವಾಡಗಳನ್ನು ಕಳ್ಳರು ಎಗರಿಸಿದ್ದಾರೆ. ಅಷ್ಟೇ ಅಲ್ಲದೆ, ದೇವಸ್ಥಾನದ ಒಳಗಿನ ಪ್ರಾಂಗಣದಲ್ಲಿ ಇರಿಸಲಾಗಿದ್ದ ಕಾಣಿಕೆ ಡಬ್ಬಿಯ (ಹುಂಡಿ) ಬೀಗವನ್ನು ಮುರಿದು ಅದರಲ್ಲಿದ್ದ ಅಪಾರ ಪ್ರಮಾಣದ ನಗದು ಹಣವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ಶಿರ್ವ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 73/2026, ಭಾರತೀಯ ನ್ಯಾಯ ಸಂಹಿತೆ (BNS) ಕಲಂ 305 ಹಾಗೂ 331 ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಕಳ್ಳರ ಪತ್ತೆಗೆ ಜಾಲ ಬೀಸಿದ್ದಾರೆ.




    #crime #karnataka
    Previous Articleಮಂಗಳೂರಿಗೆ ಉಚಿತ ಆಸ್ಪತ್ರೆ, ಮಡಿಯಾಲಕ್ಕೆ AI ಶಿಕ್ಷಣ ಕೇಂದ್ರ: ಸದ್ಗುರು ಮಧುಸೂದನ ಸಾಯಿ ಮಹತ್ವದ ಘೋಷಣೆ
    Next Article ರೈಲಿನಲ್ಲಿ ನಿದ್ರಿಸುತ್ತಿದ್ದ ಮಹಿಳೆಯ ಚೂಡಿದಾರ್ ಜೇಬಿನಿಂದ 12 ಗ್ರಾಂ ಚಿನ್ನದ ಸರ ಕಳವು

    Related Posts

    ‘ಮಾತೆರೆಗ್‌ಲ ಸೊಲ್ಮೆಲು’ ಎಂದ ಡಿಕೆಶಿ: ಸೆ.18ಕ್ಕೆ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ

    September 15, 2026

    ಮಹಿಳಾ ಬೈಕ್ ಸವಾರೆಗೆ ಡಿಕ್ಕಿ ಹೊಡೆದು ಪರಾರಿ ಪ್ರಕರಣ: ‘ಕೊಲೆ ಯತ್ನ’ ಕೇಸ್, ಆರೋಪಿಯ ಬಂಧನ

    September 15, 2026

    ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು: ಸಚಿವ ಸಂಪುಟದಲ್ಲಿ ನಿರ್ಣಯಕ್ಕೆ ಮಿಥುನ್ ರೈ ಒತ್ತಾಯ

    September 15, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಊಟ ಮಾಡುವಾಗ ಗಂಟಲಿನಲ್ಲಿ ಆಹಾರ ಸಿಲುಕಿ: 12 ವರ್ಷದ ಬಾಲಕನ ದಾರುಣ ಸಾವು

    September 15, 2026

    ‘ಮಾತೆರೆಗ್‌ಲ ಸೊಲ್ಮೆಲು’ ಎಂದ ಡಿಕೆಶಿ: ಸೆ.18ಕ್ಕೆ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ

    September 15, 2026

    ಮಹಿಳಾ ಬೈಕ್ ಸವಾರೆಗೆ ಡಿಕ್ಕಿ ಹೊಡೆದು ಪರಾರಿ ಪ್ರಕರಣ: ‘ಕೊಲೆ ಯತ್ನ’ ಕೇಸ್, ಆರೋಪಿಯ ಬಂಧನ

    September 15, 2026

    ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು: ಸಚಿವ ಸಂಪುಟದಲ್ಲಿ ನಿರ್ಣಯಕ್ಕೆ ಮಿಥುನ್ ರೈ ಒತ್ತಾಯ

    September 15, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ‘ಮಾತೆರೆಗ್‌ಲ ಸೊಲ್ಮೆಲು’ ಎಂದ ಡಿಕೆಶಿ: ಸೆ.18ಕ್ಕೆ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ

    September 15, 2026

    ಮನೆಯಲ್ಲೇ ರಕ್ತಸಿಕ್ತ ಸ್ಥಿತಿಯಲ್ಲಿ ವೃದ್ಧ ದಂಪತಿ ಪತ್ತೆ: ಪತಿ-ಪತ್ನಿ ಇಬ್ಬರೂ ಗುಂಡೇಟಿಗೆ ಬಲಿ

    September 15, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.