Close Menu
    What's Hot

    ಊಟ ಮಾಡುವಾಗ ಗಂಟಲಿನಲ್ಲಿ ಆಹಾರ ಸಿಲುಕಿ: 12 ವರ್ಷದ ಬಾಲಕನ ದಾರುಣ ಸಾವು

    September 15, 2026

    ‘ಮಾತೆರೆಗ್‌ಲ ಸೊಲ್ಮೆಲು’ ಎಂದ ಡಿಕೆಶಿ: ಸೆ.18ಕ್ಕೆ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ

    September 15, 2026

    ಮಹಿಳಾ ಬೈಕ್ ಸವಾರೆಗೆ ಡಿಕ್ಕಿ ಹೊಡೆದು ಪರಾರಿ ಪ್ರಕರಣ: ‘ಕೊಲೆ ಯತ್ನ’ ಕೇಸ್, ಆರೋಪಿಯ ಬಂಧನ

    September 15, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ತೊಕ್ಕೊಟ್ಟು ಬಸ್ ನಿಲ್ದಾಣದಲ್ಲಿ ಕಿರಿಕ್: ಕೆಎಸ್‌ಆರ್‌ಟಿಸಿ ಕಂಡಕ್ಟರ್, ಚಾಲಕನ ಮೇಲೆ ಹಲ್ಲೆ
    ಅಪರಾಧ

    ತೊಕ್ಕೊಟ್ಟು ಬಸ್ ನಿಲ್ದಾಣದಲ್ಲಿ ಕಿರಿಕ್: ಕೆಎಸ್‌ಆರ್‌ಟಿಸಿ ಕಂಡಕ್ಟರ್, ಚಾಲಕನ ಮೇಲೆ ಹಲ್ಲೆ

    adminBy adminSeptember 15, 2026Updated:September 15, 2026No Comments1 Min Read

    ಮಂಗಳೂರು : ಸರ್ಕಾರಿ ಬಸ್‌ನಲ್ಲಿ ಹಗ್ಗ ಎಳೆದದ್ದನ್ನು ಪ್ರಶ್ನಿಸಿದ್ದಕ್ಕೆ ಪ್ರಯಾಣಿಕನೊಬ್ಬ ಕೇರಳ ಸಾರಿಗೆ ಬಸ್ ಕಂಡಕ್ಟರ್ ಹಾಗೂ ಚಾಲಕನ ಮೇಲೆ ಹಲ್ಲೆ ನಡೆಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಘಟನೆ ತೊಕ್ಕೊಟ್ಟು ಬಸ್ ನಿಲ್ದಾಣದ ಬಳಿ ನಡೆದಿದೆ. ಕೇರಳ ರಾಜ್ಯದ ಕೆಎಸ್‌ಆರ್‌ಟಿಸಿ ಕಾಸರಗೋಡು ವಿಭಾಗದಲ್ಲಿ ಕಂಡಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಸತೀಶನ್ ಕೆ.ಪಿ (52) ಹಲ್ಲೆಗೊಳಗಾದ ಸಿಬ್ಬಂದಿ

    ಸೆಪ್ಟೆಂಬರ್ 12ರಂದು ರಾತ್ರಿ 9:30ಕ್ಕೆ ಮಂಗಳೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಕಾಸರಗೋಡು ಕಡೆಗೆ ಹೊರಟಿದ್ದ ‘KL 15 A 1044’ ನೋಂದಣಿ ಸಂಖ್ಯೆಯ ಬಸ್‌ನಲ್ಲಿ ಸತೀಶನ್ ಕಂಡಕ್ಟರ್ ಆಗಿ ಹಾಗೂ ಸುರೇಶ್ ಎಂ.ಪಿ ಚಾಲಕರಾಗಿ ಕರ್ತವ್ಯದಲ್ಲಿದ್ದರು. ರಾತ್ರಿ 10:20ರ ಸುಮಾರಿಗೆ ಬಸ್ ತೊಕ್ಕೊಟ್ಟು ಬಸ್ ನಿಲ್ದಾಣಕ್ಕೆ ಬಂದಾಗ ತಾರಾನಾಥ ಎಂಬ ಆರೋಪಿ ಬಸ್ ಏರಿದ್ದನು.

    ಬಸ್ ಮುಂಚಲಿಸುತ್ತಿದ್ದಂತೆ ಆರೋಪಿ ತಾರಾನಾಥ ಏಕಾಏಕಿ ಬಸ್‌ನಲ್ಲಿದ್ದ ಸ್ಟಾಪ್ ಬೆಲ್‌ನ ಹಗ್ಗವನ್ನು ಎಳೆದಿದ್ದಾನೆ. ಇದನ್ನು ಕಂಡಕ್ಟರ್ ಸತೀಶನ್ ಪ್ರಶ್ನಿಸಿದ್ದಕ್ಕೆ ರೊಚ್ಚಿಗೆದ್ದ ಆರೋಪಿ, “ಬೇವರ್ಷಿ, ನೀವು ಕೇರಳದವರು, ನಿಮಗೆ ಬಾರಿ ಅಹಂಕಾರ” ಎಂದು ಅಶ್ಲೀಲ ಪದಗಳಿಂದ ನಿಂದಿಸಿದ್ದಾನೆ. ಕೋಪೋದ್ರಿಕ್ತನಾದ ಆರೋಪಿ ತಾರಾನಾಥ, ಕಂಡಕ್ಟರ್ ಸತೀಶನ್ ಅವರ ಕೆನ್ನೆಗೆ ಹೊಡೆದು, ತನ್ನ ಕೈಯಲ್ಲಿದ್ದ ಸ್ಟೀಲ್ ಬಳೆಯಿಂದ ತಲೆಗೆ ಬಲವಾಗಿ ಹಲ್ಲೆ ನಡೆಸಿ ತೀವ್ರ ಗಾಯಗೊಳಿಸಿದ್ದಾನೆ. ಈ ವೇಳೆ ಬಿಡಿಸಲು ಬಂದ ಚಾಲಕ ಸುರೇಶ್ ಅವರ ಕೆನ್ನೆ ಹಾಗೂ ತಲೆಗೂ ಕೈಯಿಂದ ಹೊಡೆದು, ಇಬ್ಬರೂ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ.

    ಹಲ್ಲೆಯಿಂದ ಗಾಯಗೊಂಡ ಕಂಡಕ್ಟರ್ ಸತೀಶನ್ ಅವರನ್ನು ತಕ್ಷಣವೇ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.




    #crime #karnataka
    Previous Articleಪಾಕ್ ಸಚಿವರಿಂದ ಟ್ರೋಫಿ ಸ್ವೀಕರಿಸಲು ನಿರಾಕರಿಸಿ ಸಮಾರಂಭಕ್ಕೆ ಗೈರಾದ ಟೀಮ್ ಭಾರತೀಯ ಮಹಿಳಾ ಕ್ರಿಕೆಟ್ ತಂಡ
    Next Article ಅಶ್ಲೀಲ ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ್‌ಮೇಲ್: 19 ವರ್ಷದ ಯುವಕನಿಂದ ₹5.24 ಲಕ್ಷ ವಸೂಲಿ

    Related Posts

    ‘ಮಾತೆರೆಗ್‌ಲ ಸೊಲ್ಮೆಲು’ ಎಂದ ಡಿಕೆಶಿ: ಸೆ.18ಕ್ಕೆ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ

    September 15, 2026

    ಮಹಿಳಾ ಬೈಕ್ ಸವಾರೆಗೆ ಡಿಕ್ಕಿ ಹೊಡೆದು ಪರಾರಿ ಪ್ರಕರಣ: ‘ಕೊಲೆ ಯತ್ನ’ ಕೇಸ್, ಆರೋಪಿಯ ಬಂಧನ

    September 15, 2026

    ಮನೆಯಲ್ಲೇ ರಕ್ತಸಿಕ್ತ ಸ್ಥಿತಿಯಲ್ಲಿ ವೃದ್ಧ ದಂಪತಿ ಪತ್ತೆ: ಪತಿ-ಪತ್ನಿ ಇಬ್ಬರೂ ಗುಂಡೇಟಿಗೆ ಬಲಿ

    September 15, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಊಟ ಮಾಡುವಾಗ ಗಂಟಲಿನಲ್ಲಿ ಆಹಾರ ಸಿಲುಕಿ: 12 ವರ್ಷದ ಬಾಲಕನ ದಾರುಣ ಸಾವು

    September 15, 2026

    ‘ಮಾತೆರೆಗ್‌ಲ ಸೊಲ್ಮೆಲು’ ಎಂದ ಡಿಕೆಶಿ: ಸೆ.18ಕ್ಕೆ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ

    September 15, 2026

    ಮಹಿಳಾ ಬೈಕ್ ಸವಾರೆಗೆ ಡಿಕ್ಕಿ ಹೊಡೆದು ಪರಾರಿ ಪ್ರಕರಣ: ‘ಕೊಲೆ ಯತ್ನ’ ಕೇಸ್, ಆರೋಪಿಯ ಬಂಧನ

    September 15, 2026

    ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು: ಸಚಿವ ಸಂಪುಟದಲ್ಲಿ ನಿರ್ಣಯಕ್ಕೆ ಮಿಥುನ್ ರೈ ಒತ್ತಾಯ

    September 15, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ‘ಮಾತೆರೆಗ್‌ಲ ಸೊಲ್ಮೆಲು’ ಎಂದ ಡಿಕೆಶಿ: ಸೆ.18ಕ್ಕೆ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ

    September 15, 2026

    ಮನೆಯಲ್ಲೇ ರಕ್ತಸಿಕ್ತ ಸ್ಥಿತಿಯಲ್ಲಿ ವೃದ್ಧ ದಂಪತಿ ಪತ್ತೆ: ಪತಿ-ಪತ್ನಿ ಇಬ್ಬರೂ ಗುಂಡೇಟಿಗೆ ಬಲಿ

    September 15, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.