Close Menu
    What's Hot

    ದೇಶದ ರಕ್ಷಣಾ ರಹಸ್ಯಗಳನ್ನೇ ಪಾಕಿಸ್ತಾನಕ್ಕೆ ಸೋರಿಕೆ ಮಾಡಿದ ಆರೋಪ; ವಾಯುಪಡೆಯ ಅಧಿಕಾರಿಯ ವಿರುದ್ಧ ಪೊಲೀಸರಿಂದ ಚಾರ್ಜ್‌ಶೀಟ್ ದಾಖಲು

    November 14, 2026

    ಸೌಜನ್ಯಾ ಕೊಲೆ ಪ್ರಕರಣದ ಮರುತನಿಖೆ ಚುರುಕು; ಕೊನೆಯದಾಗಿ ನೋಡಿದ್ದ ಐವರು ಪ್ರಮುಖ ಸಾಕ್ಷಿಗಳ ಹೇಳಿಕೆ ದಾಖಲು

    November 14, 2026

    ಸುಬ್ರಹ್ಮಣ್ಯ: 26 ವರ್ಷಗಳ ಹಿಂದಿನ ಕೊಲೆ ಪ್ರಕರಣದ ಆರೋಪಿ ಕೇರಳದಲ್ಲಿ ಬಂಧನ; ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಸೆರೆ

    November 14, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮಹಿಳಾ ಬೈಕರ್‌ಗೆ ಕಾರು ಡಿಕ್ಕಿ ಪ್ರಕರಣ: ಮೂತ್ರ ವಿಸರ್ಜನೆ ನೆಪದಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ
    ಅಪರಾಧ

    ಮಹಿಳಾ ಬೈಕರ್‌ಗೆ ಕಾರು ಡಿಕ್ಕಿ ಪ್ರಕರಣ: ಮೂತ್ರ ವಿಸರ್ಜನೆ ನೆಪದಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ

    adminBy adminSeptember 16, 2026No Comments1 Min Read

    ಗುರುಗ್ರಾಮ: ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಮಹಿಳಾ ಬೈಕರ್‌ಗೆ ಕಾರು ಡಿಕ್ಕಿ ಹೊಡೆಸಿದ ಪ್ರಕರಣದ ಮುಖ್ಯ ಆರೋಪಿ ಕಲ್ಯಾಣ್ ಬೈನ್ಸ್ಲಾ ಇಂದು ರಾಜಸ್ಥಾನದಲ್ಲಿ ಪೋಲಿಸ್ ವಶದಲ್ಲಿದ್ದಾಗ ಮೂತ್ರ ವಿಸರ್ಜನೆಗೆ ಹೋಗಬೇಕೆಂಬ ನೆಪ ಹೇಳಿ ಪರಾರಿಯಾಗಲು ಯತ್ನಿಸಿದ ನಾಟಕೀಯ ಘಟನೆ ನಡೆದಿದೆ.

    ಓಡಿಹೋಗುವ ಯತ್ನದಲ್ಲಿ ಬಿದ್ದು ಗಾಯಗೊಂಡ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ಚಿಕಿತ್ಸೆ ಕೊಡಿಸಿದ್ದಾರೆ. ಆರೋಪಿಯು ಹರಿಯಾಣದ ಪಲ್ವಾಲ್ ನಿವಾಸಿಯಾಗಿದ್ದು, ಘಟನೆಗೆ ಬಳಸಲಾಗಿದ್ದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕಾರು ಆತನ ಸ್ನೇಹಿತನ ಹೆಸರಿನಲ್ಲಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಸಂಬಂಧಿ ಹಾಗೂ ಸಹಚರ ಲವ್ನೀಶ್ ಎಂಬಾತನನ್ನೂ ಪೊಲೀಸರು ಬಂಧಿಸಿದ್ದಾರೆ.

    ವೈರಲ್ ವಿಡಿಯೋದಿಂದ ಸಿಕ್ಕಿಬಿದ್ದ ಆರೋಪಿ:

    ಸೆಪ್ಟೆಂಬರ್ 13ರಂದು ಬೆಳಿಗ್ಗೆ ಮಹಿಳಾ ಬೈಕರ್ ಶಿವಾಣಿ ಚೌಹಾಣ್ (ಸಿಯಾ) ಅವರ ಬೈಕಿಗೆ ಕಾರು ವೇಗವಾಗಿ ಬಂದು ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಈ ಭೀಕರ ದೃಶ್ಯ ಬೈಕರ್ ಹೆಲ್ಮೆಟ್ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಆರೋಪಿ ಮೊಬೈಲ್ ಸ್ವಿಚ್ ಆಫ್ ಮಾಡಿ ತಲೆಮರೆಸಿಕೊಂಡಿದ್ದ. ಗುರುಗ್ರಾಮದ ಕ್ರೈಮ್ ಬ್ರಾಂಚ್ ತಂಡವು ರಾಜಸ್ಥಾನದ ದೌಸಾ ಮತ್ತು ರಾಜ್‌ಗಢ ನಡುವೆ ಈತನನ್ನು ಬಂಧಿಸಿದೆ.

    ಕೊಲೆ ಯತ್ನ, ಲೈಂಗಿಕ ಕಿರುಕುಳ ಪ್ರಕರಣ ದಾಖಲು:

    ಆರಂಭದಲ್ಲಿ ಸಾಧಾರಣ ಪ್ರಕರಣ ದಾಖಲಿಸಿದ್ದ ಪೊಲೀಸರು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ನಂತರ ಕೊಲೆ ಯತ್ನ ಸೇರಿದಂತೆ ಇತರ ಗಂಭೀರ ಸೆಕ್ಷನ್‌ಗಳನ್ನು ಸೇರಿಸಿದ್ದಾರೆ. ಈ ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಮಹಿಳಾ ಬೈಕರ್ ಸಿಯಾ, “ಕಾರಿನಲ್ಲಿದ್ದ ನಾಲ್ವರು ಆಲ್ಕೋಹಾಲ್ ಕುಡಿದಿದ್ದರು. ನನ್ನ ಪ್ರಯಾಣಕ್ಕೆ ಅಡ್ಡಿಪಡಿಸಲು ಯತ್ನಿಸಿದರು. ನಾನು ಅವರಿಂದ ದೂರ ಹೋಗಲು ಬೈಕ್ ವೇಗ ಹೆಚ್ಚಿಸಿದಾಗ, ಅದನ್ನು ಸಹಿಸದೇ ನನಗೆ ಡಿಕ್ಕಿ ಹೊಡೆದರು. ಇದು ಕೇವಲ ಅಪಘಾತವಲ್ಲ, ಉದ್ದೇಶಪೂರ್ವಕ ದಾಳಿ” ಎಂದು ಆರೋಪಿಸಿದ್ದು, ಆರೋಪಿಗಳ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣವನ್ನೂ ದಾಖಲಿಸಬೇಕೆಂದು ಆಗ್ರಹಿಸಿದ್ದಾರೆ.

    ಗುರುಗ್ರಾಮದ ರಸ್ತೆಗಳಲ್ಲಿ ಮಹಿಳೆಯರ ಮತ್ತು ಬೈಕರ್‌ಗಳ ಸುರಕ್ಷತೆಯ ಕುರಿತು ಈ ಘಟನೆ ದೊಡ್ಡ ಮಟ್ಟದ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಪೊಲೀಸರು ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಿದ್ದಾರೆ.




    #crime #national
    Previous Articleಜ್ಯೋತಿಷ್ಯ ಹೇಳಿ ವೃದ್ಧೆಯ ವಿಶ್ವಾಸ ಗಳಿಸಿದ ಖತರ್ನಾಕ್ ವಂಚಕ: 40 ಲಕ್ಷ ರೂ. ಚಿನ್ನದ ಬಳಿಕ ಎಐ ವೀಡಿಯೋ ಡ್ರಾಮಾ
    Next Article ಸಾರ್ವಜನಿಕವಾಗಿ ಯುವತಿಗೆ ಕಿರುಕುಳ ನೀಡುತ್ತಿದ್ದ ಯುವಕನ ಬಂಧನ: ಅಕ್ಕ ಪಡೆಯ ಕಾರ್ಯಾಚರಣೆ

    Related Posts

    ದೇಶದ ರಕ್ಷಣಾ ರಹಸ್ಯಗಳನ್ನೇ ಪಾಕಿಸ್ತಾನಕ್ಕೆ ಸೋರಿಕೆ ಮಾಡಿದ ಆರೋಪ; ವಾಯುಪಡೆಯ ಅಧಿಕಾರಿಯ ವಿರುದ್ಧ ಪೊಲೀಸರಿಂದ ಚಾರ್ಜ್‌ಶೀಟ್ ದಾಖಲು

    November 14, 2026

    ಸುಬ್ರಹ್ಮಣ್ಯ: 26 ವರ್ಷಗಳ ಹಿಂದಿನ ಕೊಲೆ ಪ್ರಕರಣದ ಆರೋಪಿ ಕೇರಳದಲ್ಲಿ ಬಂಧನ; ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಸೆರೆ

    November 14, 2026

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ದೇಶದ ರಕ್ಷಣಾ ರಹಸ್ಯಗಳನ್ನೇ ಪಾಕಿಸ್ತಾನಕ್ಕೆ ಸೋರಿಕೆ ಮಾಡಿದ ಆರೋಪ; ವಾಯುಪಡೆಯ ಅಧಿಕಾರಿಯ ವಿರುದ್ಧ ಪೊಲೀಸರಿಂದ ಚಾರ್ಜ್‌ಶೀಟ್ ದಾಖಲು

    November 14, 2026

    ಸೌಜನ್ಯಾ ಕೊಲೆ ಪ್ರಕರಣದ ಮರುತನಿಖೆ ಚುರುಕು; ಕೊನೆಯದಾಗಿ ನೋಡಿದ್ದ ಐವರು ಪ್ರಮುಖ ಸಾಕ್ಷಿಗಳ ಹೇಳಿಕೆ ದಾಖಲು

    November 14, 2026

    ಸುಬ್ರಹ್ಮಣ್ಯ: 26 ವರ್ಷಗಳ ಹಿಂದಿನ ಕೊಲೆ ಪ್ರಕರಣದ ಆರೋಪಿ ಕೇರಳದಲ್ಲಿ ಬಂಧನ; ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಸೆರೆ

    November 14, 2026

    ಕಡಬ: ಹಣ್ಣು ಸಾಗಿಸುತ್ತಿದ್ದ ಪಿಕಪ್‌ಗೆ ಕಾರು ಡಿಕ್ಕಿ; ಅಪಘಾತದಲ್ಲಿ ಓರ್ವ ಬಲಿ, ಮತ್ತೋರ್ವನಿಗೆ ಗಂಭೀರ ಗಾಯ

    November 14, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.