ಬಂಟ್ವಾಳ: ಮೂಡುಬಿದ್ರೆ–ಕಾರ್ಕಳ ಹೆದ್ದಾರಿಯ ಸಾಣೂರು ಜಂಕ್ಷನ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ರಮಾನಾಥ ರೈ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.
ಅಪಘಾತದ ಬಳಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ರಮಾನಾಥ ರೈ ಅವರನ್ನು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಈ ವೇಳೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಇತರರನ್ನೂ ಸಂಸದರು ಭೇಟಿ ಮಾಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು.
ಸಾಣೂರು ಜಂಕ್ಷನ್‌ನಲ್ಲಿ ನಡೆದ ಅಪಘಾತದಲ್ಲಿ ರಮಾನಾಥ ರೈ ಸೇರಿದಂತೆ ಹಲವರು ಗಾಯಗೊಂಡಿದ್ದರು. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.








