Close Menu
    What's Hot

    ಥಾರ್–ಕಾರು ನಡುವೆ ಅಪಘಾತ; ಮೆಸ್ಕಾಂ ಎಇ ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ

    November 14, 2026

    ಮಲ್ಪೆ: ನಿಗೂಢ ಪಾಪ್‌ಅಪ್ ಸಂದೇಶದ ಮೂಲಕ ಮೊಬೈಲ್ ಹ್ಯಾಕ್; ಎರಡು ಬ್ಯಾಂಕ್ ಖಾತೆಗಳಿಂದ ₹3.03 ಲಕ್ಷ ಹಣ ವರ್ಗಾವಣೆ

    November 14, 2026

    ಪುತ್ತೂರು: 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸುಲಿಗೆ ಪ್ರಕರಣದ ಆರೋಪಿಯ ಬಂಧನ

    November 14, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ರಾಷ್ಟ್ರೀಯ»ಅಯೋಧ್ಯೆ ರಾಮಮಂದಿರ ಕಾಣಿಕೆ ಕಳವು ಪ್ರಕರಣ; ಎಲ್ಲ ಆರೋಪಿಗಳ ಗುರುತು ಪತ್ತೆ; ಸೆ.25ರೊಳಗೆ ಚಾರ್ಜ್‌ಶೀಟ್ ಸಲ್ಲಿಕೆ
    ರಾಷ್ಟ್ರೀಯ

    ಅಯೋಧ್ಯೆ ರಾಮಮಂದಿರ ಕಾಣಿಕೆ ಕಳವು ಪ್ರಕರಣ; ಎಲ್ಲ ಆರೋಪಿಗಳ ಗುರುತು ಪತ್ತೆ; ಸೆ.25ರೊಳಗೆ ಚಾರ್ಜ್‌ಶೀಟ್ ಸಲ್ಲಿಕೆ

    adminBy adminSeptember 21, 2026No Comments1 Min Read

    ನವದೆಹಲಿ: ಅಯೋಧ್ಯೆಯ ರಾಮಮಂದಿರದಲ್ಲಿ ನಡೆದಿದೆ ಎನ್ನಲಾದ ಕಾಣಿಕೆ ಹಣ ಕಳವು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಈ ಪ್ರಕರಣದಲ್ಲಿ ಭಾಗಿಯಾದ ಎಲ್ಲ ವ್ಯಕ್ತಿಗಳನ್ನು ಗುರುತಿಸಲಾಗಿದೆ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

    ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠದ ಮುಂದೆ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ತನಿಖೆಯು ಬಹುತೇಕ ಪೂರ್ಣಗೊಂಡಿದ್ದು, ಸೆಪ್ಟೆಂಬರ್ 25ರೊಳಗೆ ಭ್ರಷ್ಟಾಚಾರ ತಡೆ ಕಾಯ್ದೆಯಡಿಯ ವಿಶೇಷ ನ್ಯಾಯಾಧೀಶರ ಮುಂದೆ ಚಾರ್ಜ್‌ಶೀಟ್ ಸಲ್ಲಿಸಲಾಗುವುದು ಎಂದು ಹೇಳಿದರು. ಈ ಪ್ರಕರಣವನ್ನು ಸಾಬೀತುಪಡಿಸಲು ಎಸ್‌ಐಟಿ ಬಳಿ ಸಾಕಷ್ಟು ಪ್ರಮಾಣದ ದಾಖಲೆಗಳು ಮತ್ತು ಎಲೆಕ್ಟ್ರಾನಿಕ್ ಸಾಕ್ಷ್ಯಾಧಾರಗಳಿವೆ ಎಂದು ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದರು.

    ಎಸ್‌ಐಟಿ ಸುಪ್ರೀಂ ಕೋರ್ಟ್‌ಗೆ ತನ್ನ ತನಿಖೆಯ ಪ್ರಗತಿಯನ್ನು ವಿವರಿಸುವ ವರದಿಯನ್ನು ಸಲ್ಲಿಸಿತು. ನ್ಯಾಯಾಲಯದ ಆದೇಶದ ಪ್ರಕಾರ, ಆರೋಪಿಗಳನ್ನು ಗುರುತಿಸಲು ಸಿಸಿಟಿವಿ ದೃಶ್ಯಾವಳಿಗಳು ಮತ್ತು ಇತರ ಸಾಕ್ಷ್ಯಗಳನ್ನು ವಿಶ್ಲೇಷಿಸಲಾಗಿದೆ ಎಂದು ವರದಿ ತಿಳಿಸಿದೆ. ಅಲ್ಲದೆ, ಸಾಫ್ಟ್​​ವೇರ್ ಮೂಲಕ ರಸೀದಿಗಳನ್ನು ನೀಡಲಾಗುತ್ತಿದ್ದು, ಆ ವಸ್ತುಗಳನ್ನು ಎಸ್‌ಬಿಐ ಲಾಕರ್‌ಗಳಲ್ಲಿ ಸುರಕ್ಷಿತವಾಗಿ ಇರಿಸಲಾಗಿದೆ ಎಂದು ವರದಿಯಲ್ಲಿ ಬಹಿರಂಗಪಡಿಸಲಾಗಿದೆ ಎಂದು ನ್ಯಾಯಾಲಯ ದಾಖಲಿಸಿಕೊಂಡಿದೆ.

    “ತನಿಖೆಯು ಬಹುತೇಕ ಪೂರ್ಣಗೊಂಡಿದ್ದು, ತನಿಖೆ ಮುಕ್ತಾಯಗೊಂಡ ನಂತರ ಸೂಕ್ತ ನ್ಯಾಯಾಲಯದಲ್ಲಿ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗುವುದು” ಎಂದು ಎಸ್‌ಐಟಿ ಸಲ್ಲಿಕೆಯನ್ನು ದಾಖಲಿಸಿಕೊಳ್ಳುವಾಗ ನ್ಯಾಯಾಲಯ ತಿಳಿಸಿತು. ಇದಕ್ಕೂ ಮುನ್ನ, ಸೆಪ್ಟೆಂಬರ್ 18ರಂದು, ರಾಮಮಂದಿರದ ಕಾಣಿಕೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಎಲ್ಲಾ 8 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿತ್ತು.

    ಬಂಧಿತ 8 ಆರೋಪಿಗಳೆಂದರೆ, ಅವಿನಾಶ್ ಶುಕ್ಲಾ, ಅನುಕಲ್ಪ್ ಮಿಶ್ರಾ, ಲವ್ ಕುಶ್ ಮಿಶ್ರಾ, ಮನೀಶ್ ಕುಮಾರ್ ಯಾದವ್, ಕರುಣೇಶ್ ಪಾಂಡೆ, ರಾಮ್ ಶಂಕರ್ ಮಿಶ್ರಾ, ಸುಭಾಷ್ ಶ್ರೀವಾಸ್ತವ ಮತ್ತು ರಮಾಶಂಕರ್ ಅಲಿಯಾಸ್ ತಿನ್ನು ಯಾದವ್. ದೇವಾಲಯದ ಕಾಣಿಕೆ ಎಣಿಕೆ ಪ್ರಕ್ರಿಯೆಯಲ್ಲಿ ತೊಡಗಿದ್ದ ಈ ಆರೋಪಿಗಳನ್ನು ಉತ್ತರ ಪ್ರದೇಶ ಸರ್ಕಾರ ರಚಿಸಿದ್ದ ಎಸ್‌ಐಟಿಯ ಪ್ರಾಥಮಿಕ ವರದಿಯ ನಂತರ ಜೂನ್ 25ರಂದು ಎಫ್‌ಐಆರ್ ದಾಖಲಿಸಿ ಬಂಧಿಸಲಾಗಿತ್ತು. ಪ್ರಸ್ತುತ ಇವರೆಲ್ಲರೂ ಜೈಲಿನಲ್ಲಿದ್ದಾರೆ.

     




    #national
    Previous Articleನಕಲಿ ಔಷಧ ಪ್ರಕರಣ; ಕರ್ತವ್ಯಲೋಪ ಆರೋಪದಡಿ ಸಹಾಯಕ ಔಷಧ ನಿಯಂತ್ರಕ ಅಮಾನತು
    Next Article ವಿಧಾನಸೌಧದಲ್ಲಿ ವಂದೇ ಮಾತರಂ 2 ಚರಣಕ್ಕೆ ಅಂತ್ಯ; ಸರ್ಕಾರದ ವಿರುದ್ಧ ಜೋಶಿ ವಾಗ್ದಾಳಿ

    Related Posts

    ದೇಶದ ರಕ್ಷಣಾ ರಹಸ್ಯಗಳನ್ನೇ ಪಾಕಿಸ್ತಾನಕ್ಕೆ ಸೋರಿಕೆ ಮಾಡಿದ ಆರೋಪ; ವಾಯುಪಡೆಯ ಅಧಿಕಾರಿಯ ವಿರುದ್ಧ ಪೊಲೀಸರಿಂದ ಚಾರ್ಜ್‌ಶೀಟ್ ದಾಖಲು

    November 14, 2026

    ಅಸ್ಸಾಂನಲ್ಲಿ ಬೆಚ್ಚಿಬೀಳಿಸಿದ ರಸ್ತೆ ಅಪಘಾತ; ಮಿನಿ ಬಸ್ ಜಖಂಗೊಂಡು 23 ಮಂದಿ ದುರ್ಮರಣ

    November 13, 2026

    ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳ ಹತ್ಯೆ ಪ್ರಕರಣ; 6 ಶಂಕಿತರನ್ನು ವಶಕ್ಕೆ ಪಡೆದ ಪೊಲೀಸರು

    November 13, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಥಾರ್–ಕಾರು ನಡುವೆ ಅಪಘಾತ; ಮೆಸ್ಕಾಂ ಎಇ ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ

    November 14, 2026

    ಮಲ್ಪೆ: ನಿಗೂಢ ಪಾಪ್‌ಅಪ್ ಸಂದೇಶದ ಮೂಲಕ ಮೊಬೈಲ್ ಹ್ಯಾಕ್; ಎರಡು ಬ್ಯಾಂಕ್ ಖಾತೆಗಳಿಂದ ₹3.03 ಲಕ್ಷ ಹಣ ವರ್ಗಾವಣೆ

    November 14, 2026

    ಪುತ್ತೂರು: 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸುಲಿಗೆ ಪ್ರಕರಣದ ಆರೋಪಿಯ ಬಂಧನ

    November 14, 2026

    ಅಮೆರಿಕ: ಮಿಸ್ಸಿಸ್ಸಿಪ್ಪಿ ನದಿಯಲ್ಲಿ ಕ್ರೂಸ್ ಹಡಗಿಗೆ ಟ್ಯಾಂಕರ್ ಡಿಕ್ಕಿ; ಹಡಗು ಪಲ್ಟಿ, 32 ಮಂದಿಗೆ ಗಾಯ

    November 14, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಥಾರ್–ಕಾರು ನಡುವೆ ಅಪಘಾತ; ಮೆಸ್ಕಾಂ ಎಇ ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.