Close Menu
    What's Hot

    ಲಾಟರಿ ಅದೃಷ್ಟ ಕೈಕೊಟ್ಟಿದ್ದಕ್ಕೆ ಆಕ್ರೋಶ; ಮಹಿಳಾ ಮಾರಾಟಗಾರ್ತಿಗೆ ಚಾಕು ಇರಿತ

    September 28, 2026

    ಸೌಜನ್ಯಾ ಪ್ರಕರಣದ SIT ತನಿಖೆಗೆ ಕಲ್ಲಡ್ಕ ಪ್ರಭಾಕರ ಭಟ್‌ ಪ್ರಶ್ನೆ; ಅಧಿಕಾರಿಗಳ ಆಯ್ಕೆ ಬಗ್ಗೆ ಅನುಮಾನ

    September 28, 2026

    ಕೆಪಿಎಸ್‌ಸಿ ನೇಮಕಾತಿ ಅಕ್ರಮ; ಇಡಿ ದಾಳಿಯಲ್ಲಿ ಸಿಕ್ಕ ಡೈರಿಯಲ್ಲಿ ಲಕ್ಷಾಂತರ ಹಣದ ಲೆಕ್ಕ ಪತ್ತೆ

    September 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ರಾಷ್ಟ್ರೀಯ»ಧಾರ್ಮಿಕ ಕಾರಣಕ್ಕೆ ವಂದೇ ಮಾತರಂ ಹಾಡದಿದ್ದರೆ ಕ್ರಿಮಿನಲ್ ಕ್ರಮ ಬೇಡ; ಸುಪ್ರೀಂ ಕೋರ್ಟ್
    ರಾಷ್ಟ್ರೀಯ

    ಧಾರ್ಮಿಕ ಕಾರಣಕ್ಕೆ ವಂದೇ ಮಾತರಂ ಹಾಡದಿದ್ದರೆ ಕ್ರಿಮಿನಲ್ ಕ್ರಮ ಬೇಡ; ಸುಪ್ರೀಂ ಕೋರ್ಟ್

    adminBy adminSeptember 23, 2026No Comments1 Min Read

    ನವದೆಹಲಿ: ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸಿರುವ ನಿಯಮ ಹಾಗೂ ಅದನ್ನು ಉಲ್ಲಂಘಿಸಿದರೆ ಶಿಕ್ಷೆ ವಿಧಿಸುವ ಕಾನೂನಿನ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಮಹತ್ವದ ಸೂಚನೆ ನೀಡಿದೆ.

    ಆತ್ಮಸಾಕ್ಷಿಯ ಆಧಾರದ ಮೇಲೆ ಅಥವಾ ಧಾರ್ಮಿಕ ನಂಬಿಕೆಯ ಕಾರಣಕ್ಕೆ ಯಾರಾದರೂ ವಂದೇ ಮಾತರಂ ಹಾಡಲು ನಿರಾಕರಿಸಿದರೆ ಅವರನ್ನು ದಂಡನಾತ್ಮಕ ಕ್ರಮಗಳಿಗೆ ಗುರಿಪಡಿಸುವಂತಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

    ಕರ್ನಾಟಕದಲ್ಲಿ ವಂದೇ ಮಾತರಂ ಗಾಯನ ಕಡ್ಡಾಯಗೊಳಿಸುವ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಇತ್ತೀಚೆಗಷ್ಟೇ ವಿಧಾನಮಂಡಲ ಅಧಿವೇಶನದಲ್ಲೂ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿತ್ತು. ಹೀಗೆ ಕರ್ನಾಟಕದಲ್ಲಿ ಈ ಕುರಿತ ಸಂಘರ್ಷದ ಕಿಡಿ ಜೋರಾಗಿರುವ ಸಂದರ್ಭದಲ್ಲೇ, ಸುಪ್ರೀಂ ಕೋರ್ಟ್ ಈ ನಿರ್ದೇಶನವನ್ನು ನೀಡಿದೆ.

    ಪ್ರಸಿದ್ಧ ಕರ್ನಾಟಕ ಸಂಗೀತ ಗಾಯಕ ಟಿ.ಎಂ. ಕೃಷ್ಣ ಅವರು, ವಂದೇ ಮಾತರಂನ ಎಲ್ಲಾ ಆರು ಚರಣಗಳನ್ನು ಕಡ್ಡಾಯವಾಗಿ ಹಾಡಬೇಕು ಎಂದು ಕೇಂದ್ರ ಸರ್ಕಾರ ಜಾರಿಗೆ ತಂದ ನಿಯಮವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. 2026ರಲ್ಲಿ ತಿದ್ದುಪಡಿ ಮಾಡಲಾದ ‘ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯ್ದೆ, 1971’ ರ ಸೆಕ್ಷನ್ 3 ಹಾಗೂ ಗೃಹ ಸಚಿವಾಲಯದ ಸುತ್ತೋಲೆಗಳನ್ನು ಅವರು ಪ್ರಶ್ನಿಸಿದ್ದರು.

    ತಿದ್ದುಪಡಿ ಮಾಡಿದ ನಿಯಮದ ಪ್ರಕಾರ, ರಾಷ್ಟ್ರೀಯ ಗೀತೆ ಹಾಡುವುದನ್ನು ತಡೆದರೆ 3 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿತ್ತು. ವಂದೇ ಮಾತರಂನ ಕೊನೆಯ ನಾಲ್ಕು ಚರಣಗಳು ದೇಶದ ಜಾತ್ಯತೀತ ಸ್ವರೂಪಕ್ಕೆ ಮತ್ತು ಸಂವಿಧಾನದ 25 ಹಾಗೂ 26ನೇ ವಿಧಿಗಳ (ಧಾರ್ಮಿಕ ಸ್ವಾತಂತ್ರ್ಯ) ಆಶಯಕ್ಕೆ ವಿರುದ್ಧವಾಗಿವೆ ಎಂಬುದು ಅರ್ಜಿದಾರರ ಪ್ರಮುಖ ವಾದವಾಗಿತ್ತು.

    ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿ. ಮೋಹನ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿತು.




    #national
    Previous Articleಮಂಗಳೂರಿನ ವಿದ್ಯಾರ್ಥಿನಿ ಗಂಭೀರ ಅಸ್ವಸ್ಥ; ಶಾಹೀನ್ ಸಂಸ್ಥೆಯ ವಿರುದ್ಧ ಪೋಷಕರಿಂದ ನಿರ್ಲಕ್ಷ್ಯದ ಆರೋಪ
    Next Article ಭೀಕರ ಅಪಘಾತದ ಬಳಿಕ ರಮಾನಾಥ ರೈ ಆಸ್ಪತ್ರೆಯಿಂದ ಡಿಸ್ಚಾರ್ಜ್; ಮನೆಯಲ್ಲಿ ವಿಶ್ರಾಂತಿ 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ

    Related Posts

    ಲಾಟರಿ ಅದೃಷ್ಟ ಕೈಕೊಟ್ಟಿದ್ದಕ್ಕೆ ಆಕ್ರೋಶ; ಮಹಿಳಾ ಮಾರಾಟಗಾರ್ತಿಗೆ ಚಾಕು ಇರಿತ

    September 28, 2026

    ಬ್ಯಾಂಕ್ ಮುಷ್ಕರ ಮುಂದೂಡಿದ UFBU; ಶಾಖೆಗಳು ಎಂದಿನಂತೆ ಕಾರ್ಯನಿರ್ವಹಣೆ

    September 28, 2026

    ಅಯೋಧ್ಯೆ ರಾಮಮಂದಿರ ಕಾಣಿಕೆ ಹಣ ಕೇಸ್‌ಗೆ ಟ್ವಿಸ್ಟ್; 85 ಬಾರಿ ಕಳವು ಬಯಲು

    September 26, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಲಾಟರಿ ಅದೃಷ್ಟ ಕೈಕೊಟ್ಟಿದ್ದಕ್ಕೆ ಆಕ್ರೋಶ; ಮಹಿಳಾ ಮಾರಾಟಗಾರ್ತಿಗೆ ಚಾಕು ಇರಿತ

    September 28, 2026

    ಸೌಜನ್ಯಾ ಪ್ರಕರಣದ SIT ತನಿಖೆಗೆ ಕಲ್ಲಡ್ಕ ಪ್ರಭಾಕರ ಭಟ್‌ ಪ್ರಶ್ನೆ; ಅಧಿಕಾರಿಗಳ ಆಯ್ಕೆ ಬಗ್ಗೆ ಅನುಮಾನ

    September 28, 2026

    ಕೆಪಿಎಸ್‌ಸಿ ನೇಮಕಾತಿ ಅಕ್ರಮ; ಇಡಿ ದಾಳಿಯಲ್ಲಿ ಸಿಕ್ಕ ಡೈರಿಯಲ್ಲಿ ಲಕ್ಷಾಂತರ ಹಣದ ಲೆಕ್ಕ ಪತ್ತೆ

    September 28, 2026

    ರಹಿಮಾನ್ ಹತ್ಯೆ ಪ್ರಕರಣದಲ್ಲಿ ಹೊಸ ತಿರುವು; ಎಸ್‌ಪಿಯನ್ನೇ ಮಂಪರು ಪರೀಕ್ಷೆಗೆ ಒಳಪಡಿಸಿ ಎಂದ ಕಲ್ಲಡ್ಕ ಪ್ರಭಾಕರ ಭಟ್

    September 28, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕೆಪಿಎಸ್‌ಸಿ ನೇಮಕಾತಿ ಅಕ್ರಮ; ಇಡಿ ದಾಳಿಯಲ್ಲಿ ಸಿಕ್ಕ ಡೈರಿಯಲ್ಲಿ ಲಕ್ಷಾಂತರ ಹಣದ ಲೆಕ್ಕ ಪತ್ತೆ

    September 28, 2026

    15 ದಿನಗಳಲ್ಲಿ 51 ಶಾಲೆಗಳಿಗೆ ಭೇಟಿ 15ರ ಬಾಲಕಿಯ ಸಾಧನೆ ವಿಶ್ವ ದಾಖಲೆ ; ಪರೀಕ್ಷಾ ಒತ್ತಡದ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ವಿಷ್ಣುಪ್ರಿಯಾ

    September 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.