ಉಡುಪಿ: ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿಯ ಕಲ್ಲಾಪು ಡೀವಿಯೇಷನ್ ಬಳಿ ಸೆಪ್ಟೆಂಬರ್ 22 ರ ಮಂಗಳವಾರ ನಾಲ್ಕು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ.
ಮೂಲಗಳ ಪ್ರಕಾರ, ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಕಲ್ಲಾಪು ಡೀವಿಯೇಷನ್ ಬಳಿ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ್ದರಿಂದ ಹಿಂದಿನಿಂದ ಬರುತ್ತಿದ್ದ ಕಾರುಗಳು ಪರಸ್ಪರ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರುಗಳು ಜಖಂಗೊಂಡಿರುತ್ತದೆ.
ಘಟನೆಯ ನಂತರ ಜನನಿಬಿಡ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಸ್ವಲ್ಪ ಸಮಯ ಅಡಚಣೆ ಉಂಟಾಗಿ, ನಂತರ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಲಾಯಿತು.








