Close Menu
    What's Hot

    ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ಕಳಿಯಾಟ ಮಹೋತ್ಸವದ ಸಿದ್ಧತೆಗೆ ಸಮಿತಿ ರಚನಾ ಸಭೆ

    September 28, 2026

    15 ದಿನಗಳಲ್ಲಿ 51 ಶಾಲೆಗಳಿಗೆ ಭೇಟಿ 15ರ ಬಾಲಕಿಯ ಸಾಧನೆ ವಿಶ್ವ ದಾಖಲೆ ; ಪರೀಕ್ಷಾ ಒತ್ತಡದ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ವಿಷ್ಣುಪ್ರಿಯಾ

    September 28, 2026

    “ಪೊಲೀಸ್ ಪವರ್ ತೋರಿಸಬೇಡಿ ಸಮವಸ್ತ್ರ ಬಿಚ್ಚಿ ನಿಲ್ಲಿಸ್ತೀನಿ ” ಉಲ್ಲಾಳ ಇನ್‌ಸ್ಪೆಕ್ಟರ್‌ ಕ್ರಮಕ್ಕೆ ಹೈಕೋರ್ಟ್‌ ತರಾಟೆ

    September 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಬಂಟ್ವಾಳದಲ್ಲಿ ವ್ಯಕ್ತಿಗೆ ತಲವಾರು-ರಾಡ್‌ನಿಂದ ಹಲ್ಲೆ; ಕೊಲೆಯತ್ನ ಪ್ರಕರಣದಲ್ಲಿ ಮೂವರು ಅರೆಸ್ಟ್
    ಅಪರಾಧ

    ಬಂಟ್ವಾಳದಲ್ಲಿ ವ್ಯಕ್ತಿಗೆ ತಲವಾರು-ರಾಡ್‌ನಿಂದ ಹಲ್ಲೆ; ಕೊಲೆಯತ್ನ ಪ್ರಕರಣದಲ್ಲಿ ಮೂವರು ಅರೆಸ್ಟ್

    adminBy adminSeptember 26, 2026No Comments1 Min Read

    ಬಂಟ್ವಾಳ : ತೆಂಕಬೆಳ್ಳೂರು ಗ್ರಾಮದ ಕಮ್ಮಾಜೆ ಎಂಬಲ್ಲಿ ವ್ಯಕ್ತಿಯೊಬ್ಬರ ಮೇಲೆ ತಲವಾರು ಹಾಗೂ ಕಬ್ಬಿಣದ ರಾಡ್‌ನಿಂದ ಭೀಕರವಾಗಿ ಹಲ್ಲೆ ನಡೆಸಿ ಕೊಲೆಯತ್ನ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸೆಪ್ಟೆಂಬರ್ 25 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯವು ಆರೋಪಿಗಳನ್ನು 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

    ಬಂಧಿತ ಆರೋಪಿಗಳ ವಿವರ: 

    ಪ್ರಶಾಂತ್ (38) – ನಿವಾಸಿ: ಅಮ್ಮುಂಜೆ, ಬಂಟ್ವಾಳ
    ರಾಮದಾಸ್ (43) – ನಿವಾಸಿ: ತೆಂಕಬೆಳ್ಳೂರು, ಬಂಟ್ವಾಳ
    ಶಂಕರ (45) – ನಿವಾಸಿ: ಬಡಗಬೆಳ್ಳೂರು, ಬಂಟ್ವಾಳ

    ಬಂಟ್ವಾಳದ ತೆಂಕಬೆಳ್ಳೂರು ಗ್ರಾಮದ ಪ್ರಶಾಂತ್ ಬೆಳ್ಚಾಡ್ (41) ಹಲ್ಲೆಗೊಳಗಾದ ದೂರುದಾರರಾಗಿದ್ದಾರೆ. ಸೆಪ್ಟೆಂಬರ್ 20 ರಂದು ಸಂಜೆ ವೇಳೆ ಪ್ರಶಾಂತ್ ಬೆಳ್ಚಾಡ್ ಅವರು ಕಮ್ಮಾಜೆ ಎಂಬಲ್ಲಿದ್ದಾಗ, ಆಟೋರಿಕ್ಷಾದಲ್ಲಿ ಬಂದ ಅವರ ಪರಿಚಯಸ್ಥರಾದ ಆರೋಪಿಗಳಾದ ಪ್ರಶಾಂತ್, ರಾಮದಾಸ್ ಹಾಗೂ ಶಂಕರ ಏಕಾಏಕಿ ದಾಳಿ ನಡೆಸಿದ್ದಾರೆ. ತಮ್ಮಲ್ಲಿದ್ದ ತಲವಾರು ಹಾಗೂ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ ಪರಿಣಾಮ ಪ್ರಶಾಂತ್ ಬೆಳ್ಚಾಡ್ ಅವರಿಗೆ ತೀವ್ರ ರಕ್ತಗಾಯಗಳಾಗಿದ್ದವು.

    ಈ ವೇಳೆ ಸಾರ್ವಜನಿಕರು ಹಾಗೂ ಗಾಯಾಳುವಿನ ಪರಿಚಯಸ್ಥರು ಸ್ಥಳಕ್ಕೆ ಬರುತ್ತಿರುವುದನ್ನು ಕಂಡ ಆರೋಪಿಗಳು ಮಾರಕಾಸ್ತ್ರಗಳನ್ನು ಬಿಟ್ಟು ಸ್ಥಳದಿಂದ ಓಡಿಹೋಗಿದ್ದರು. ತೀವ್ರ ಗಾಯಗೊಂಡಿದ್ದ ಪ್ರಶಾಂತ್ ಬೆಳ್ಚಾಡ್ ಅವರನ್ನು ತಕ್ಷಣವೇ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಗಾಯಾಳು ನೀಡಿದ ದೂರಿನ ಆಧಾರದ ಮೇಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 124/2026 ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 109 (ಕೊಲೆಯತ್ನ), 352, 351 ಜೊತೆಗೆ 3(5) ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು ಮೂವರನ್ನೂ ಹೆಡೆಮುರಿ ಕಟ್ಟಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹೆಚ್ಚಿನ ತನಿಖೆ ಹಾಗೂ ಕೃತ್ಯಕ್ಕೆ ಬಳಸಿದ ಶಸ್ತ್ರಾಸ್ತ್ರಗಳ ಮಹಜರಿಗಾಗಿ ನ್ಯಾಯಾಲಯವು ಆರೋಪಿಗಳನ್ನು 3 ದಿನಗಳ ಕಾಲ Police Custody ನೀಡಿದೆ.

    #crime #dakshinakannada
    Previous Articleಬಂಟ್ವಾಳ ಅಬ್ದುಲ್ ರೆಹಮಾನ್ ಹತ್ಯೆ; ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಪೊಲೀಸ್ ವಿಚಾರಣೆಗೆ ನೋಟಿಸ್
    Next Article ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ; ಪೊಲೀಸ್ ನೋಟಿಸ್‌ಗೆ ಕಲ್ಲಡ್ಕ ಪ್ರಭಾಕರ ಭಟ್‌ರಿಂದ ಕಾಲಾವಕಾಶ ಮನವಿ

    Related Posts

    ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ಕಳಿಯಾಟ ಮಹೋತ್ಸವದ ಸಿದ್ಧತೆಗೆ ಸಮಿತಿ ರಚನಾ ಸಭೆ

    September 28, 2026

    15 ದಿನಗಳಲ್ಲಿ 51 ಶಾಲೆಗಳಿಗೆ ಭೇಟಿ 15ರ ಬಾಲಕಿಯ ಸಾಧನೆ ವಿಶ್ವ ದಾಖಲೆ ; ಪರೀಕ್ಷಾ ಒತ್ತಡದ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ವಿಷ್ಣುಪ್ರಿಯಾ

    September 28, 2026

    “ಪೊಲೀಸ್ ಪವರ್ ತೋರಿಸಬೇಡಿ ಸಮವಸ್ತ್ರ ಬಿಚ್ಚಿ ನಿಲ್ಲಿಸ್ತೀನಿ ” ಉಲ್ಲಾಳ ಇನ್‌ಸ್ಪೆಕ್ಟರ್‌ ಕ್ರಮಕ್ಕೆ ಹೈಕೋರ್ಟ್‌ ತರಾಟೆ

    September 28, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ಕಳಿಯಾಟ ಮಹೋತ್ಸವದ ಸಿದ್ಧತೆಗೆ ಸಮಿತಿ ರಚನಾ ಸಭೆ

    September 28, 2026

    15 ದಿನಗಳಲ್ಲಿ 51 ಶಾಲೆಗಳಿಗೆ ಭೇಟಿ 15ರ ಬಾಲಕಿಯ ಸಾಧನೆ ವಿಶ್ವ ದಾಖಲೆ ; ಪರೀಕ್ಷಾ ಒತ್ತಡದ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ವಿಷ್ಣುಪ್ರಿಯಾ

    September 28, 2026

    “ಪೊಲೀಸ್ ಪವರ್ ತೋರಿಸಬೇಡಿ ಸಮವಸ್ತ್ರ ಬಿಚ್ಚಿ ನಿಲ್ಲಿಸ್ತೀನಿ ” ಉಲ್ಲಾಳ ಇನ್‌ಸ್ಪೆಕ್ಟರ್‌ ಕ್ರಮಕ್ಕೆ ಹೈಕೋರ್ಟ್‌ ತರಾಟೆ

    September 28, 2026

    ಮಾಣಿ ಬಳಿ ಬೆಳಂಬೆಳಗ್ಗೆ ಭೀಕರ ಅಪಘಾತ; ಓರ್ವ ಮಹಿಳೆ ಮೃತ್ಯು, ಮೂವರು ಗಂಭೀರ

    September 28, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    15 ದಿನಗಳಲ್ಲಿ 51 ಶಾಲೆಗಳಿಗೆ ಭೇಟಿ 15ರ ಬಾಲಕಿಯ ಸಾಧನೆ ವಿಶ್ವ ದಾಖಲೆ ; ಪರೀಕ್ಷಾ ಒತ್ತಡದ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ವಿಷ್ಣುಪ್ರಿಯಾ

    September 28, 2026

    “ಪೊಲೀಸ್ ಪವರ್ ತೋರಿಸಬೇಡಿ ಸಮವಸ್ತ್ರ ಬಿಚ್ಚಿ ನಿಲ್ಲಿಸ್ತೀನಿ ” ಉಲ್ಲಾಳ ಇನ್‌ಸ್ಪೆಕ್ಟರ್‌ ಕ್ರಮಕ್ಕೆ ಹೈಕೋರ್ಟ್‌ ತರಾಟೆ

    September 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.