ಮಂಗಳೂರು: ಕೊಡಿಯಾಲ್ ಬೈಲ್ ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದಲ್ಲಿ ಬರೋಬ್ಬರಿ ಏಳು ದಶಕಗಳ ಬಳಿಕ 2027ರಲ್ಲಿ ಕಳಿಯಾಟ ಮಹೋತ್ಸವ ನಡೆಯಲಿದ್ದು, ಈ ಅಪೂರ್ವ ಆಚರಣೆಗೆ ಈಗಾಗಲೇ ಸಿದ್ಧತೆಗಳು ಆರಂಭವಾಗಿವೆ. ಮಹೋತ್ಸವದ ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಹಾಗೂ ಸಾರ್ವಜನಿಕರು ಪಾಲ್ಗೊಂಡು ಪುಣ್ಯಭಾಗಿಗಳಾಗಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಮನವಿ ಮಾಡಿದರು.
2027ರ ಕಳಿಯಾಟ ಮಹೋತ್ಸವದ ಸಿದ್ಧತೆಗಳ ಭಾಗವಾಗಿ ರವಿವಾರ ಕೂಟಕ್ಕಳ ಸಭಾಂಗಣದಲ್ಲಿ ಸಮಿತಿ ರಚನಾ ಸಭೆ ನಡೆಯಿತು. ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಶಾಸಕ ವೇದವ್ಯಾಸ ಕಾಮತ್, ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಮಹೋತ್ಸವ ನಡೆಯಲಿದ್ದು, ಅದರ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು.
ಕಳಿಯಾಟ ಮಹೋತ್ಸವದ ಅಂಗವಾಗಿ ನಡೆಯಲಿರುವ ಧಾರ್ಮಿಕ ಆಚರಣೆಗಳು ಅಪರೂಪದ ಮಹತ್ವ ಹೊಂದಿದ್ದು, ಇಂತಹ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳುವ ಅವಕಾಶ ದೊರೆಯಲಿದೆ ಎಂದು ಅವರು ತಿಳಿಸಿದರು. ಮಹೋತ್ಸವದ ಎಲ್ಲಾ ಚಟುವಟಿಕೆಗಳು ಸುಸೂತ್ರವಾಗಿ ನಡೆಯುವಂತೆ ಒಟ್ಟಾಗಿ ಕೆಲಸ ಮಾಡುವಂತೆ ಮನವಿ ಮಾಡಿದರು.
ಕಾರ್ಯಕ್ರಮಕ್ಕೆ ಭಗವತೀ ಕ್ಷೇತ್ರದ ಆಚಾರಪಟ್ಟವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನರೇಂದ್ರ ಎಲ್. ನಾಯಕ್, ಲಕುಮಿ ತಂಡದ ಮುಖ್ಯಸ್ಥ ಕಿಶೋರ್ ಡಿ. ಶೆಟ್ಟಿ, ಕ್ಷೇತ್ರದ ಅಧ್ಯಕ್ಷ ಗಣೇಶ್ ಕುಂಟಲ್ಪಾಡಿ, ಮೊಕ್ತೇಸರ ವಿಶ್ವನಾಥ ಮಂಕಿಸ್ಟ್ಯಾಂಡ್ ಉಪಸ್ಥಿತರಿದ್ದರು.
ಉಳ್ಳಾಲ ಶ್ರೀ ಚಿರುಂಭ ಭಗವತೀ ಕ್ಷೇತ್ರದ ಅಧ್ಯಕ್ಷ ಚಿದಾನಂದ ಗುರಿಕಾರ ನಂದ್ಯಾ, ಮೊಕ್ತೇಸರ ಸುರೇಶ್ ಭಟ್ನಗರ, ನಿಕಟಪೂರ್ವ ಕಾರ್ಪೊರೇಟರ್ ಲೀಲಾವತಿ ಪ್ರಕಾಶ್, ಅಡ್ಕ ಶ್ರೀ ಭಗವತೀ ಕ್ಷೇತ್ರದ ಕಾರ್ಯದರ್ಶಿ ಜಯಂತ ವಿ. ಬಂದ್ಯೋಡ್, ಉಪ್ಪಳ ಭಗವತೀ ಕ್ಷೇತ್ರದ ಅಧ್ಯಕ್ಷ ಸುಕುಮಾರ್ ಹಾಗೂ ಪಟ್ಟತ್ತೂರು ಭಗವತೀ ಕ್ಷೇತ್ರದ ಅಧ್ಯಕ್ಷ ಜಯರಾಮ್ ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಭಾರತೀಯ ತೀಯ ಸಮಾಜ ಮಂಗಳೂರು ವಲಯದ ಅಧ್ಯಕ್ಷ ರಾಕೇಶ್ ಬಿಕರ್ನಕಟ್ಟೆ, ಉದ್ಯಮಿ ಅಶೋಕ್ ಕುಮಾರ್, ಬಂಟ್ವಾಳ ತಾಲೂಕು ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಕೊಡಿಯಾಲ್ ಬೈಲ್ ಅಧ್ಯಕ್ಷ ಸದಾನಂದ ಶೆಟ್ಟಿ, ಯುವಜನ ಸಮಿತಿ ಅಧ್ಯಕ್ಷ ಜಗದೀಶ್ ಕದ್ರಿ ಹಾಗೂ ಮಹಿಳಾ ಸಮಿತಿ ಅಧ್ಯಕ್ಷೆ ಆಶಾ ಚಂದ್ರಮೋಹನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮೊಕ್ತೇಸರರಾದ ಮೋನಪ್ಪ ಮಜಿ, ರಾಜಗೋಪಾಲ್, ರವೀಂದ್ರ ಕೆ., ಉಷಾ ಪ್ರಭಾಕರ್, ಸರಳ ನಾಗೇಶ್, ಉದಯ ಕುಡುಪು ಮತ್ತು ಲೋಕೇಶ್ ಬೋಳಾರ್ ಕೂಡ ಸಭೆಯಲ್ಲಿ ಪಾಲ್ಗೊಂಡಿದ್ದರು.
ಮೊಕ್ತೇಸರ ಸುಜನ್ ದಾಸ್ ಕುಡುಪು ಸ್ವಾಗತಿಸಿದರು. ವೈ.ಬಿ. ಸುಂದರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಸುಧೀರ್ ಬಿ. ಜಪ್ಪು ಅವರು ಸಮಿತಿ ರಚನೆಯ ಕಾರ್ಯದಲ್ಲಿ ಸಹಕರಿಸಿದರು.
ವಿವಿಧ ಭಗವತೀ ಕ್ಷೇತ್ರಗಳ ಪದಾಧಿಕಾರಿಗಳು, ಗ್ರಾಮ ಸಂಘಗಳ ಪ್ರತಿನಿಧಿಗಳು, ಯುವಜನ ವೇದಿಕೆ ಮತ್ತು ಮಹಿಳಾ ವೇದಿಕೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸುಕೇಶ್ ಮಂಜನಾಡಿ ಕಾರ್ಯಕ್ರಮ ನಿರೂಪಿಸಿದರು.









