Close Menu
    What's Hot

    ‘ಏಕಪಕ್ಷೀಯ ನಿರ್ಧಾರ’ ಆರೋಪ; ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಸಮ್ಮತಿ

    September 29, 2026

    ಸಿನಿಮಾ ಯೋಜನೆಗಳ ಹೆಸರಿನಲ್ಲಿ ಹಣ ವರ್ಗಾವಣೆ ಆರೋಪ; ರಕುಲ್ ಪ್ರೀತ್ ಸಿಂಗ್‌ಗೆ ಸೇರಿದ ಸ್ಥಳಗಳಲ್ಲಿ ಐಟಿ ಪರಿಶೋಧನೆ

    September 29, 2026

    ಕಾರ್ಕಳದಲ್ಲಿ ಮನೆಗಾಗಿ ತಂದೆ–ಮಗನ ನಡುವೆ ಗಲಾಟೆ; ಕತ್ತಿಯಿಂದ ಕಡಿದು ಕೊಲೆಗೆ ಯತ್ನ

    September 29, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಕಾರ್ಕಳದಲ್ಲಿ ಮನೆಗಾಗಿ ತಂದೆ–ಮಗನ ನಡುವೆ ಗಲಾಟೆ; ಕತ್ತಿಯಿಂದ ಕಡಿದು ಕೊಲೆಗೆ ಯತ್ನ
    ಅಪರಾಧ

    ಕಾರ್ಕಳದಲ್ಲಿ ಮನೆಗಾಗಿ ತಂದೆ–ಮಗನ ನಡುವೆ ಗಲಾಟೆ; ಕತ್ತಿಯಿಂದ ಕಡಿದು ಕೊಲೆಗೆ ಯತ್ನ

    adminBy adminSeptember 29, 2026Updated:September 29, 2026No Comments1 Min Read

    ಕಾರ್ಕಳ : ನೂತನ ಮನೆ ಬಿಟ್ಟುಕೊಡುವ ವಿಚಾರವಾಗಿ ಆರಂಭವಾದ ಕುಟುಂಬ ಜಗಳ ವಿಕೋಪಕ್ಕೆ ತಿರುಗಿ, ತಂದೆಯೊಬ್ಬ ತನ್ನ ಮಗನನ್ನೇ ಕತ್ತಿಯಿಂದ ಕಡಿದು ಭೀಕರವಾಗಿ ಕೊಲೆಗೆ ಯತ್ನಿಸಿರುವ ಘಟನೆ ಕಾರ್ಕಳ ತಾಲೂಕಿನ ತೆಳ್ಳಾರು ದುರ್ಗಾ ಗ್ರಾಮದ ಪುಲ್ಲಾಟ್ ಎಂಬಲ್ಲಿ ಸೆಪ್ಟೆಂಬರ್ 28 ರಂದು ರಾತ್ರಿ ನಡೆದಿದೆ. ಘಟನೆಯಲ್ಲಿ ತೀವ್ರ ರಕ್ತಗಾಯಗೊಂಡಿರುವ ಪುಲ್ಲಾಟ್ ನಿವಾಸಿ ಚಾಲ್ಸ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

    ಗಾಯಾಳು ಚಾಲ್ಸ್ ಮದ್ಯಪಾನ ಚಟಕ್ಕೆ ಒಳಗಾಗಿದ್ದು, ಅವರ ಪತ್ನಿ 2018ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸದ್ಯ ತಮ್ಮ ತಂದೆ ಮಥಾಯ್, ತಾಯಿ ತ್ರೆಸಿಯಾಮ್ ಹಾಗೂ ಮಗಳೊಂದಿಗೆ ಒಂದೇ ಮನೆಯಲ್ಲಿ ವಾಸವಾಗಿದ್ದರು. ಹಳೆ ಮನೆಯ ಸಮೀಪದಲ್ಲಿಯೇ ತಂದೆ ಮಥಾಯ್ ಹೊಸ ಮನೆಯೊಂದನ್ನು ಕಟ್ಟಿಸುತ್ತಿದ್ದರು.

    ಸೆಪ್ಟೆಂಬರ್ . 28 ರಂದು ರಾತ್ರಿ 10 ಗಂಟೆಯ ಸುಮಾರಿಗೆ ಚಾಲ್ಸ್ ತಮ್ಮ ತಾಯಿ ತ್ರೆಸಿಯಾಮ್ ಜೊತೆ ಜಗಳ ತೆಗೆದು, “ಹೊಸದಾಗಿ ಕಟ್ಟುತ್ತಿರುವ ಮನೆಯನ್ನು ನನಗೇ ಬಿಟ್ಟುಕೊಡಬೇಕು” ಎಂದು ಗಲಾಟೆ ಮಾಡುತ್ತಿದ್ದರು.
    ಜಗಳ ಬಿಡಿಸಲು ತಂದೆ ಮಥಾಯ್ ಮಧ್ಯಪ್ರವೇಶಿಸಿದಾಗ, ಮಾತಿಗೆ ಮಾತು ಬೆಳೆದು ಆಯತಪ್ಪಿ ಮಥಾಯ್ ಕೆಳಗೆ ಬಿದ್ದಿದ್ದಾರೆ. ಬಳಿಕ ಮಥಾಯ್ ಎದ್ದು ಹೊಸದಾಗಿ ಕಟ್ಟುತ್ತಿರುವ ಮನೆಯ ಶೆಡ್ ಮುಂದೆ ಕುಳಿತುಕೊಂಡಿದ್ದರು. ಆ ಸಂದರ್ಭದಲ್ಲಿ ಅಲ್ಲಿಗೂ ಬಂದ ಚಾಲ್ಸ್ ತಂದೆಯ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾರೆ. ರೊಚ್ಚಿಗೆದ್ದ ತಂದೆ ಮಥಾಯ್ ತಕ್ಷಣವೇ ಕತ್ತಿಯಿಂದ ಮಗ ಚಾಲ್ಸ್‌ನ ಕುತ್ತಿಗೆ ಹಾಗೂ ಎದೆಯ ಭಾಗಕ್ಕೆ ಬಲವಾಗಿ ಕಡಿದು ಕೊಲೆಗೆ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

    ಗಂಭೀರ ಗಾಯಗೊಂಡು ಕುಸಿದುಬಿದ್ದ ಚಾಲ್ಸ್ ಅವರನ್ನು ಸ್ಥಳೀಯರ ನೆರವಿನಿಂದ ತಕ್ಷಣವೇ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಸಾಗಿಸಿ ಒಳರೋಗಿಯಾಗಿ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಗಾಯಾಳುವಿನ ತಂದೆ ಮಥಾಯ್ ವಿರುದ್ಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಸೇರಿದಂತೆ ವಿವಿಧ ಗಂಭೀರ ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

     




    #crime #dakshinakannada #udupi
    Previous Articleಮಂಗಳೂರು ಪಾಲಿಕೆಯ ಎಡಿಬಿ ಸಾಲಕ್ಕೆ 24ಕ್ಕೂ ಹೆಚ್ಚು ನೋಟಿಸ್; ಒಂದೇ ಕಂತೂ ಪಾವತಿಸದೆ ಬಡ್ಡಿ ಸೇರಿ ₹1,375 ಕೋಟಿಗೆ ಏರಿಕೆ
    Next Article ಸಿನಿಮಾ ಯೋಜನೆಗಳ ಹೆಸರಿನಲ್ಲಿ ಹಣ ವರ್ಗಾವಣೆ ಆರೋಪ; ರಕುಲ್ ಪ್ರೀತ್ ಸಿಂಗ್‌ಗೆ ಸೇರಿದ ಸ್ಥಳಗಳಲ್ಲಿ ಐಟಿ ಪರಿಶೋಧನೆ

    Related Posts

    ‘ಏಕಪಕ್ಷೀಯ ನಿರ್ಧಾರ’ ಆರೋಪ; ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಸಮ್ಮತಿ

    September 29, 2026

    ಸಿನಿಮಾ ಯೋಜನೆಗಳ ಹೆಸರಿನಲ್ಲಿ ಹಣ ವರ್ಗಾವಣೆ ಆರೋಪ; ರಕುಲ್ ಪ್ರೀತ್ ಸಿಂಗ್‌ಗೆ ಸೇರಿದ ಸ್ಥಳಗಳಲ್ಲಿ ಐಟಿ ಪರಿಶೋಧನೆ

    September 29, 2026

    ಮಂಗಳೂರು ಪಾಲಿಕೆಯ ಎಡಿಬಿ ಸಾಲಕ್ಕೆ 24ಕ್ಕೂ ಹೆಚ್ಚು ನೋಟಿಸ್; ಒಂದೇ ಕಂತೂ ಪಾವತಿಸದೆ ಬಡ್ಡಿ ಸೇರಿ ₹1,375 ಕೋಟಿಗೆ ಏರಿಕೆ

    September 29, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ‘ಏಕಪಕ್ಷೀಯ ನಿರ್ಧಾರ’ ಆರೋಪ; ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಸಮ್ಮತಿ

    September 29, 2026

    ಸಿನಿಮಾ ಯೋಜನೆಗಳ ಹೆಸರಿನಲ್ಲಿ ಹಣ ವರ್ಗಾವಣೆ ಆರೋಪ; ರಕುಲ್ ಪ್ರೀತ್ ಸಿಂಗ್‌ಗೆ ಸೇರಿದ ಸ್ಥಳಗಳಲ್ಲಿ ಐಟಿ ಪರಿಶೋಧನೆ

    September 29, 2026

    ಕಾರ್ಕಳದಲ್ಲಿ ಮನೆಗಾಗಿ ತಂದೆ–ಮಗನ ನಡುವೆ ಗಲಾಟೆ; ಕತ್ತಿಯಿಂದ ಕಡಿದು ಕೊಲೆಗೆ ಯತ್ನ

    September 29, 2026

    ಮಂಗಳೂರು ಪಾಲಿಕೆಯ ಎಡಿಬಿ ಸಾಲಕ್ಕೆ 24ಕ್ಕೂ ಹೆಚ್ಚು ನೋಟಿಸ್; ಒಂದೇ ಕಂತೂ ಪಾವತಿಸದೆ ಬಡ್ಡಿ ಸೇರಿ ₹1,375 ಕೋಟಿಗೆ ಏರಿಕೆ

    September 29, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕುಂದಾಪುರ: “ಸ್ವಲ್ಪ ನಿಧಾನವಾಗಿ ಮಾತನಾಡಿ” ಎಂದಿದ್ದಕ್ಕೆ ಸೋಡಾ ಬಾಟಲಿಯಿಂದ ಹಲ್ಲೆ; ನಾಲ್ವರ ವಿರುದ್ಧ ಕೇಸ್

    September 29, 2026

    ಕೆಪಿಎಸ್‌ಸಿ ನೇಮಕಾತಿ ಅಕ್ರಮ; ಇಡಿ ದಾಳಿಯಲ್ಲಿ ಸಿಕ್ಕ ಡೈರಿಯಲ್ಲಿ ಲಕ್ಷಾಂತರ ಹಣದ ಲೆಕ್ಕ ಪತ್ತೆ

    September 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.