Close Menu
    What's Hot

    ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ ;ಆಕಾಶದೆತ್ತರ ಕಾಣಿಸಿದ ಹೊಗೆ,ಅಗ್ನಿಶಾಮಕ ದಳದ ಕಾರ್ಯಾಚರಣೆ

    September 30, 2026

    ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಸಾಧ್ಯತೆ; ಮುಖ್ಯ ನ್ಯಾಯಮೂರ್ತಿಯಿಂದ ಸಮಿತಿ ರಚನೆ

    September 30, 2026

    25ಕ್ಕೂ ಹೆಚ್ಚು ದೂರುಗಳ ಬೆನ್ನಲ್ಲೇ ನಕಲಿ ಲೇಡಿ PSI ಅರೆಸ್ಟ್; ಚಿನ್ನ, ಕಾರು, ಹಣ ವಂಚನೆ ಆರೋಪ

    September 30, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ ;ಆಕಾಶದೆತ್ತರ ಕಾಣಿಸಿದ ಹೊಗೆ,ಅಗ್ನಿಶಾಮಕ ದಳದ ಕಾರ್ಯಾಚರಣೆ
    ಕರಾವಳಿ ಸುದ್ದಿ

    ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ ;ಆಕಾಶದೆತ್ತರ ಕಾಣಿಸಿದ ಹೊಗೆ,ಅಗ್ನಿಶಾಮಕ ದಳದ ಕಾರ್ಯಾಚರಣೆ

    adminBy adminSeptember 30, 2026No Comments1 Min Read

    ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಬುಧವಾರ ಭಾರೀ ಸ್ಫೋಟ ಸಂಭವಿಸಿದ್ದು, ಮಂಗಳೂರಿನ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಭೂಕಂಪದ ಅನುಭವದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಬಜ್ಪೆ, ಕಳವಾರು, ಬೈಕಂಪಾಡಿ, ಜೋಕಟ್ಟೆ, ಸುರತ್ಕಲ್ ಹಾಗೂ ಕಾಟಿಪಳ್ಳ ಭಾಗಗಳಲ್ಲಿ ಸ್ಫೋಟದ ಭಾರೀ ಶಬ್ದ ಕೇಳಿಬಂದಿದ್ದು, ದಟ್ಟ ಹೊಗೆ ಆವರಿಸಿದೆ.

    ತೈಲ ಸ್ಥಾವರದ ಮೂರನೇ ಪ್ಲಾಂಟ್‌ ಇರುವ ಜೋಕಟ್ಟೆ ಭಾಗದಲ್ಲಿ ಸ್ಫೋಟ ಸಂಭವಿಸಿರುವುದಾಗಿ ವರದಿಯಾಗಿದೆ. ಅಲ್ಲಿಂದ ಬೆಂಕಿಯ ಜ್ವಾಲೆ ಮತ್ತು ಭಾರೀ ಪ್ರಮಾಣದ ಹೊಗೆ ಕಾಣಿಸಿಕೊಂಡಿದೆ. ಜೋಕಟ್ಟೆ ಪಂಚಾಯತ್ ಕಟ್ಟಡ ಸೇರಿದಂತೆ ಸುತ್ತಮುತ್ತಲಿನ ಕೆಲವು ಮನೆಗಳು ನಡುಗಿದ್ದು, ಆತಂಕಗೊಂಡ ನಿವಾಸಿಗಳು ಮನೆಯಿಂದ ಹೊರಗೆ ಬಂದಿದ್ದಾರೆ. ಕೆಲವು ಕಟ್ಟಡಗಳಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂದು ಡಿವೈಎಫ್‌ಐ ಮುಖಂಡ ಮುನೀರ್ ಕಾಟಿಪಳ್ಳ ತಿಳಿಸಿದ್ದಾರೆ.

    ಮೂರನೇ ಪ್ಲಾಂಟ್‌ನ ಕಟ್ಟಡದ ಕೆಳಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ದಟ್ಟ ಹೊಗೆಯಿಂದ ಒಳಭಾಗದಲ್ಲಿ ನಿಖರವಾಗಿ ಏನಾಗಿದೆ ಎಂಬ ಮಾಹಿತಿ ಸದ್ಯ ಲಭ್ಯವಾಗಿಲ್ಲ. ಸ್ಫೋಟದ ಶಬ್ದ ಬೈಕಂಪಾಡಿ ಮತ್ತು ಸುರತ್ಕಲ್‌ವರೆಗೂ ಕೇಳಿಸಿತು ಎನ್ನಲಾಗಿದೆ. ಘಟನೆಯ ಹಿನ್ನೆಲೆಯಲ್ಲಿ ತೈಲ ಸ್ಥಾವರದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿರಬಹುದೇ ಎಂಬ ಅನುಮಾನ ವ್ಯಕ್ತವಾಗಿದೆ. ಮಂಗಳೂರು ವಿಮಾನ ನಿಲ್ದಾಣದ ಸುತ್ತಮುತ್ತಲೂ ದಟ್ಟ ಹೊಗೆ ಕಂಡು ಆತಂಕದ ವಾತಾವರಣ ನಿರ್ಮಾಣವಾಗಿದೆ.

    ಬೆಂಕಿ ನಂದಿಸುವ ಕಾರ್ಯಕ್ಕಾಗಿ ಮಂಗಳೂರು ಹಾಗೂ ಪಾಂಡೇಶ್ವರ ಸೇರಿದಂತೆ ಸಮೀಪದ ಪ್ರದೇಶಗಳ ಅಗ್ನಿಶಾಮಕ ವಾಹನಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಗಿದೆ. ಸದ್ಯ ಬೆಂಕಿ ನಿಯಂತ್ರಿಸುವ ಕಾರ್ಯ ನಡೆಯುತ್ತಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಸಾವು-ನೋವು ಸಂಭವಿಸಿರುವ ಬಗ್ಗೆ ಆ ವೇಳೆಗೆ ಯಾವುದೇ ಮಾಹಿತಿ ಲಭ್ಯವಾಗಿರಲಿಲ್ಲ. ಎಂಆರ್‌ಪಿಎಲ್ ಅಧಿಕಾರಿಗಳಿಂದ ಅಧಿಕೃತ ಮಾಹಿತಿ ಇನ್ನೂ ಹೊರಬಂದಿರಲಿಲ್ಲ.

    #dakshinakannada
    Previous Articleಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಸಾಧ್ಯತೆ; ಮುಖ್ಯ ನ್ಯಾಯಮೂರ್ತಿಯಿಂದ ಸಮಿತಿ ರಚನೆ

    Related Posts

    ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಸಾಧ್ಯತೆ; ಮುಖ್ಯ ನ್ಯಾಯಮೂರ್ತಿಯಿಂದ ಸಮಿತಿ ರಚನೆ

    September 30, 2026

    ಉಡುಪಿಯಲ್ಲಿ ನಾಪತ್ತೆಯಾದ ಖಾಸಗಿ ಬಸ್ ಕೆಲವೇ ಗಂಟೆಗಳಲ್ಲಿ ಪತ್ತೆ; ಕಳ್ಳರಿಗಾಗಿ ಪೊಲೀಸರ ಶೋಧ

    September 30, 2026

    ಕರಂಗಲ್ಪಾಡಿ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಗೂಡ್ಸ್ ಆಟೋ ಚಾಲಕ ಸಾವು

    September 30, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ ;ಆಕಾಶದೆತ್ತರ ಕಾಣಿಸಿದ ಹೊಗೆ,ಅಗ್ನಿಶಾಮಕ ದಳದ ಕಾರ್ಯಾಚರಣೆ

    September 30, 2026

    ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಸಾಧ್ಯತೆ; ಮುಖ್ಯ ನ್ಯಾಯಮೂರ್ತಿಯಿಂದ ಸಮಿತಿ ರಚನೆ

    September 30, 2026

    25ಕ್ಕೂ ಹೆಚ್ಚು ದೂರುಗಳ ಬೆನ್ನಲ್ಲೇ ನಕಲಿ ಲೇಡಿ PSI ಅರೆಸ್ಟ್; ಚಿನ್ನ, ಕಾರು, ಹಣ ವಂಚನೆ ಆರೋಪ

    September 30, 2026

    ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    September 30, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    25ಕ್ಕೂ ಹೆಚ್ಚು ದೂರುಗಳ ಬೆನ್ನಲ್ಲೇ ನಕಲಿ ಲೇಡಿ PSI ಅರೆಸ್ಟ್; ಚಿನ್ನ, ಕಾರು, ಹಣ ವಂಚನೆ ಆರೋಪ

    September 30, 2026

    ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    September 30, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.