Close Menu
    What's Hot

    ಮಂಗಳೂರಿನಲ್ಲಿ ಮನೆಗಳ್ಳತನ; 24 ಗಂಟೆಯೊಳಗೆ ಇಬ್ಬರು ಆರೋಪಿಗಳ ಬಂಧನ, ₹18 ಲಕ್ಷದ ಸೊತ್ತು ಪತ್ತೆ

    October 3, 2026

    ಸಿಎಂ ಕರೆ ಬಳಿಕ ಪೂವಮ್ಮ ಭಾವುಕ; ‘ಕ್ರೀಡಾ ಜೀವನಕ್ಕೆ ಸಂಪೂರ್ಣ ಬೆಂಬಲದ ಭರವಸೆ ಸಿಕ್ಕಿದೆ’

    October 3, 2026

    ದಕ್ಷಿಣ ಕನ್ನಡ, ಉಡುಪಿ, ಕೊಡಗಿನ 7 ತಾಲೂಕುಗಳು ಬರಪೀಡಿತ ಘೋಷಣೆ; ಕುಡಿಯುವ ನೀರಿಗೆ ವಿಶೇಷ ಕ್ರಮ

    October 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮಂಗಳೂರಿನಲ್ಲಿ ಮನೆಗಳ್ಳತನ; 24 ಗಂಟೆಯೊಳಗೆ ಇಬ್ಬರು ಆರೋಪಿಗಳ ಬಂಧನ, ₹18 ಲಕ್ಷದ ಸೊತ್ತು ಪತ್ತೆ
    ಅಪರಾಧ

    ಮಂಗಳೂರಿನಲ್ಲಿ ಮನೆಗಳ್ಳತನ; 24 ಗಂಟೆಯೊಳಗೆ ಇಬ್ಬರು ಆರೋಪಿಗಳ ಬಂಧನ, ₹18 ಲಕ್ಷದ ಸೊತ್ತು ಪತ್ತೆ

    adminBy adminOctober 3, 2026No Comments2 Mins Read

    ಮಂಗಳೂರು: ಬರ್ಕೆ ಮತ್ತು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಯಲ್ಲಿನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮೂಲದ ಇಬ್ಬರು ಕುಖ್ಯಾತ ಮನೆಗಳ್ಳರನ್ನು ಬಂಧಿಸಲಾಗಿದ್ದು, ಬಂಧಿತರಿಂದ 18 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳು ಸೇರಿದಂತೆ ಕಳವು ಸೊತ್ತು ವಶಪಡಿಸಿಕೊಳ್ಳಲಾಗಿದೆ.

    ಈಶಾನ್ಯ ದೆಹಲಿಯ ಗೋಕುಲ್ ಪುರಿ ನಿವಾಸಿ ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ(34) ಹಾಗೂ ದೆಹಲಿಯ ಸುಲ್ತಾನ್ ಪುರಿ ನಿವಾಸಿ ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34)
    ಬಂಧಿತ ಆರೋಪಿಗಳು.

    ಮಂಗಳೂರು ನಗರದ ಅಳಕೆ ಕಂಬ್ಲ ಕ್ರಾಸ್ ರಸ್ತೆಯಲ್ಲಿರುವ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್ನಲ್ಲಿನ ಮನೆಯವರು ಸೆ. 28 ರಂದು ಮಧ್ಯಾಹ್ನ ಸುಮಾರು 3:00 ಗಂಟೆಗೆ ಮನೆಯ ಬಾಗಿಲಿಗೆ ಲಾಕ್ ಹಾಕಿಕೊಂಡು ಮಾರುಕಟ್ಟೆಗೆ ತೆರಳಿದ್ದರು. ಅವರು ಸಂಜೆ ಸುಮಾರು 5:10 ಗಂಟೆಗೆ ಮನೆಗೆ ಹಿಂದಿರುಗಿ ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಕೊಂಡಿ ಮುರಿದಿರುವುದು ಬೆಳಕಿಗೆ ಬಂದಿದೆ. ಕಳ್ಳರು ಮನೆಯಲ್ಲಿದ್ದ ಸುಮಾರು 14 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳು, ನಗದು ಹಣ, ವಾಚ್ ಹಾಗೂ ಒಂದು ಟ್ರಾಲಿ ಬ್ಯಾಗ್ ಸೇರಿದಂತೆ ಸೊತ್ತುಗಳನ್ನು ಕಳವು ಮಾಡಿದ್ದರು. ಈ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 121/2026, ಕಲಂ 331(3), 305 BNS ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.

    ಅದೇ ರೀತಿ ಸೆ. 27ರಂದು ಹಗಲು ವೇಳೆಯಲ್ಲಿ ಬರ್ಕೆ ಪೊಲೀಸ್ ಠಾಣಾ ಸರಹದ್ದಿ ಬೊಕ್ಕಪಾಟ್ನ ರಸ್ತೆಯ ಮನೆಯೊಂದರಲ್ಲಿ ಲಾಕರ್ ಹೊಡೆದು ಕಳವು ಮಾಡಲು ಯಾವುದೇ ಬೆಲೆಬಾಳುವ ಸೊತ್ತು ದೊರೆಯದೇ, ಚೆಕ್ ಪುಸ್ತಕಗಳನ್ನು ಕಳವು ಮಾಡಿದ್ದು, ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆ ಅ.ಕ್ರ 86/2026 ಕಲಂ 331(3), 305 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿತ್ತು.

    ಪ್ರಕರಣಗಳ ತನಿಖೆಯನ್ನು ಕೈಗೊಂಡು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡದ ಮೂಲಕ ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದು, ಆರೋಪಿಗಳು ಮನೆಕಳ್ಳತನ ನಡೆಸಿದ ಬಳಿಕ ರೈಲಿನಲ್ಲಿ ದೆಹಲಿ ಕಡೆಗೆ ಪ್ರಯಾಣಿಸುತ್ತಿರುವುದು ಪತ್ತೆಯಾಗಿದ್ದು, ತಕ್ಷಣ ಗುಜರಾತ್ ರಾಜ್ಯದ ವಡೋದರಾ ಪೊಲೀಸರ ಸಹಾಯ ಪಡೆಯಲಾಯಿತು.

    ಪೊಲೀಸರ ತಂಡವು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಾದ 24 ಗಂಟೆಗಳ ಒಳಗಾಗಿ ಸೆ. 29 ರಂದು ವಡೋದರದಲ್ಲಿ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದೆ. ಆರೋಪಿಗಳಿಂದ ಕಳವು ಮಾಡಲಾಗಿದ್ದ ಎಲ್ಲಾ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ಸುಮಾರು 18 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

    ಆರೋಪಿಗಳನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ಆರೋಪಿತರಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ಮುಂದಿನ ತನಿಖೆಯ ಸಲುವಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗುವುದು.

    ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ಎಂಬಾತನ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿರುವುದು ಮತ್ತು ಇತನ ವಿರುದ್ದ ವಾರಂಟು ಹಾಗೂ ಪ್ರೊಕ್ಲಮೇಶನ್ ಬಾಕಿ ಇದ್ದು, ಸಂಬಂಧಪಟ್ಟ ಠಾಣೆಗಳಿಗೆ ಮುಂದಿನ ಕ್ರಮಕ್ಕಾಗಿ ಮಾಹಿತಿಯನ್ನು ನೀಡಲಾಗಿದೆ.




    #crime #dakshinakannada
    Previous Articleಸಿಎಂ ಕರೆ ಬಳಿಕ ಪೂವಮ್ಮ ಭಾವುಕ; ‘ಕ್ರೀಡಾ ಜೀವನಕ್ಕೆ ಸಂಪೂರ್ಣ ಬೆಂಬಲದ ಭರವಸೆ ಸಿಕ್ಕಿದೆ’

    Related Posts

    ಸಿಎಂ ಕರೆ ಬಳಿಕ ಪೂವಮ್ಮ ಭಾವುಕ; ‘ಕ್ರೀಡಾ ಜೀವನಕ್ಕೆ ಸಂಪೂರ್ಣ ಬೆಂಬಲದ ಭರವಸೆ ಸಿಕ್ಕಿದೆ’

    October 3, 2026

    ದಕ್ಷಿಣ ಕನ್ನಡ, ಉಡುಪಿ, ಕೊಡಗಿನ 7 ತಾಲೂಕುಗಳು ಬರಪೀಡಿತ ಘೋಷಣೆ; ಕುಡಿಯುವ ನೀರಿಗೆ ವಿಶೇಷ ಕ್ರಮ

    October 3, 2026

    ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಮೇಲೆ ದಾಳಿ; ಫ್ಲೈದುಬೈ ಸಹ-ಪೈಲಟ್‌ನ ಗುರುತು ಬಹಿರಂಗ

    October 3, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಂಗಳೂರಿನಲ್ಲಿ ಮನೆಗಳ್ಳತನ; 24 ಗಂಟೆಯೊಳಗೆ ಇಬ್ಬರು ಆರೋಪಿಗಳ ಬಂಧನ, ₹18 ಲಕ್ಷದ ಸೊತ್ತು ಪತ್ತೆ

    October 3, 2026

    ಸಿಎಂ ಕರೆ ಬಳಿಕ ಪೂವಮ್ಮ ಭಾವುಕ; ‘ಕ್ರೀಡಾ ಜೀವನಕ್ಕೆ ಸಂಪೂರ್ಣ ಬೆಂಬಲದ ಭರವಸೆ ಸಿಕ್ಕಿದೆ’

    October 3, 2026

    ದಕ್ಷಿಣ ಕನ್ನಡ, ಉಡುಪಿ, ಕೊಡಗಿನ 7 ತಾಲೂಕುಗಳು ಬರಪೀಡಿತ ಘೋಷಣೆ; ಕುಡಿಯುವ ನೀರಿಗೆ ವಿಶೇಷ ಕ್ರಮ

    October 3, 2026

    ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಮತ್ತಷ್ಟು ಬಿಗಿ; ಸಿಬ್ಬಂದಿಗೆ ಹೊಸ ನಿಯಮ, ಮೊಬೈಲ್ ಬಳಕೆಗೂ ನಿರ್ಬಂಧ

    October 3, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ; 150 ಅಡಿ ಕಂದಕಕ್ಕೆ ಬಿದ್ದ ಲಾರಿ, ಚಾಲಕ ಸಾವು-ಬದುಕಿನ ನಡುವೆ ರಕ್ಷಣೆ

    October 3, 2026

    ಪೊಲೀಸರಿಂದ ತಪ್ಪಿಸಿಕೊಳ್ಳಲು ಚಿನ್ನದ ಸರ ನುಂಗಿದ ಕಳ್ಳ; 50ಕ್ಕೂ ಹೆಚ್ಚು ಬಾಳೆಹಣ್ಣು ತಿನ್ನಿಸಿ ಆಭರಣ ವಶಕ್ಕೆ

    October 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.