ಕಾರ್ಕಳ: ರಾತ್ರಿ ಕಾರ್ಕಳ ಬೈಪಾಸ್ ಬಳಿ ಬೈಕ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಾಣೂರಿನ 25 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಮೃತ ವ್ಯಕ್ತಿಯನ್ನು ಸಾಣೂರಿನ ಕುಜುಮಾರ್ ಗುಡ್ಡೆ ನಿವಾಸಿ ವಿಘ್ನೇಶ್ ಆಚಾರ್ಯ (25) ಎಂದು ಗುರುತಿಸಲಾಗಿದೆ.
ಈ ಭೀಕರ ಅಪಘಾತ ಸಂಜೆ 7 ಗಂಟೆ ಸುಮಾರಿಗೆ ಸಂಭವಿಸಿದೆ. ವರದಿಗಳ ಪ್ರಕಾರ, ವಿಘ್ನೇಶ್ ಸವಾರಿ ಮಾಡುತ್ತಿದ್ದ ಬೈಕ್ ಮತ್ತು ಲಾರಿಯ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಅವರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದರು.
ಸ್ಥಳೀಯ ಪೊಲೀಸರು ಅಪಘಾತ ಸ್ಥಳಕ್ಕೆ ಭೇಟಿ ನೀಡಿ, ಪ್ರಾಥಮಿಕ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಸ್ತುತ ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.








