Close Menu
    What's Hot

    ವಂದೇ ಭಾರತ್ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸುವ ಬೇಡಿಕೆ; ಉತ್ತರ ಕನ್ನಡ ಪ್ರಯಾಣಿಕರಿಂದ ಆಕ್ಷೇಪ

    October 6, 2026

    ‘ಜೈಲೇ ನಿಮ್ಮ ನೈಜ ಸ್ಥಾನ’; ರಾಜ್‌ಪಾಲ್ ಯಾದವ್‌ಗೆ ಸುಪ್ರೀಂ ಕೋರ್ಟ್‌ ಖಡಕ್ ಎಚ್ಚರಿಕೆ

    October 6, 2026

    ನಡುರಾತ್ರಿ ಸರ್ಕಾರಿ ಆಸ್ಪತ್ರೆಗೆ ಖಾದರ್ ಭೇಟಿ; ಸಿಬ್ಬಂದಿ ಹಾಜರಾತಿ, ವಾರ್ಡ್–ಐಸಿಯು ಪರಿಶೀಲನೆ

    October 6, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಪುತ್ತೂರು ಬಿಳಿಯೂರುಕಟ್ಟೆಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ; 11 ಜಾನುವಾರು ರಕ್ಷಣೆ
    ಅಪರಾಧ

    ಪುತ್ತೂರು ಬಿಳಿಯೂರುಕಟ್ಟೆಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ; 11 ಜಾನುವಾರು ರಕ್ಷಣೆ

    adminBy adminOctober 6, 2026No Comments1 Min Read

    ಪುತ್ತೂರು: ಪಿಕಪ್ ವಾಹನದಲ್ಲಿ ಅಕ್ರಮವಾಗಿ ಕೇರಳದ ಕಡೆಗೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಜಾಲವನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಭೇದಿಸಿದ್ದು, 11 ಜಾನುವಾರುಗಳನ್ನು ರಕ್ಷಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಅಕ್ರಮವಾಗಿ ಮಾರಾಟ ಮಾಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಪುತ್ತೂರು ಆರ್ಯಾಪು ನಿವಾಸಿ ಶಿವಪ್ರಸಾದ್ (52) ಬಂಧಿತ ಆರೋಪಿ.

    ಅಕ್ಟೋಬರ್ 5 ರಂದು ಬೆಳಗಿನ ಜಾವ ಪಿಕಪ್ ವಾಹನವೊಂದರಲ್ಲಿ ಅಕ್ರಮವಾಗಿ ಕೇರಳಕ್ಕೆ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಸುಷ್ಮಾ ಜಿ. ಭಂಡಾರಿ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಪುತ್ತೂರು ಬಲ್ನಾಡು ಗ್ರಾಮದ ಬಿಳಿಯೂರುಕಟ್ಟೆ ಎಂಬಲ್ಲಿ ಪಿಕಪ್ ವಾಹನವನ್ನು ತಡೆದಿದ್ದಾರೆ. ಈ ವೇಳೆ ಪೊಲೀಸರನ್ನು ಕಂಡು ವಾಹನದ ಚಾಲಕ ಹಾಗೂ ವಾಹನದಲ್ಲಿದ್ದ ಮತ್ತೋರ್ವ ವ್ಯಕ್ತಿ ವಾಹನವನ್ನು ಬಿಟ್ಟು ಪರಾರಿಯಾಗಿದ್ದಾರೆ.

    ಪೋಲಿಸರು ವಾಹನವನ್ನು ತಪಾಸಣೆ ನಡೆಸಿದಾಗ ಯಾವುದೇ ಅಧಿಕೃತ ಪರವಾನಗಿ ಇಲ್ಲದೆ 11 ಜಾನುವಾರುಗಳನ್ನು ಅತ್ಯಂತ ಹಿಂಸಾತ್ಮಕವಾಗಿ ತುಂಬಿರುವುದು ಕಂಡುಬಂದಿದೆ. ಈ ಜಾನುವಾರುಗಳನ್ನು ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದಲೇ ಕೇರಳದ ಕಡೆಗೆ ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎಂಬುದು ತನಿಖೆಯಿಂದ ದೃಢಪಟ್ಟಿದೆ. ಈ ಜಾನುವಾರುಗಳನ್ನು ಅಗತ್ಯ ಪರವಾನಗಿ ಇಲ್ಲದೆ ಅಕ್ರಮವಾಗಿ ಮಾರಾಟ ಮಾಡಿದ್ದ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಪೊಲೀಸರು ಬಂಧಿಸಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 125/2026, ಕಲಂ: 4, 6, 7, 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಯುವ ಕಾಯ್ದೆ ಸೆಕ್ಷನ್ 11(d) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪರಾರಿಯಾದ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ




    #crime #dakshinakannada
    Previous Articleಉಡುಪಿ ಜಿಲ್ಲಾ ಕಾರಾಗೃಹದಲ್ಲಿ ವಾರ್ಡನ್‌ಗೆ ಹಲ್ಲೆ; 15 ವರ್ಷಗಳ ಬಳಿಕ ಆರೋಪಿಗೆ 5 ವರ್ಷ ಕಠಿಣ ಶಿಕ್ಷೆ
    Next Article ನಡುರಾತ್ರಿ ಸರ್ಕಾರಿ ಆಸ್ಪತ್ರೆಗೆ ಖಾದರ್ ಭೇಟಿ; ಸಿಬ್ಬಂದಿ ಹಾಜರಾತಿ, ವಾರ್ಡ್–ಐಸಿಯು ಪರಿಶೀಲನೆ

    Related Posts

    ‘ಜೈಲೇ ನಿಮ್ಮ ನೈಜ ಸ್ಥಾನ’; ರಾಜ್‌ಪಾಲ್ ಯಾದವ್‌ಗೆ ಸುಪ್ರೀಂ ಕೋರ್ಟ್‌ ಖಡಕ್ ಎಚ್ಚರಿಕೆ

    October 6, 2026

    ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ವಾರ್ಡನ್‌ಗೆ ಹಲ್ಲೆ; 15 ವರ್ಷಗಳ ಬಳಿಕ ಆರೋಪಿಗೆ 5 ವರ್ಷ ಕಠಿಣ ಶಿಕ್ಷೆ

    October 5, 2026

    ಬಂಟ್ವಾಳದಲ್ಲಿ ಸಿಡಿಲು ಬಡಿದು ಮನೆ ಜಖಂ; ಮಹಿಳೆ ಆಸ್ಪತ್ರೆಗೆ ದಾಖಲು

    October 5, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ವಂದೇ ಭಾರತ್ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸುವ ಬೇಡಿಕೆ; ಉತ್ತರ ಕನ್ನಡ ಪ್ರಯಾಣಿಕರಿಂದ ಆಕ್ಷೇಪ

    October 6, 2026

    ‘ಜೈಲೇ ನಿಮ್ಮ ನೈಜ ಸ್ಥಾನ’; ರಾಜ್‌ಪಾಲ್ ಯಾದವ್‌ಗೆ ಸುಪ್ರೀಂ ಕೋರ್ಟ್‌ ಖಡಕ್ ಎಚ್ಚರಿಕೆ

    October 6, 2026

    ನಡುರಾತ್ರಿ ಸರ್ಕಾರಿ ಆಸ್ಪತ್ರೆಗೆ ಖಾದರ್ ಭೇಟಿ; ಸಿಬ್ಬಂದಿ ಹಾಜರಾತಿ, ವಾರ್ಡ್–ಐಸಿಯು ಪರಿಶೀಲನೆ

    October 6, 2026

    ಪುತ್ತೂರು ಬಿಳಿಯೂರುಕಟ್ಟೆಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ; 11 ಜಾನುವಾರು ರಕ್ಷಣೆ

    October 6, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ನಡುರಾತ್ರಿ ಸರ್ಕಾರಿ ಆಸ್ಪತ್ರೆಗೆ ಖಾದರ್ ಭೇಟಿ; ಸಿಬ್ಬಂದಿ ಹಾಜರಾತಿ, ವಾರ್ಡ್–ಐಸಿಯು ಪರಿಶೀಲನೆ

    October 6, 2026

    ಉಡುಪಿ: ನಿಝಾಮುದ್ದೀನ್ ಎಕ್ಸ್‌ಪ್ರೆಸ್‌ನಿಂದ ಬಿದ್ದ ಪ್ರಯಾಣಿಕ; ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವು

    October 5, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.