Close Menu
    What's Hot

    ಬೀಡಿ ಹಚ್ಚಲು ಕಡ್ಡಿ ಗೀರಿದಾಗ ಸಿಲಿಂಡರ್ ಸ್ಫೋಟ; 6 ಜನ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ

    October 19, 2026

    ಟ್ರಾಲಿ ಬ್ಯಾಗ್‌ಗಳಲ್ಲಿ ನಕಲಿ ಸಿಗರೇಟ್ ಸಾಗಾಟ : ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ

    October 19, 2026

    ದಸರಾ ಆಚರಣೆಗೆ ಮಾನವೀಯತೆಯ ಸ್ಪರ್ಶ : ಬಡ ರೋಗಿಯ ನೆರವಿಗೆ ನಿಂತ ಏಳು ಮಕ್ಕಳು

    October 19, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»Uncategorized»NH-48ರಲ್ಲಿ ಭೀಕರ ಅಪಘಾತ; ಕಾರು ನಜ್ಜುಗುಜ್ಜಾಗಿ ಮೂವರು ಸಾವು, ಇಬ್ಬರಿಗೆ ಗಂಭೀರ ಗಾಯ
    Uncategorized

    NH-48ರಲ್ಲಿ ಭೀಕರ ಅಪಘಾತ; ಕಾರು ನಜ್ಜುಗುಜ್ಜಾಗಿ ಮೂವರು ಸಾವು, ಇಬ್ಬರಿಗೆ ಗಂಭೀರ ಗಾಯ

    adminBy adminOctober 7, 2026No Comments1 Min Read

    ಚಿತ್ರದುರ್ಗ : ಚಲಿಸುತ್ತಿದ್ದ ಲಾರಿಯ ಟೈರ್ ದಿಢೀರ್ ಬರ್ಸ್ಟ್ ಆದ ಪರಿಣಾಮ, ಹಿಂಬದಿಯಿಂದ ಬರುತ್ತಿದ್ದ ಕಾರು ಲಾರಿಗೆ ಡಿಕ್ಕಿ ಹೊಡೆದು ಕೊಪ್ಪಳ ಮೂಲದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಕೆ.ಆರ್. ಹಳ್ಳಿ (ಕಸ್ತೂರಿ ರಂಗಪ್ಪನಹಳ್ಳಿ) ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮಂಗಳವಾರ ಸಂಜೆ ನಡೆದಿದೆ.

    ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಶಶಿಧರ್ (22), ಕುಷ್ಟಗಿ ತಾಲೂಕಿನ ಮಡಿಕೇರಿ ಗ್ರಾಮದ ಮಂಜುನಾಥ್ (22) ಹಾಗೂ ನಿಡಸೇಸಿ ಗ್ರಾಮದ ಬಸವರಾಜ್ (21) ಮೃತಪಟ್ಟ ಯುವಕರು.
    ನಿಡಸೇಸಿ ಗ್ರಾಮದ ಹನುಮೇಶ್ (22) ಹಾಗೂ ಪ್ರವೀಣ್ (20) ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣವೇ ಹಿರಿಯೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಮೃತರು ಹಾಗೂ ಗಾಯಾಳುಗಳು ಸೇರಿ ಐವರು ಸ್ನೇಹಿತರು ಕಾರಿನಲ್ಲಿ ಬೆಂಗಳೂರಿನಿಂದ ಸ್ವಗ್ರಾಮ ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣಕ್ಕೆ ತೆರಳುತ್ತಿದ್ದರು. ಹಿರಿಯೂರು ತಾಲೂಕಿನ ಕಸ್ತೂರಿ ರಂಗಪ್ಪನಹಳ್ಳಿ ಗೇಟ್ ಸಮೀಪಿಸುತ್ತಿದ್ದಂತೆ, ಮುಂಭಾಗದಲ್ಲಿ ಸಾಗುತ್ತಿದ್ದ ಲಾರಿಯ ಟೈರ್ ದಿಢೀರನೆ ಬರ್ಸ್ಟ್ ಆಗಿದೆ. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆಯ ಎಡಭಾಗಕ್ಕೆ ತಿರುಗಿದೆ. ಈ ವೇಳೆ ಹಿಂಬದಿಯಿಂದ ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ಸಿಗದೆ ಲಾರಿಗೆ ಬಲವಾಗಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ನೆಜ್ಜುಗುಜ್ಜಾಗಿದ್ದು, ಕಾರು ಚಾಲಕ ಸೇರಿ ಮೂವರು ಸ್ಥಳದಲ್ಲೇ ಅಸುನೀಗಿದ್ದಾರೆ.

    ಅಪಘಾತದ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಹಿರಿಯೂರು ಉಪವಿಭಾಗದ ಡಿವೈಎಸ್ಪಿ ಗೋಪಾಲಕೃಷ್ಣ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಕೆ.ಎನ್. ಚಂದ್ರಶೇಖರ್ ತಮ್ಮ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಖಂಗೊಂಡ ವಾಹನಗಳನ್ನು ಹೆದ್ದಾರಿಯಿಂದ ತೆರವುಗೊಳಿಸಿ ಸುಗಮ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟರು. ಈ ಘಟನೆಗೆ ಸಂಬಂಧಿಸಿದಂತೆ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.




    #karnataka
    Previous Articleನ್ಯಾಯಾಲಯಕ್ಕೆ ಗೈರಾಗಿದ್ದ ವಾರಂಟ್ ಆರೋಪಿ ಬಂಧನ; ಪುತ್ತೂರಿನಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ
    Next Article ಬೆಳ್ತಂಗಡಿ ಬಳಿ KSRTC ಬಸ್‌ನಲ್ಲಿ ಮಹಿಳೆ ಅಸ್ವಸ್ಥ; ಮಾರ್ಗ ಬದಲಿಸಿ ನೇರವಾಗಿ ಆಸ್ಪತ್ರೆಗೆ ಕರೆದೊಯ್ದ KSRTC ಸಿಬ್ಬಂದಿ

    Related Posts

    ಬೀಡಿ ಹಚ್ಚಲು ಕಡ್ಡಿ ಗೀರಿದಾಗ ಸಿಲಿಂಡರ್ ಸ್ಫೋಟ; 6 ಜನ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ

    October 19, 2026

    ಟ್ರಾಲಿ ಬ್ಯಾಗ್‌ಗಳಲ್ಲಿ ನಕಲಿ ಸಿಗರೇಟ್ ಸಾಗಾಟ : ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ

    October 19, 2026

    ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆ ; ಜನಸಾಮಾನ್ಯರಿಗೆ ನೆರವಾಗುವ ಕ್ರಮ ಎಂದ ಸಚಿವ ಖಾದರ್

    October 19, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಬೀಡಿ ಹಚ್ಚಲು ಕಡ್ಡಿ ಗೀರಿದಾಗ ಸಿಲಿಂಡರ್ ಸ್ಫೋಟ; 6 ಜನ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ

    October 19, 2026

    ಟ್ರಾಲಿ ಬ್ಯಾಗ್‌ಗಳಲ್ಲಿ ನಕಲಿ ಸಿಗರೇಟ್ ಸಾಗಾಟ : ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ

    October 19, 2026

    ದಸರಾ ಆಚರಣೆಗೆ ಮಾನವೀಯತೆಯ ಸ್ಪರ್ಶ : ಬಡ ರೋಗಿಯ ನೆರವಿಗೆ ನಿಂತ ಏಳು ಮಕ್ಕಳು

    October 19, 2026

    ಸಿದ್ದಕಟ್ಟೆಯಲ್ಲಿ ಯುವಕನ ಮೇಲೆ ಚೂರಿಯಿಂದ ದಾಳಿ : ಆರು ಮಂದಿ ವಿರುದ್ಧ ಪ್ರಕರಣ ದಾಖಲು

    October 19, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಬೀಡಿ ಹಚ್ಚಲು ಕಡ್ಡಿ ಗೀರಿದಾಗ ಸಿಲಿಂಡರ್ ಸ್ಫೋಟ; 6 ಜನ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ

    October 19, 2026

    ಟ್ರಾಲಿ ಬ್ಯಾಗ್‌ಗಳಲ್ಲಿ ನಕಲಿ ಸಿಗರೇಟ್ ಸಾಗಾಟ : ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ

    October 19, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.