Close Menu
    What's Hot

    ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ

    October 17, 2026

    ಎಂಆರ್‌ಪಿಎಲ್‌ ಸ್ಫೋಟದಲ್ಲಿ ಗಾಯಗೊಂಡಿದ್ದ ಕಾರ್ಮಿಕ ಸಾವು : ₹1.2 ಕೋಟಿ ಪರಿಹಾರ ಘೋಷಣೆ

    October 17, 2026

    ಮಂಗಳೂರಿನ ಎಂಆರ್‌ಪಿಎಲ್‌ ಘಟಕದಲ್ಲಿ ಬೆಂಕಿ ಅವಘಡ : ನಷ್ಟ ಮೊತ್ತದ ವರದಿ ಬಹಿರಂಗ

    October 17, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮಂಗಳೂರು: ತೋಟಬೆಂಗ್ರೆ ಹಾಳಾದ ಮೊಬೈಲ್‌ಗಾಗಿ ಸ್ನೇಹಿತನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ
    ಅಪರಾಧ

    ಮಂಗಳೂರು: ತೋಟಬೆಂಗ್ರೆ ಹಾಳಾದ ಮೊಬೈಲ್‌ಗಾಗಿ ಸ್ನೇಹಿತನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ

    adminBy adminOctober 13, 2026No Comments2 Mins Read

    ಮಂಗಳೂರು : 2024 ರಲ್ಲಿ ಹಾನಿಗೊಳಗಾದ ಮೊಬೈಲ್ ಫೋನ್‌ಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ತನ್ನ ಸ್ನೇಹಿತನನ್ನು ಕೊಲೆ ಮಾಡಿದ್ದಕ್ಕಾಗಿ 50 ವರ್ಷದ ವ್ಯಕ್ತಿಗೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸೋಮವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

    ಶಿಕ್ಷೆಗೊಳಗಾದವರನ್ನು ತೋಟದ ಬೆಂಗ್ರೆ ನಿವಾಸಿ ಧರ್ಮರಾಜ್ ಸುವರ್ಣ ಎಂದು ಗುರುತಿಸಲಾಗಿದೆ. ಬಾಗಲಕೋಟೆ ಮೂಲದ 39 ವರ್ಷದ ಮುತ್ತು ಬಸವರಾಜ ವಡ್ಡರ ಅಲಿಯಾಸ್ ಮುದುಕಪ್ಪ ಅವರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ನ್ಯಾಯಾಲಯ ಅಪರಾಧಿ ಎಂದು ತೀರ್ಪು ನೀಡಿದೆ.

    ನ್ಯಾಯಾಧೀಶ ಜಗದೀಶ್ ಅವರು ಸೋಮವಾರ, ಅಕ್ಟೋಬರ್ 12 ರಂದು ತೀರ್ಪು ಪ್ರಕಟಿಸಿದರು. ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 103(1) ರ ಅಡಿಯಲ್ಲಿ ಸುವರ್ಣ ಅವರಿಗೆ ಜೀವಾವಧಿ ಶಿಕ್ಷೆ ಮತ್ತು 15,000 ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ ಆರು ತಿಂಗಳು ಸರಳ ಜೈಲು ಶಿಕ್ಷೆ ವಿಧಿಸಲಾಗಿದೆ.

    ಪ್ರಾಸಿಕ್ಯೂಷನ್ ಪ್ರಕಾರ ಕೊಲೆಯ ವ್ಯಕ್ತಿ ಕಳೆದ ಕೆಲವು ದಿನಗಳಿಂದ ಒಬ್ಬರಿಗೊಬ್ಬರು ಪರಿಚಯದವರಾಗಿದ್ದು, ಇತ್ತೀಚೆಗೆ ಆರೋಪಿಯ ಧರ್ಮರಾಜ್ ಸುವರ್ಣ ಹೊಸ ಮೊಬೈಲ್ ಖರೀದಿಸಿದ್ದು, ಆ ಮೊಬೈಲ್ ನ್ನು ಮೃತ ಮುತ್ತು ಬಸವಾರಾಜ್ ತೆಗೆದುಕೊಂಡು ವಾಪಾಸ್ ನೀಡದೆ ಮೊಬೈಲ್ ಹಾಳು ಮಾಡಿದ ವಿಚಾರವಾಗಿ ಇಬ್ಬರ ನಡುವೆ ಗಲಾಟೆಯಾಗಿ ಆರೋಪಿಯು ಮುತ್ತು ಬಸವರಾಜ ವಡ್ಡರ್ @ ಮುದುಕಪ್ಪನನ್ನು ಮರದ ಸೋಂಟೆಯಿಂದ ಹೊಡೆದು ಕೊಲೆ ಮಾಡಿರುವುದಾಗಿದೆ.

    ಹನುಮಂತ ದುರ್ಗಪ್ಪ ವಡ್ಡರ ನೀಡಿದ ದೂರಿನ ಮೇರೆಗೆ ಪಣಂಬೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಅಪರಾಧ ಎಸಗಿದ ನಂತರ ಸುವರ್ಣ ರಾಜ್ಯದಿಂದ ಪರಾರಿಯಾಗಿದ್ದಾನೆ. ಆದರೆ, ಪೊಲೀಸರು ಆತನನ್ನು ಪತ್ತೆಹಚ್ಚಿ ಸೆಪ್ಟೆಂಬರ್ 26, 2024 ರ ಮುಂಜಾನೆ ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಚೋಂಬಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಧಿಸಿದ್ದಾರೆ.

    ಪಣಂಬೂರು ಪೊಲೀಸ್ ಇನ್ಸ್‌ಪೆಕ್ಟರ್ ಮೊಹಮ್ಮದ್ ಸಲೀಂ ಅಬ್ಬಾಸ್ ಅವರು ಆರಂಭಿಕ ತನಿಖೆ ನಡೆಸಿದರು. ನಂತರ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳನ್ನು ಜಾರಿಗೊಳಿಸಲಾಯಿತು, ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಶ್ರೀಕಾಂತ್ ಕೆ ಅವರು ತನಿಖೆಯನ್ನು ವಹಿಸಿಕೊಂಡು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದರು. ರಾಜ್ಯದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಜ್ಯೋತಿ ಪ್ರಮೋದ್ ನಾಯಕ್ ವಾದ ಮಂಡಿಸಿದರು.




    #crime #dakshinakannada
    Previous Articleಅನೈತಿಕ ಸಂಬಂಧದ ಶಂಕೆ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಅರೆಸ್ಟ್
    Next Article ಸುಳ್ಯ: ಹೊಳೆ ನೀರಿನಲ್ಲಿ ಮೀನು ಹಿಡಿಯುತ್ತಿದ್ದಾಗ ದುರಂತ; ವಿದ್ಯುತ್ ಶಾಕ್‌ಗೆ ಇಬ್ಬರು ಬಲಿ

    Related Posts

    ಎಂಆರ್‌ಪಿಎಲ್‌ ಸ್ಫೋಟದಲ್ಲಿ ಗಾಯಗೊಂಡಿದ್ದ ಕಾರ್ಮಿಕ ಸಾವು : ₹1.2 ಕೋಟಿ ಪರಿಹಾರ ಘೋಷಣೆ

    October 17, 2026

    ಮಂಗಳೂರಿನ ಎಂಆರ್‌ಪಿಎಲ್‌ ಘಟಕದಲ್ಲಿ ಬೆಂಕಿ ಅವಘಡ : ನಷ್ಟ ಮೊತ್ತದ ವರದಿ ಬಹಿರಂಗ

    October 17, 2026

    ಸುರತ್ಕಲ್ ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಮತ್ತೊಬ್ಬ ಕಾರ್ಮಿಕ ಸಾವು

    October 17, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ

    October 17, 2026

    ಎಂಆರ್‌ಪಿಎಲ್‌ ಸ್ಫೋಟದಲ್ಲಿ ಗಾಯಗೊಂಡಿದ್ದ ಕಾರ್ಮಿಕ ಸಾವು : ₹1.2 ಕೋಟಿ ಪರಿಹಾರ ಘೋಷಣೆ

    October 17, 2026

    ಮಂಗಳೂರಿನ ಎಂಆರ್‌ಪಿಎಲ್‌ ಘಟಕದಲ್ಲಿ ಬೆಂಕಿ ಅವಘಡ : ನಷ್ಟ ಮೊತ್ತದ ವರದಿ ಬಹಿರಂಗ

    October 17, 2026

    ಅಜಯ್ ದೇವಗನ್ ಬಂಗಲೆಯಲ್ಲಿ ಅಕ್ರಮ ನಿರ್ಮಾಣ ಆರೋಪ : ಬಿಎಂಸಿ ಬುಲ್ಡೋಜರ್ ಕಾರ್ಯಾಚರಣೆ‌ಗೆ ಸಿದ್ಧತೆ

    October 17, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ

    October 17, 2026

    ರಾಜ್ಯಾದ್ಯಂತ ಸ್ವೀಟ್ ಅಂಗಡಿಗಳ ತಪಾಸಣೆ ಚುರುಕು: 145 ಮಾದರಿ ಸಂಗ್ರಹ, 15 ಘಟಕಗಳಿಗೆ ನೋಟಿಸ್

    October 17, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.