Close Menu
    What's Hot

    ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ

    October 17, 2026

    ಎಂಆರ್‌ಪಿಎಲ್‌ ಸ್ಫೋಟದಲ್ಲಿ ಗಾಯಗೊಂಡಿದ್ದ ಕಾರ್ಮಿಕ ಸಾವು : ₹1.2 ಕೋಟಿ ಪರಿಹಾರ ಘೋಷಣೆ

    October 17, 2026

    ಮಂಗಳೂರಿನ ಎಂಆರ್‌ಪಿಎಲ್‌ ಘಟಕದಲ್ಲಿ ಬೆಂಕಿ ಅವಘಡ : ನಷ್ಟ ಮೊತ್ತದ ವರದಿ ಬಹಿರಂಗ

    October 17, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಸುಳ್ಯದಲ್ಲಿ ವಿದ್ಯುತ್ ಪ್ರವಹಿಸಿ ಇಬ್ಬರು ಯುವಕರ ಸಾವು; ತೋಟದ ಮಾಲೀಕನ ವಿರುದ್ಧ ಪ್ರಕರಣ ದಾಖಲು
    ಅಪರಾಧ

    ಸುಳ್ಯದಲ್ಲಿ ವಿದ್ಯುತ್ ಪ್ರವಹಿಸಿ ಇಬ್ಬರು ಯುವಕರ ಸಾವು; ತೋಟದ ಮಾಲೀಕನ ವಿರುದ್ಧ ಪ್ರಕರಣ ದಾಖಲು

    adminBy adminOctober 14, 2026No Comments1 Min Read

    ಕಲ್ಮಡ್ಕ ಗ್ರಾಮದ ಹೊಳೆಕ್ಕೆರೆ ಎಂಬಲ್ಲಿ ತೋಡಿನಲ್ಲಿ ಮೀನು ಹಿಡಿಯುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಇಬ್ಬರು ಯುವಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ತೋಟಕ್ಕೆ ಅನಧಿಕೃತವಾಗಿ ವಿದ್ಯುತ್ ಅಳವಡಿಸಿರುವ ಆರೋಪದ ಮೇಲೆ ತೋಟದ ಮಾಲೀಕ ಮಧುಸೂದನ್ ಭಟ್ ಅವರ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಅ.12ರಂದು ರಾತ್ರಿ ನಡೆದ ಘಟನೆಯಲ್ಲಿ ಕಲ್ಮಡ್ಕದ ಭರತ್ (28) ಹಾಗೂ ಬೆಳ್ತಂಗಡಿ ತಾಲೂಕಿನ ಓಡಿಲ್ನಾಲ ಗ್ರಾಮದ ಮುಂಗೇಲು ಮನೆ ರಮೇಶ್ ಅಲಿಯಾಸ್ ಗಣೇಶ್ (36) ಮೃತಪಟ್ಟಿದ್ದರು. ಅವರನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಅವರೊಂದಿಗೆ ಇದ್ದ ಬಾಲಕ ಗಾಯಗೊಂಡಿದ್ದು ಅವರನ್ನು ಸುಳ್ಯ ಕೆವಿಜಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಮೂವರು ತೋಡಿನಲ್ಲಿ ಹರಿಯುತ್ತಿದ್ದ ನೀರಿನಲ್ಲಿ ಮೀನು ಹಿಡಿಯುತ್ತಾ ಸಾಗುತ್ತಿದ್ದಾಗ, ಸಮೀಪದಲ್ಲಿದ್ದ ಮಧುಸೂದನ್ ಭಟ್ ಅವರ ತೋಟದಿಂದ ವಿದ್ಯುತ್ ಪ್ರವಹಿಸಿದ ಪರಿಣಾಮ ದುರಂತ ಸಂಭವಿಸಿದೆ ಎಂದು ತಿಳಿಸಲಾಗಿದೆ.

    ಬಿಎನ್ಎಸ್ 105 ರಡಿ ಪ್ರಕರಣ ದಾಖಲು

    ತೋಟಕ್ಕೆ ಅನಧಿಕೃತವಾಗಿ ವಿದ್ಯುತ್ ಅಳವಡಿಸಿರುವ ಆರೋಪದ ಹಿನ್ನೆಲೆಯಲ್ಲಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 59/2026ರಂತೆ ಭಾರತೀಯ ನ್ಯಾಯ ಸಂಹಿತೆಯ ಕಲಂ 105 ಹಾಗೂ ವಿದ್ಯುತ್ ಕಾಯ್ದೆಯ ಕಲಂ 135(1)(E) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ವಿದ್ಯುತ್ ಸಂಪರ್ಕದ ಸ್ವರೂಪ, ಅದರ ಅಳವಡಿಕೆ ಮತ್ತು ದುರಂತಕ್ಕೆ ಸಂಬಂಧಿಸಿದ ಅಂಶಗಳ ಬಗ್ಗೆ ತನಿಖೆಯಿಂದ ತಿಳಿದುಬರಬೇಕಿದೆ.

    ದುರಂತ ನಡೆದ ಸ್ಥಳಕ್ಕೆ ಡಿವೈಎಸ್ ಪಿ.ಪ್ರಮೋದ್ ಕುಮಾರ್,ಸುಳ್ಯ ಸರ್ಕಲ್ ಇನ್ಸ್ ಪೆಕ್ಟರ್ ತಿಮ್ಮಪ್ಪ ನಾಯ್ಕ್,ಬೆಳ್ಳಾರೆ ಠಾಣಾ ಎಸ್.ಐ.ಈರಯ್ಯ ದೂಂತೂರು ಹಾಗೂ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿರುವುದಾಗಿ ತಿಳಿದು ಬಂದಿದೆ.




    #crime #dakshinakannada
    Previous Articleಸಿದ್ದರಾಮಯ್ಯ ವಿರುದ್ಧ ನಕಲಿ ವಿಡಿಯೋ ಆರೋಪ; ಇಬ್ಬರು ಶಂಕಿತರು ಪೊಲೀಸ್ ವಶಕ್ಕೆ
    Next Article ಅ.15ರಂದು ಮಂಗಳೂರು, ಉಡುಪಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ; ದಸರಾ ಕಾರ್ಯಕ್ರಮಗಳಲ್ಲಿ ಭಾಗಿ

    Related Posts

    ಎಂಆರ್‌ಪಿಎಲ್‌ ಸ್ಫೋಟದಲ್ಲಿ ಗಾಯಗೊಂಡಿದ್ದ ಕಾರ್ಮಿಕ ಸಾವು : ₹1.2 ಕೋಟಿ ಪರಿಹಾರ ಘೋಷಣೆ

    October 17, 2026

    ಮಂಗಳೂರಿನ ಎಂಆರ್‌ಪಿಎಲ್‌ ಘಟಕದಲ್ಲಿ ಬೆಂಕಿ ಅವಘಡ : ನಷ್ಟ ಮೊತ್ತದ ವರದಿ ಬಹಿರಂಗ

    October 17, 2026

    ಸುರತ್ಕಲ್ ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಮತ್ತೊಬ್ಬ ಕಾರ್ಮಿಕ ಸಾವು

    October 17, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ

    October 17, 2026

    ಎಂಆರ್‌ಪಿಎಲ್‌ ಸ್ಫೋಟದಲ್ಲಿ ಗಾಯಗೊಂಡಿದ್ದ ಕಾರ್ಮಿಕ ಸಾವು : ₹1.2 ಕೋಟಿ ಪರಿಹಾರ ಘೋಷಣೆ

    October 17, 2026

    ಮಂಗಳೂರಿನ ಎಂಆರ್‌ಪಿಎಲ್‌ ಘಟಕದಲ್ಲಿ ಬೆಂಕಿ ಅವಘಡ : ನಷ್ಟ ಮೊತ್ತದ ವರದಿ ಬಹಿರಂಗ

    October 17, 2026

    ಅಜಯ್ ದೇವಗನ್ ಬಂಗಲೆಯಲ್ಲಿ ಅಕ್ರಮ ನಿರ್ಮಾಣ ಆರೋಪ : ಬಿಎಂಸಿ ಬುಲ್ಡೋಜರ್ ಕಾರ್ಯಾಚರಣೆ‌ಗೆ ಸಿದ್ಧತೆ

    October 17, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ

    October 17, 2026

    ರಾಜ್ಯಾದ್ಯಂತ ಸ್ವೀಟ್ ಅಂಗಡಿಗಳ ತಪಾಸಣೆ ಚುರುಕು: 145 ಮಾದರಿ ಸಂಗ್ರಹ, 15 ಘಟಕಗಳಿಗೆ ನೋಟಿಸ್

    October 17, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.