ಮಂಗಳೂರು: ಸುರತ್ಕಲ್ನ ಎಂಆರ್ಪಿಎಲ್ ಘಟಕದಲ್ಲಿ ಸೆಪ್ಟೆಂಬರ್ 30ರಂದು ಸಂಭವಿಸಿದ್ದ ಭೀಕರ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ನಗರದ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜೇಶ್ ಡಿಸಿಲ್ವ (Rajesh D’Silva) ಅವರು ಶನಿವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಮೃತ ರಾಜೇಶ್ ಡಿಸಿಲ್ವ ಅವರು ಸುರತ್ಕಲ್ನ ಇಡ್ಯಾ ಗ್ರಾಮದ ಕಾನ ನಿವಾಸಿಯಾಗಿದ್ದು, ಹಲವು ವರ್ಷಗಳಿಂದ ಎಂಆರ್ಪಿಎಲ್ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಸೆಪ್ಟೆಂಬರ್ 30ರಂದು ಎಂಆರ್ಪಿಎಲ್ನ ಫೇಸ್–3 ವಿಭಾಗದ CHTU ಘಟಕದಲ್ಲಿ ಭಾರೀ ಸ್ಫೋಟ ಸಂಭವಿಸಿತ್ತು. ಈ ದುರ್ಘಟನೆಯಲ್ಲಿ ಹಳೆಯಂಗಡಿ ನಿವಾಸಿ ಮನೀಶ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. ಘಟನೆಯಲ್ಲಿ ಗಂಭೀರವಾಗಿ ಸುಟ್ಟ ಗಾಯಗಳಾಗಿದ್ದ ರಾಜೇಶ್ ಡಿಸಿಲ್ವ ಅವರನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆದರೆ, ಹಲವು ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ರಾಜೇಶ್ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ತಿಳಿದುಬಂದಿದೆ.
ಈ ಮೂಲಕ ಎಂಆರ್ಪಿಎಲ್ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟ ಕಾರ್ಮಿಕರ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ








