Close Menu
    What's Hot

    ನಂದಿಧ್ವಜ ಪೂಜೆ ವೇಳೆ ಸಚಿವರಿಗೆ ಪ್ರವೇಶ ನಿರಾಕರಣೆ : ಪೊಲೀಸ್ ಅಧಿಕಾರಿಗಳ ವಿರುದ್ಧ ಸಿಎಂನಿಂದ ಕ್ರಮದ ಎಚ್ಚರಿಕೆ

    October 22, 2026

    ಮೂಡುಬಿದಿರೆ: ಮಗನನ್ನು ಉಳಿಸಲು ಧಾವಿಸಿದ ತಾಯಿಗೂ ವಿದ್ಯುತ್ ಪ್ರವಹಿಸಿ ದುರಂತ ಅಂತ್ಯ

    October 22, 2026

    ಒಸಾಮಾ ಬಿನ್ ಲಾಡೆನ್‌ನಂತೆ ದಾವೂದ್ ಇಬ್ರಾಹಿಂ ಕೂಡ ಪಾಕಿಸ್ತಾನದಲ್ಲಿ ನೆಲೆಸಿದ್ದಾನೆ : ವಿಶ್ವಸಂಸ್ಥೆಯಲ್ಲಿ ಭಾರತ ಪ್ರತಿಪಾದನೆ

    October 22, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಮೂಡುಬಿದಿರೆ: ಮಗನನ್ನು ಉಳಿಸಲು ಧಾವಿಸಿದ ತಾಯಿಗೂ ವಿದ್ಯುತ್ ಪ್ರವಹಿಸಿ ದುರಂತ ಅಂತ್ಯ
    ಕರಾವಳಿ ಸುದ್ದಿ

    ಮೂಡುಬಿದಿರೆ: ಮಗನನ್ನು ಉಳಿಸಲು ಧಾವಿಸಿದ ತಾಯಿಗೂ ವಿದ್ಯುತ್ ಪ್ರವಹಿಸಿ ದುರಂತ ಅಂತ್ಯ

    adminBy adminOctober 22, 2026No Comments1 Min Read

    ಮೂಡುಬಿದಿರೆ : ಮೂಡುಬಿದಿರೆ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವರ್ಣಬೆಟ್ಟುವಿನಲ್ಲಿ ಭೀಕರ ದುರಂತವೊಂದು ಸಂಭವಿಸಿದ್ದು, ವಿದ್ಯುತ್ ಶಾಕ್ ತಗುಲಿ ತಾಯಿ ಹಾಗೂ ಮಗ ಇಬ್ಬರೂ ದಾರುಣವಾಗಿ ಸಾವನ್ನಪ್ಪಿದ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಮರ್ಸಿ ಮಸ್ಕರೇನಸ್ (45) ಹಾಗೂ ಅವರ ಪುತ್ರ ಶೋನ್ ಮಸ್ಕರೇನಸ್ (18) ಮೃತಪಟ್ಟ ದುರ್ದೈವಿಗಳು. ವಿದ್ಯುತ್ ಆಘಾತಕ್ಕೊಳಗಾದ ಮಗನನ್ನು ರಕ್ಷಿಸಲು ಹೋದಾಗ ತಾಯಿಗೂ ವಿದ್ಯುತ್ ಪ್ರವಹಿಸಿ ಇಬ್ಬರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

    ಮೂಡುಬಿದಿರೆಯ ಹೋಲಿ ರೋಸರಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಯಾಗಿದ್ದ ಶೋನ್ ಮಸ್ಕರೇನಸ್, ಬೆಳಗಿನ ಜಾವ ಮನೆಯ ಹೊರಗಡೆ ಬಟ್ಟೆ ಒಣಗಿಸಲು ತೆರಳಿದ್ದಾಗ ಈ ಆಕಸ್ಮಿಕ ಅವಘಡ ಸಂಭವಿಸಿದೆ. ಬಟ್ಟೆ ಒಣಗಿಸಲು ಹಾಕಲಾಗಿದ್ದ ಕಬ್ಬಿಣದ ತಂತಿಗೆ ಹೈಟೆನ್ಶನ್‌ ವಿದ್ಯುತ್ ತಂತಿಯ ಸಂಪರ್ಕ ಉಂಟಾಗಿ ಶಾರ್ಟ್ ಸರ್ಕ್ಯೂಟ್‌ನಿಂದ ವಿದ್ಯುತ್ ಪ್ರವಹಿಸಿರಬಹುದು ಎಂದು ಶಂಕಿಸಲಾಗಿದೆ. ಮಗ ವಿದ್ಯುತ್ ಆಘಾತದಿಂದ ಒದ್ದಾಡುವುದನ್ನು ಕಂಡು ಆತನನ್ನು ಪಾರು ಮಾಡಲು ಓಡೋಡಿ ಬಂದ ತಾಯಿ ಮರ್ಸಿ ಮಸ್ಕರೇನಸ್ ಅವರಿಗೂ ಹೈಟೆನ್ಷನ್ ವಿದ್ಯುತ್ ಸ್ಪರ್ಶಿಸಿದೆ.

    ಬೆಳಿಗ್ಗೆ ಸುಮಾರು 7ರಿಂದ 8 ಗಂಟೆಯ ವೇಳೆಗೆ ಮನೆಗೆ ತೋಟದ ಕೆಲಸಕ್ಕಾಗಿ ಬಂದ ಕಾರ್ಮಿಕರೊಬ್ಬರು ತಾಯಿ-ಮಗ ಇಬ್ಬರೂ ರಕ್ತಸ್ರಾವ ಹಾಗೂ ಸುಟ್ಟ ಗಾಯಗಳೊಂದಿಗೆ ಬಿದ್ದಿರುವುದನ್ನು ಗಮನಿಸಿ ಸ್ಥಳೀಯರಿಗೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಮೂಡುಬಿದಿರೆ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.




    #dakshinakannada
    Previous Articleಒಸಾಮಾ ಬಿನ್ ಲಾಡೆನ್‌ನಂತೆ ದಾವೂದ್ ಇಬ್ರಾಹಿಂ ಕೂಡ ಪಾಕಿಸ್ತಾನದಲ್ಲಿ ನೆಲೆಸಿದ್ದಾನೆ : ವಿಶ್ವಸಂಸ್ಥೆಯಲ್ಲಿ ಭಾರತ ಪ್ರತಿಪಾದನೆ
    Next Article ನಂದಿಧ್ವಜ ಪೂಜೆ ವೇಳೆ ಸಚಿವರಿಗೆ ಪ್ರವೇಶ ನಿರಾಕರಣೆ : ಪೊಲೀಸ್ ಅಧಿಕಾರಿಗಳ ವಿರುದ್ಧ ಸಿಎಂನಿಂದ ಕ್ರಮದ ಎಚ್ಚರಿಕೆ

    Related Posts

    ಮಂಗಳೂರು–ಬೆಂಗಳೂರು ಹೆದ್ದಾರಿಯಲ್ಲಿ ದುರಂತ : ಗ್ಯಾಸ್ ಟ್ಯಾಂಕರ್‌ಗೆ ಕಾರು ಡಿಕ್ಕಿ, ವಿದ್ಯಾರ್ಥಿ ಸ್ಥಳದಲ್ಲೇ ಸಾವು

    October 22, 2026

    ಬೋಳಿಯಾರು ಡಬಲ್‌ ಮರ್ಡರ್‌ ಪ್ರಕರಣಕ್ಕೆ ತಿರುವು : ಸ್ಥಳ ಮಹಜರು ವೇಳೆ ಆರೋಪಿಯ ಮೇಲೆ ದಾಳಿಗೆ ಯತ್ನ

    October 22, 2026

    ಉಡುಪಿಯಲ್ಲಿ ನಿಗೂಢವಾಗಿ ಪತ್ತೆಯಾದ ಮಾನವ ಅಸ್ಥಿಪಂಜರ : ವಿಧಿವಿಜ್ಞಾನ ಪರೀಕ್ಷೆಗೆ ರವಾನೆ

    October 22, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ನಂದಿಧ್ವಜ ಪೂಜೆ ವೇಳೆ ಸಚಿವರಿಗೆ ಪ್ರವೇಶ ನಿರಾಕರಣೆ : ಪೊಲೀಸ್ ಅಧಿಕಾರಿಗಳ ವಿರುದ್ಧ ಸಿಎಂನಿಂದ ಕ್ರಮದ ಎಚ್ಚರಿಕೆ

    October 22, 2026

    ಮೂಡುಬಿದಿರೆ: ಮಗನನ್ನು ಉಳಿಸಲು ಧಾವಿಸಿದ ತಾಯಿಗೂ ವಿದ್ಯುತ್ ಪ್ರವಹಿಸಿ ದುರಂತ ಅಂತ್ಯ

    October 22, 2026

    ಒಸಾಮಾ ಬಿನ್ ಲಾಡೆನ್‌ನಂತೆ ದಾವೂದ್ ಇಬ್ರಾಹಿಂ ಕೂಡ ಪಾಕಿಸ್ತಾನದಲ್ಲಿ ನೆಲೆಸಿದ್ದಾನೆ : ವಿಶ್ವಸಂಸ್ಥೆಯಲ್ಲಿ ಭಾರತ ಪ್ರತಿಪಾದನೆ

    October 22, 2026

    ಮಂಗಳೂರು–ಬೆಂಗಳೂರು ಹೆದ್ದಾರಿಯಲ್ಲಿ ದುರಂತ : ಗ್ಯಾಸ್ ಟ್ಯಾಂಕರ್‌ಗೆ ಕಾರು ಡಿಕ್ಕಿ, ವಿದ್ಯಾರ್ಥಿ ಸ್ಥಳದಲ್ಲೇ ಸಾವು

    October 22, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ನಂದಿಧ್ವಜ ಪೂಜೆ ವೇಳೆ ಸಚಿವರಿಗೆ ಪ್ರವೇಶ ನಿರಾಕರಣೆ : ಪೊಲೀಸ್ ಅಧಿಕಾರಿಗಳ ವಿರುದ್ಧ ಸಿಎಂನಿಂದ ಕ್ರಮದ ಎಚ್ಚರಿಕೆ

    October 22, 2026

    ವಿಮಾನ ನಿಲ್ದಾಣದಿಂದ ವಾಪಸ್ ಬರುತ್ತಿದ್ದ ಕಾರಿಗೆ ಬಸ್ ಡಿಕ್ಕಿ : 23 ವರ್ಷದ ಚಾಲಕ ಸಾವು

    October 21, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.