ಸಿಎಂ ವಿಜಿಲೆನ್ಸ್ ಸೆಲ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಉಪ ಅಧೀಕ್ಷಕ (ಡಿವೈಎಸ್ಪಿ) ಖರ್ಗೇಶ್ವರ್ ರಾಭಾ ಅವರು ಗುರುವಾರ ಬೊಂಗೈಗಾಂವ್ ಜಿಲ್ಲೆಯ ಹೋಟೆಲ್ವೊಂದರಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲೆಯ ಹೋಟೆಲ್ ಜಾಹ್ನವಿ ರೀಜೆನ್ಸಿಯ ಕೊಠಡಿಯೊಂದರಲ್ಲಿ ಭಾಗಶಃ ಕೊಳೆತ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ.
ಹೋಟೆಲ್ ಕೊಠಡಿಯಿಂದ ಅಸಹಜ ವಾಸನೆ ಬರುತ್ತಿರುವುದನ್ನು ಗಮನಿಸಿದ ಸಿಬ್ಬಂದಿ, ದೀರ್ಘಕಾಲದಿಂದ ಕೊಠಡಿಯಲ್ಲಿ ಯಾವುದೇ ಚಲನವಲನ ಇಲ್ಲದಿರುವುದನ್ನೂ ಗಮನಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ವರದಿ ತಿಳಿಸಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಹಿರಿಯ ಪೊಲೀಸ್ ಅಧಿಕಾರಿಗಳು ವಿಧಿವಿಜ್ಞಾನ ಸಾಕ್ಷ್ಯಗಳನ್ನು ಸಂಗ್ರಹಿಸಿ ಮೃತದೇಹವನ್ನು ಹೊರತೆಗೆದಿದ್ದಾರೆ ಎಂದು ವರದಿ ತಿಳಿಸಿದೆ








