Close Menu
    What's Hot

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಸ್ಟಿಂಗ್ ಪ್ರಕರಣದಲ್ಲಿ ಮಹತ್ವದ ಸಾಕ್ಷ್ಯಗಳೇ ನಾಪತ್ತೆ; ಮದರ್ ಡಿವೈಸ್‌ಗಳಿಗಾಗಿ ಸಿಸಿಬಿ ತೀವ್ರ ಶೋಧ
    ಅಪರಾಧ

    ಸ್ಟಿಂಗ್ ಪ್ರಕರಣದಲ್ಲಿ ಮಹತ್ವದ ಸಾಕ್ಷ್ಯಗಳೇ ನಾಪತ್ತೆ; ಮದರ್ ಡಿವೈಸ್‌ಗಳಿಗಾಗಿ ಸಿಸಿಬಿ ತೀವ್ರ ಶೋಧ

    adminBy adminOctober 27, 2026No Comments1 Min Read

    ಬೆಂಗಳೂರು: ಸ್ಟಿಂಗ್ ಕಾರ್ಯಾಚರಣೆ ಪ್ರಕರಣದ ತನಿಖೆ ಸಿಸಿಬಿ ಪೊಲೀಸರಿಂದ ತೀವ್ರಗೊಂಡಿದೆ. ಆದರೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಪ್ರಮುಖವಾದ ಎರಡು ಮದರ್ ಡಿವೈಸ್‌ಗಳು ಇದುವರೆಗೂ ಪತ್ತೆಯಾಗಿಲ್ಲ. ಸ್ಟಿಂಗ್ ರೆಕಾರ್ಡಿಂಗ್‌ಗೆ ಬಳಸಿದ ಮೊಬೈಲ್ ಮತ್ತು ಕ್ಯಾಮೆರಾ ಹಾಗೂ ಅದನ್ನು ಅಪ್‌ಲೋಡ್ ಮಾಡಲು ಬಳಸಿದ ಫೋನ್ ಈ ಎರಡು ಡಿವೈಸ್‌ಗಳಲ್ಲಿ ಸೇರಿವೆ. ಈ ಪ್ರಕರಣದಲ್ಲಿ ಪ್ರಶಾಂತ್ ಎಂಬ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ನಾಲ್ಕು ಬಾರಿ ವಿಚಾರಣೆಗೊಳಪಡಿಸಿದ್ದಾರೆ. ಆದರೆ, ಆತ ಪ್ರತಿ ಬಾರಿಯೂ ತನಗೆ ಈ ವಿಷಯದ ಬಗ್ಗೆ ಏನೂ ಗೊತ್ತಿಲ್ಲ, ನಾನು ಸ್ಟಿಂಗ್ ಮಾಡಿಲ್ಲ ಎಂದು ನಿರಾಕರಿಸುತ್ತಿದ್ದಾನೆ. ಆತನ ಹೇಳಿಕೆಗಳಿಂದಾಗಿ ತನಿಖೆಗೆ ಹಿನ್ನಡೆಯಾಗಿದೆ.

    ಪ್ರಕರಣದಲ್ಲಿ ಆರೋಪ ವ್ಯಕ್ತವಾಗಿರುವ ಪತ್ರಕರ್ತರನ್ನೂ ಆರು ಬಾರಿ ವಿಚಾರಣೆಗೆ ಒಳಪಡಿಸಲಾಗಿದೆ. ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸುವಾಗ ಈ ಡಿವೈಸ್‌ಗಳು ಸಿಗದಿದ್ದರೆ, ಪ್ರಕರಣಕ್ಕೆ ದೊಡ್ಡ ತೊಡಕಾಗುವ ಸಾಧ್ಯತೆಯಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಡಿವೈಸ್‌ಗಳ IMEI ಸಂಖ್ಯೆಗಳಂತಹ ತಾಂತ್ರಿಕ ವಿವರಗಳನ್ನು ಪೊಲೀಸರು ಸಂಗ್ರಹಿಸಿದ್ದರೂ, ಭೌತಿಕ ಡಿವೈಸ್‌ಗಳ ಪತ್ತೆ ಅನಿವಾರ್ಯವಾಗಿದೆ. ತನಿಖೆ ಮುಂದುವರಿದಿದ್ದು, ಡಿವೈಸ್‌ಗಳಿಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ.

    ಸ್ಟಿಂಗ್ ಕಾರ್ಯಾಚರಣೆಗಾಗಿ ಸೆಕೆಂಡ್ ಹ್ಯಾಂಡ್ ಮೊಬೈಲ್ ಖರೀದಿ ಮಾಡಿ ಆರೋಪಿಗಳಿಗೆ ನೀಡಿದ್ದ ದೆಹಲಿ ಮೂಲದ ರಿತೇಶ್ ಪಾಂಡೆ ಎಂಬಾತನನ್ನು ಆರಂಭದಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ನಂತರ ಆತನಿಗೆ ಜಾಮೀನು ದೊರೆತಿತ್ತು. ಸದ್ಯ ಆತನಿಂದ ಮತ್ತು ಇತರರ ವಿಚಾರಣೆಯಿಂದ ತಿಳಿದುಬಂದ ವಿಚಾರಗಳ ಅನ್ವಯ ತನಿಖೆ ನಡೆಯುತ್ತಿದೆ. ಆದರೆ, ಮೊಬೈಲ್ ಹಾಗೂ ಮದರ್ ಡಿವೈಸ್‌ಗಳು ದೊರೆಯದೇ ಇರುವುದು ತನಿಖೆಗೆ ಹಿನ್ನಡೆಯಾಗಿದೆ.

     




    #crime #karnataka
    Previous Articleಉಡುಪಿ: ಅನ್‌ಲೋಡ್ ಮಾಡುವಾಗ ಅವಘಡ; ಗಾಜಿನ ಬ್ಲಾಕ್‌ಗಳ ಅಡಿಯಲ್ಲಿ ಸಿಲುಕಿ ವ್ಯಕ್ತಿ ಸಾವು
    Next Article ಜಪ್ಪಿನಮೊಗರು ಹೆದ್ದಾರಿಯಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ಯುವಕ ಸಾವು

    Related Posts

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.