Close Menu
    What's Hot

    ಉಪ್ಪಿನಂಗಡಿ: ಆಟೊಗೆ ಹಿಂಬದಿಯಿಂದ ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಚಾಲಕ ಸಾವು

    November 14, 2026

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಮೀನು ಸಂಗ್ರಹಣಾ ಘಟಕ ಸ್ವಚ್ಛಗೊಳಿಸುವಾಗ ವಿಷಾನಿಲ ಸೋರಿಕೆ; ಮತ್ತೆ ಇಬ್ಬರು ಮೀನುಗಾರರ ದುರ್ಮರಣ
    ಕರ್ನಾಟಕ

    ಮೀನು ಸಂಗ್ರಹಣಾ ಘಟಕ ಸ್ವಚ್ಛಗೊಳಿಸುವಾಗ ವಿಷಾನಿಲ ಸೋರಿಕೆ; ಮತ್ತೆ ಇಬ್ಬರು ಮೀನುಗಾರರ ದುರ್ಮರಣ

    adminBy adminOctober 31, 2026No Comments1 Min Read

    ಉತ್ತರಕನ್ನಡ: ಮೀನಿನ ವಿಷಾನಿಲಕ್ಕೆ ಉಸಿರುಗಟ್ಟಿ ಮೂವರು ಮೀನುಗಾರರು ಸಾವನ್ನಪ್ಪಿದ ನೆನಪು ಮಾಸುವ ಮುನ್ನವೇ ಮತ್ತೊಂದು ಭೀಕರ ದುರಂತ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮುದಗಾ ಮೀನುಗಾರಿಕಾ ಬಂದರಿನಲ್ಲಿ ಸಂಭವಿಸಿದೆ. ಕಾರವಾರ ತಾಲೂಕಿನ ಮುದಗಾ ಮೀನುಗಾರಿಕಾ ಬಂದರಿನಲ್ಲಿ ಮೀನಿನ ವಿಷಾನಿಲ ಸೋರಿಕೆಯಿಂದ ಉಸಿರುಗಟ್ಟಿ ಒರಿಸ್ಸಾ ಮೂಲದ ಇಬ್ಬರು ಮೀನುಗಾರರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಬೋಟ್‌ನ ಶೇಖರಣಾ ಘಟಕವನ್ನು ಸ್ವಚ್ಛಗೊಳಿಸುವಾಗ ಈ ದುರ್ಘಟನೆ ಸಂಭವಿಸಿದ್ದು, ಮತ್ತೊಬ್ಬ ಮೀನುಗಾರ ಗಂಭೀರಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಒರಿಸ್ಸಾ ಮೂಲದ ಇಬ್ಬರ ಸಾವು, ಓರ್ವ ಅಸ್ವಸ್ಥ

    ಬೇಲೆಕೇರಿ ಮೂಲದ ‘ಮೂಕಾಂಬಿಕಾ’ ಹೆಸರಿನ ಬೋಟ್‌ನಲ್ಲಿ ಈ ದುರ್ಘಟನೆ ನಡೆದಿದೆ. ಚಮನ್ ಜಾತಿಯ ಮೀನುಗಳನ್ನು ಶಿಕಾರಿ ಮಾಡಿ ಬಂದರಿಗೆ ಬಂದಿದ್ದ ಮೀನುಗಾರರು, ಬೋಟ್‌ನ ಶೇಖರಣಾ ಘಟಕದಿಂದ (ಕೋಲ್ಡ್ ಸ್ಟೋರೇಜ್) ಮೀನುಗಳನ್ನು ಖಾಲಿ ಮಾಡಿ ಸ್ವಚ್ಛಗೊಳಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಘಟಕದಿಂದ ಹೊರಹೊಮ್ಮಿದ ತೀವ್ರ ವಿಷಾನಿಲ ಹಾಗೂ ದುರ್ವಾಸನೆಗೆ ಸಿಲುಕಿ ಒರಿಸ್ಸಾ ಮೂಲದ ಪುರಂದರ ಬಿಸರಾ (21) ಮತ್ತು ಆಕಾಶ ನಾಯ್ಕ (24) ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಇದೇ ವೇಳೆ ಗಂಭೀರವಾಗಿ ಅಸ್ವಸ್ಥಗೊಂಡಿರುವ ಮತ್ತೊಬ್ಬ ಮೀನುಗಾರ ಲಾಲಿಂದರ ಧ್ರುವ (41) ಅವರನ್ನು ತಕ್ಷಣವೇ ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ ಇಬ್ಬರು ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.

    ಚಮನ್ ಮೀನಿನ ವಿಷಾನಿಲಕ್ಕೆ ಬಲಿಯಾಗಿದ್ದ ಮೂವರು

    ಕೇವಲ ಮೂರು ದಿನಗಳ ಹಿಂದಷ್ಟೇ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಬಂದರಿನಲ್ಲಿ ಚಮನ್ ಮೀನಿನ ವಿಷಾನಿಲ ದುರ್ವಾಸನೆಗೆ ಸಿಲುಕಿ ಮೂವರು ಮೀನುಗಾರರು ಪ್ರಾಣ ಕಳೆದುಕೊಂಡಿದ್ದರು. ಆ ಘಟನೆಯ ಬೆನ್ನಲ್ಲೇ ಈಗ ಮುದಗಾ ಬಂದರಿನಲ್ಲಿಯೂ ಅದೇ ರೀತಿಯ ದುರಂತ ಮರುಕಳಿಸಿರುವುದು ಜಿಲ್ಲೆಯ ಮೀನುಗಾರಿಕಾ ವಲಯದಲ್ಲಿ ತೀವ್ರ ಆತಂಕ ಹಾಗೂ ಭೀತಿಯನ್ನು ಹುಟ್ಟುಹಾಕಿದೆ. ಬೋಟ್‌ಗಳಲ್ಲಿ ಮೀನು ಸಂಗ್ರಹಣಾ ಘಟಕಗಳನ್ನು ಸ್ವಚ್ಛಗೊಳಿಸುವಾಗ ಕಡ್ಡಾಯವಾಗಿ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸಬೇಕಾದ ಅಗತ್ಯತೆಯನ್ನು ಈ ಸರಣಿ ದುರಂತಗಳು ಮತ್ತೊಮ್ಮೆ ಮುನ್ನೆಲೆಗೆ ತಂದಿವೆ.




    #karnataka
    Previous Articleನಕಲಿ ಇ-ಚಲನ್ ಸಂದೇಶಗಳಿಗೆ ಮರುಳಾಗಬೇಡಿ; ಮಂಗಳೂರು ಪೊಲೀಸರಿಂದ ಸಾರ್ವಜನಿಕರಿಗೆ ಎಚ್ಚರಿಕೆ
    Next Article ಉತ್ತರಾಖಂಡದಲ್ಲಿ ಭೀಕರ ಹೆಲಿಕಾಪ್ಟರ್ ದುರಂತ; ಹೆಲಿಕಾಪ್ಟರ್ ಪತನದಿಂದ ಕರ್ನಾಟಕದ ಐವರು ದುರ್ಮರಣ

    Related Posts

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026

    ಮಗಳ ಮದುವೆ ಲಗ್ನಪತ್ರಿಕೆ ಹಂಚಲು ಹೋಗಿದ್ದ ದಂಪತಿಗೆ ಸಿಮೆಂಟ್ ಲಾರಿ ಡಿಕ್ಕಿ; ಪತ್ನಿ ಸಾವು, ಪತಿಯ ಕಾಲು ತುಂಡು

    November 13, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಉಪ್ಪಿನಂಗಡಿ: ಆಟೊಗೆ ಹಿಂಬದಿಯಿಂದ ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಚಾಲಕ ಸಾವು

    November 14, 2026

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.