Close Menu
    What's Hot

    ಉಪ್ಪಿನಂಗಡಿ: ಆಟೊಗೆ ಹಿಂಬದಿಯಿಂದ ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಚಾಲಕ ಸಾವು

    November 14, 2026

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣಕ್ಕೆ ಹೊಸ ತಿರುವು; ಕೃಪಾ ಆಳ್ವ ವಿರುದ್ಧದ ಹಳೆಯ ಆರೋಪ ಮತ್ತೆ ಮುನ್ನೆಲೆಗೆ
    ಅಪರಾಧ

    ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣಕ್ಕೆ ಹೊಸ ತಿರುವು; ಕೃಪಾ ಆಳ್ವ ವಿರುದ್ಧದ ಹಳೆಯ ಆರೋಪ ಮತ್ತೆ ಮುನ್ನೆಲೆಗೆ

    adminBy adminNovember 3, 2026No Comments3 Mins Read

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಈ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾಗಿರುವ ಕೃಪಾ ಆಳ್ವ ಅವರ ಹಿಂದಿನ ಕಾರ್ಯವೈಖರಿ ಈಗ ಮತ್ತೆ ಮುನ್ನೆಲೆಗೆ ಹಾಗೂ ಚರ್ಚೆಗೆ ಬಂದಿದೆ. ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷೆಯಾಗಿದ್ದ ಅವಧಿಯಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರು ಇ-ಮೇಲ್ ಮೂಲಕ ದೂರು ನೀಡಿದ್ದರು. ಆದರೆ, ಆ ದೂರಿನ ಬಗ್ಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವ ಬದಲು ಪ್ರಕರಣವನ್ನು ಮುಚ್ಚಿಹಾಕಲು ಕೃಪಾ ಆಳ್ವ ಪ್ರಯತ್ನಿಸಿದ್ದರು ಎಂಬ ಆರೋಪ ಕೇಳಿಬಂದಿದೆ.

    ಕೃಪಾ ಆಳ್ವ 2015ರಿಂದ 2018ರವರೆಗೆ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದರು. ಈ ಅವಧಿಯಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದ ಮಹಿಳೆಯೊಬ್ಬರು ಇ-ಮೇಲ್ ಮೂಲಕ ದೂರು ದಾಖಲಿಸಿದ್ದರು. ಮಹಿಳೆ ನೀಡಿದ್ದ ದೂರಿನ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ, ಪೊಲೀಸರಿಗೆ ದೂರು ದಾಖಲಿಸಿ ತನಿಖೆ ನಡೆಸುವಂತೆ ಸೂಚಿಸಬೇಕಿತ್ತು ಎಂಬುದು ಈಗ ಕೇಳಿಬಂದಿರುವ ಆರೋಪ.

    ಆದರೆ, ದೂರು ಬಂದಿದ್ದರೂ ಕಾನೂನು ಪ್ರಕಾರ ಅಗತ್ಯ ಕ್ರಮ ಕೈಗೊಳ್ಳುವ ಬದಲು ಪ್ರಕರಣವನ್ನು ಮುಚ್ಚಿಹಾಕಲು ಕೃಪಾ ಆಳ್ವ ಪ್ರಯತ್ನಿಸಿದ್ದರು ಎಂಬ ಆರೋಪ ಇದೆ. ಮಹಿಳೆಯ ದೂರಿನ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ ತನಿಖೆಗೆ ವಹಿಸುವ ಬದಲು ಅದನ್ನು ನಿರ್ಲಕ್ಷಿಸಲಾಗಿತ್ತೇ ಎಂಬ ಪ್ರಶ್ನೆಯೂ ಎದ್ದಿದೆ. ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷೆಯಂತಹ ಜವಾಬ್ದಾರಿಯುತ ಸ್ಥಾನದಲ್ಲಿದ್ದ ವ್ಯಕ್ತಿಯ ವಿರುದ್ಧವೇ ಇಂತಹ ಆರೋಪ ಕೇಳಿಬಂದಿರುವುದು ಪ್ರಕರಣಕ್ಕೆ ಮತ್ತಷ್ಟು ಮಹತ್ವ ನೀಡಿದೆ.

    2018ರಿಂದಲೂ ಮಹಿಳೆಯ ಸಂಪರ್ಕದಲ್ಲಿದ್ದರಾ ಕೃಪಾ ಆಳ್ವ?

    ಮತ್ತೊಂದು ಬೆಳವಣಿಗೆಯೆಂದರೆ, 2018ರಿಂದಲೂ ಕೃಪಾ ಆಳ್ವ ಅವರು ಕೇರಳ ಮೂಲದ ಮಹಿಳೆಯ ಸಂಪರ್ಕದಲ್ಲಿದ್ದರು ಎಂಬುದು. 2023ರಲ್ಲಿ ಮಹಿಳೆಯ ಹೇಳಿಕೆಯನ್ನು ವಿಡಿಯೋ ರೂಪದಲ್ಲಿ ದಾಖಲಿಸಿಕೊಂಡಿದ್ದರು ಎಂಬ ಮಾಹಿತಿಯೂ ಲಭ್ಯವಾಗಿದೆ. ಅಂದರೆ, ಮಹಿಳೆ ಈ ಹಿಂದೆ ನೀಡಿದ್ದ ದೂರಿನ ವಿಚಾರ ಮತ್ತು ನಂತರದ ಸಂಪರ್ಕದ ಹಿನ್ನೆಲೆ ಇದೀಗ ಸ್ಟಿಂಗ್ ಪ್ರಕರಣದ ಚರ್ಚೆಯೊಂದಿಗೆ ಮತ್ತೆ ಮುನ್ನೆಲೆಗೆ ಬಂದಿದೆ.

    ಮಹಿಳೆ ಯಾವ ಕಾರಣಕ್ಕೆ ಇ-ಮೇಲ್ ಮೂಲಕ ದೂರು ನೀಡಿದ್ದರು? ಆ ದೂರಿನ ಬಗ್ಗೆ ಆಯೋಗದ ಅಧ್ಯಕ್ಷೆಯಾಗಿದ್ದ ಕೃಪಾ ಆಳ್ವ ಕೈಗೊಂಡ ಕ್ರಮಗಳೇನು? ದೂರು ಬಂದಿದ್ದರೂ ಪೊಲೀಸರಿಗೆ ಮಾಹಿತಿ ನೀಡದೆ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದರೇ? 2023ರಲ್ಲಿ ಮಹಿಳೆಯ ಹೇಳಿಕೆಯನ್ನು ವಿಡಿಯೋ ರೂಪದಲ್ಲಿ ದಾಖಲಿಸಿಕೊಳ್ಳುವ ಅಗತ್ಯ ಏನಿತ್ತು? ಎಂಬ ಪ್ರಶ್ನೆಗಳು ಈಗ ಉದ್ಭವಿಸಿವೆ.

    ಸ್ಟಿಂಗ್ ಪ್ರಕರಣದ ಈವರೆಗಿನ ಬೆಳವಣಿಗೆ

    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ ವಿಡಿಯೋ ಸೆಪ್ಟೆಂಬರ್​ನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಈ ವಿಡಿಯೋ ಮೂಲಕ ತಮ್ಮ ಮಾನಹಾನಿ ಮತ್ತು ಬ್ಲ್ಯಾಕ್‌ಮೇಲ್‌ಗೆ ಯತ್ನಿಸಲಾಗಿದೆ ಎಂದು ಆರೋಪಿಸಿ ಸಿದ್ದರಾಮಯ್ಯ ಅಕ್ಟೋಬರ್ 6ರಂದು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣದ ತನಿಖೆ ನಡೆಸಿದ ಸಿಸಿಬಿ, ಅಕ್ಟೋಬರ್ 29ರಂದು ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ವಿಡಿಯೋದಲ್ಲಿ ಬಿಂಬಿಸಲಾದ ಆರೋಪಗಳು ಕಟ್ಟುಕಥೆಯಾಗಿರುವ ಸಾಧ್ಯತೆ ಇದೆ ಎಂಬ ಪ್ರಾಥಮಿಕ ತೀರ್ಮಾನವನ್ನು ತಿಳಿಸಿತ್ತು. ವಿಡಿಯೋದಲ್ಲಿನ ಘಟನೆಗಳಿಗೆ ಸಂಬಂಧಿಸಿದಂತೆ ಈವರೆಗೆ ಸಂಗ್ರಹಿಸಿದ ಹೇಳಿಕೆಗಳು ಮತ್ತು ಸಾಕ್ಷ್ಯಗಳು ಆರೋಪಗಳನ್ನು ದೃಢಪಡಿಸುವುದಿಲ್ಲ ಎಂದೂ ಹೇಳಿತ್ತು. ಆದರೆ ವಿಡಿಯೋ ಚಿತ್ರೀಕರಣ, ಅದರ ನೈಜತೆ ಮತ್ತು ಪ್ರಸಾರದ ಹಿಂದಿನ ವ್ಯಕ್ತಿಗಳ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಸ್ಪಷ್ಟಪಡಿಸಿತ್ತು.

    ಇದರ ಬೆನ್ನಲ್ಲೇ ಕೃಪಾ ಆಳ್ವ, ವಿನೋದ್ ಕುಮಾರ್ ಮತ್ತು ಪ್ರಶಾಂತ್ ಕುಮಾರ್ ಅವರಿಗೆ ಬೆಂಗಳೂರಿನ 66ನೇ ಸಿಸಿಹೆಚ್ ನ್ಯಾಯಾಲಯ ನವೆಂಬರ್ 2ರಂದು ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿತ್ತು. ತನಿಖೆಗೆ ಸಹಕರಿಸಬೇಕು ಮತ್ತು ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು ಎಂಬ ಷರತ್ತುಗಳನ್ನು ವಿಧಿಸಲಾಗಿತ್ತು.

    ಈ ಎಲ್ಲ ಬೆಳವಣಿಗೆಗಳ ಮಧ್ಯೆ, ಹೈಕಮಾಂಡ್ ನಾಯಕ ರಾಹುಲ್ ಗಾಂಧಿಯನ್ನು ಸಿದ್ದರಾಮಯ್ಯ ಭೇಟಿಯಾಗಿ ಸ್ಟಿಂಗ್ ವಿಡಿಯೋ ಹಿಂದಿರುವ ಸೂತ್ರಧಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ತಮ್ಮ ವರ್ಚಸ್ಸಿಗೆ ಧಕ್ಕೆ ತರುವ ಪ್ರಯತ್ನ ಮುಂದುವರಿದರೆ ಮುಂದಿನ ಚುನಾವಣಾ ಪ್ರಚಾರಕ್ಕೂ ಬರುವುದಿಲ್ಲ ಎಂಬ ಎಚ್ಚರಿಕೆಯನ್ನೂ ನೀಡಿರುವುದು ಬಹಳ ಚರ್ಚೆಗೆ ಗ್ರಾಸವಾಗಿದೆ.

    ಕುಮಾರಸ್ವಾಮಿ ಹೆಸರು ಪ್ರಸ್ತಾಪ: ಬಿಜೆಪಿ-ಜೆಡಿಎಸ್ ನಾಯಕರ ಸಭೆ

    ಸ್ಟಿಂಗ್ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರು ಪ್ರಸ್ತಾಪವಾದ ಬೆನ್ನಲ್ಲೇ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಬೆಂಗಳೂರಿನಲ್ಲಿ ಸಭೆ ನಡೆಸಿದ್ದಾರೆ. ಬೆಂಗಳೂರಿನ ಆರ್. ಅಶೋಕ್ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಕುಮಾರಸ್ವಾಮಿ, ಆರ್. ಅಶೋಕ್, ಸಂಸದರಾದ ಬಸವರಾಜ ಬೊಮ್ಮಾಯಿ, ಡಾ. ಕೆ. ಸುಧಾಕರ್ ಸೇರಿದಂತೆ ಮೈತ್ರಿ ನಾಯಕರು ಭಾಗವಹಿಸಿದ್ದರು.

    ಸ್ಟಿಂಗ್ ಆಪರೇಷನ್ ಪ್ರಕರಣವನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಹೋರಾಟ ನಡೆಸುವ ಬಗ್ಗೆ ನಾಯಕರು ಚರ್ಚಿಸಿದ್ದಾರೆ. ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಬೇಕು ಮತ್ತು ಈ ವಿಚಾರದಲ್ಲಿ ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಬೇಕು ಎಂಬ ಬಗ್ಗೆ ಸಭೆಯಲ್ಲಿ ಸಮಾಲೋಚನೆ ನಡೆದಿದೆ ಎಂದು ತಿಳಿದುಬಂದಿದೆ.




    #crimenews #dakshinakannada #karnataka
    Previous Article‘ಸ್ಟಿಂಗ್ ಸೂತ್ರಧಾರಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಪ್ರಚಾರಕ್ಕೆ ಬರಲ್ಲ’; ರಾಹುಲ್ ಗಾಂಧಿಗೆ ಸಿದ್ದರಾಮಯ್ಯ ಖಡಕ್ ಸಂದೇಶ
    Next Article ತ್ರಿಕೋನ ಪ್ರೇಮದ ದ್ವೇಷ: ಪ್ಲಸ್‌ ಒನ್ ವಿದ್ಯಾರ್ಥಿಯ ಶವ ಗೋಣಿಚೀಲದಲ್ಲಿ ಪತ್ತೆ; ಮೂವರು ವಶಕ್ಕೆ

    Related Posts

    ಉಪ್ಪಿನಂಗಡಿ: ಆಟೊಗೆ ಹಿಂಬದಿಯಿಂದ ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಚಾಲಕ ಸಾವು

    November 14, 2026

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಉಪ್ಪಿನಂಗಡಿ: ಆಟೊಗೆ ಹಿಂಬದಿಯಿಂದ ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಚಾಲಕ ಸಾವು

    November 14, 2026

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.