Close Menu
    What's Hot

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಬಳ್ಕೂರಿನಲ್ಲಿ ಟಿಪ್ಪರ್–ಸ್ಕೂಟರ್ ಭೀಕರ ಅಪಘಾತ; ಚಿಕಿತ್ಸೆ ಫಲಿಸದೆ ಕಾಲೇಜು ವಿದ್ಯಾರ್ಥಿ ಸಾವು
    ಕರ್ನಾಟಕ

    ಬಳ್ಕೂರಿನಲ್ಲಿ ಟಿಪ್ಪರ್–ಸ್ಕೂಟರ್ ಭೀಕರ ಅಪಘಾತ; ಚಿಕಿತ್ಸೆ ಫಲಿಸದೆ ಕಾಲೇಜು ವಿದ್ಯಾರ್ಥಿ ಸಾವು

    adminBy adminNovember 4, 2026No Comments1 Min Read

    ಕುಂದಾಪುರ: ಕುಂದಾಪುರ ತಾಲೂಕಿನ ಬಳ್ಕೂರಿನಲ್ಲಿ ಅಕ್ಟೋಬರ್ 30 ರಂದು ಟಿಪ್ಪರ್ ಲಾರಿ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮೂಡ್ಲಕಟ್ಟೆ ಕಾಲೇಜಿನ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತ ವಿದ್ಯಾರ್ಥಿಯನ್ನು ಕಂಡ್ಲೂರು ನಿವಾಸಿ ಟಿ.ಕೆ. ಮೊಹಮ್ಮದ್ ಶಾಯನ್ ಎಂದು ಗುರುತಿಸಲಾಗಿದೆ.

    ಅಕ್ಟೋಬರ್ 30 ರಂದು ನಡೆದ ಭೀಕರ ಅಪಘಾತದ ಬಳಿಕ ತೀವ್ರ ರಕ್ತಸ್ರಾವ ಹಾಗೂ ಗಂಭೀರ ಗಾಯಗಳಿಂದ ಬಳಲುತ್ತಿದ್ದ ಮೂಡ್ಲಕಟ್ಟೆ ಕಾಲೇಜಿನ ವಿದ್ಯಾರ್ಥಿ ಮೊಹಮ್ಮದ್ ಶಾಯನ್ ಅವರನ್ನು ತಕ್ಷಣವೇ ಮಣಿಪಾಲದ ಕೆಎಂಸಿ  ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ  ಚಿಕಿತ್ಸೆ ನೀಡಲಾಗುತ್ತಿತ್ತು. ಆದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ. ಸ್ಕೂಟರ್‌ನ ಹಿಂಬದಿ ಸವಾರನಾಗಿದ್ದ ಮತ್ತೊಬ್ಬ ವಿದ್ಯಾರ್ಥಿ ಮೊಹಮ್ಮದ್ ರಾಯನ್ ಅಪಘಾತದಲ್ಲಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ  ಬಳ್ಕೂರು ಗ್ರಾಮದ ವಿಷ್ಣುಮೂರ್ತಿ ದೇವಸ್ಥಾನದ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಈ ಭೀಕರ ದುರಂತ ಸಂಭವಿಸಿತ್ತು.

    ಘಟನೆಯ ವಿವರಗಳ ಪ್ರಕಾರ, ಮಣ್ಣು ಸಾಗಿಸುತ್ತಿದ್ದ ಎರಡು ಟಿಪ್ಪರ್ ಲಾರಿಗಳು ಕುಂದಾಪುರ ಕಡೆಯಿಂದ ಅತ್ಯಂತ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಬರುತ್ತಿದ್ದವು. ಈ ವೇಳೆ ಮುಂದೆ ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ  ಬಸ್‌ನಿಂದಾಗಿ ಮೊದಲ ಟಿಪ್ಪರ್ ಚಾಲಕ ದಿಢೀರನೆ ವೇಗ ಕಡಿಮೆ ಮಾಡಿದ್ದಾನೆ. ಆ ಕ್ಷಣದಲ್ಲಿ ಹಿಂಬದಿಯಿಂದ ಅತಿವೇಗವಾಗಿ ಬಂದ ಮತ್ತೊಂದು ಟಿಪ್ಪರ್ ಮೊದಲ ಲಾರಿಗೆ ಹಿಂಭಾಗದಿಂದ ಭೀಕರವಾಗಿ ಢಿಕ್ಕಿಯಾಗಿದೆ.

    ಢಿಕ್ಕಿಯಾದ ರಭಸಕ್ಕೆ ಎರಡನೇ ಟಿಪ್ಪರ್ ಚಾಲಕ ಲಾರಿಯನ್ನು ನಿಯಂತ್ರಿಸಲಾಗದೆ ರಸ್ತೆಯ ಬಲಬದಿಗೆ ತಿರುಗಿಸಿದ್ದಾನೆ. ಈ ವೇಳೆ ಕಂಡ್ಲೂರು ಕಡೆಯಿಂದ ಬಸೂರು ಕಡೆಗೆ ವಿದ್ಯಾರ್ಥಿಗಳು ಸಂಚರಿಸುತ್ತಿದ್ದ ಸ್ಕೂಟರ್‌ಗೆ ಟಿಪ್ಪರ್ ನೇರವಾಗಿ ಢಿಕ್ಕಿಯಾಗಿದೆ. ಪರಿಣಾಮ ಸ್ಕೂಟರ್‌ನಲ್ಲಿದ್ದ ಇಬ್ಬರೂ ವಿದ್ಯಾರ್ಥಿಗಳು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು. ಘಟನೆಗೆ ಸಂಬಂಧಿಸಿದಂತೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಟಿಪ್ಪರ್ ಲಾರಿ ಚಾಲಕರ ಅತಿವೇಗ ಹಾಗೂ ನಿರ್ಲಕ್ಷ್ಯ ಚಾಲನೆ ವಿರುದ್ಧ BNS 2023 ರ ಸೂಕ್ತ ಕಾಯ್ದೆಗಳಡಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ.




    #karnataka
    Previous Articleಜೈಲುಗಳಲ್ಲಿನ ಜಾತಿ ತಾರತಮ್ಯ ಪ್ರಕರಣ: 23 ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳ ಖುದ್ದು ಹಾಜರಿಗೆ ಸುಪ್ರೀಂ ಕೋರ್ಟ್‌ನಿಂದ ಕೊನೆಯ ಎಚ್ಚರಿಕೆ
    Next Article ಪೊಲೀಸ್ ಪ್ರಧಾನ ಕಚೇರಿ ಎದುರು ವರ್ಗಾವಣೆ ಆದೇಶದ ವಿರುದ್ಧ ಪೊಲೀಸ್ ಸಿಬ್ಬಂದಿ ಆಕ್ರೋಶ; ಪ್ರತಿಭಟನೆಗೆ ನೇತೃತ್ವ ವಹಿಸಿದ್ದ ಎಸಿಪಿ ಅಮಾನತು

    Related Posts

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026

    ಮಗಳ ಮದುವೆ ಲಗ್ನಪತ್ರಿಕೆ ಹಂಚಲು ಹೋಗಿದ್ದ ದಂಪತಿಗೆ ಸಿಮೆಂಟ್ ಲಾರಿ ಡಿಕ್ಕಿ; ಪತ್ನಿ ಸಾವು, ಪತಿಯ ಕಾಲು ತುಂಡು

    November 13, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.