Close Menu
    What's Hot

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ರಾಷ್ಟ್ರೀಯ»ಪೊಲೀಸ್ ಪ್ರಧಾನ ಕಚೇರಿ ಎದುರು ವರ್ಗಾವಣೆ ಆದೇಶದ ವಿರುದ್ಧ ಪೊಲೀಸ್ ಸಿಬ್ಬಂದಿ ಆಕ್ರೋಶ; ಪ್ರತಿಭಟನೆಗೆ ನೇತೃತ್ವ ವಹಿಸಿದ್ದ ಎಸಿಪಿ ಅಮಾನತು
    ರಾಷ್ಟ್ರೀಯ

    ಪೊಲೀಸ್ ಪ್ರಧಾನ ಕಚೇರಿ ಎದುರು ವರ್ಗಾವಣೆ ಆದೇಶದ ವಿರುದ್ಧ ಪೊಲೀಸ್ ಸಿಬ್ಬಂದಿ ಆಕ್ರೋಶ; ಪ್ರತಿಭಟನೆಗೆ ನೇತೃತ್ವ ವಹಿಸಿದ್ದ ಎಸಿಪಿ ಅಮಾನತು

    adminBy adminNovember 4, 2026No Comments1 Min Read

    ನವದೆಹಲಿ: ದೆಹಲಿ ಪೊಲೀಸ್ ಪ್ರಧಾನ ಕಚೇರಿ ಎದುರು ಪೊಲೀಸ್ ಸಿಬ್ಬಂದಿ ನಡೆಸಿದ ಅನಿರೀಕ್ಷಿತ ಪ್ರತಿಭಟನೆಗೆ ನೇತೃತ್ವ ವಹಿಸಿದ್ದ ಎಸಿಪಿ ಮನಸ್ವಿ ವಶಿಷ್ಠ ಅವರನ್ನು ಕೇಂದ್ರ ಗೃಹ ಸಚಿವಾಲಯವು ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಸೋಮವಾರ ನಡೆದ ಪ್ರತಿಭಟನೆಯ ತೀವ್ರತೆಯ ಬೆನ್ನಲ್ಲೇ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ.

    ಅಕ್ಟೋಬರ್ 23ರಂದು ದೆಹಲಿಯ ಶಹದಾರ ಪೊಲೀಸ್ ಠಾಣೆಯಲ್ಲಿ ಪೊಲೀಸರು ಹಾಗೂ ವಕೀಲರ ನಡುವೆ ತೀವ್ರ ಘರ್ಷಣೆ ನಡೆದಿತ್ತು. ಈ ಗಲಾಟೆಯಲ್ಲಿ ವಕೀಲ ಲಲಿತ್ ಬನ್ಸಾಲ್ ಗಂಭೀರವಾಗಿ ಗಾಯಗೊಂಡಿದ್ದರು ಎನ್ನಲಾಗಿದೆ. ಪೊಲೀಸರ ಅನುಚಿತ ವರ್ತನೆ ಖಂಡಿಸಿ ವಕೀಲರು ಪ್ರತಿಭಟನೆ ನಡೆಸಿ, ಅನಿರ್ದಿಷ್ಟಾವಧಿ ಮುಷ್ಕರಕ್ಕೂ ಕರೆ ನೀಡಿದ್ದರು.

    ಪರಿಸ್ಥಿತಿಯನ್ನು ತಿಳಿಗೊಳಿಸುವ ಉದ್ದೇಶದಿಂದ ಅಕ್ಟೋಬರ್ 28ರಂದು ಎಸಿಪಿ ಮನಸ್ವಿ ವಶಿಷ್ಠ ಹಾಗೂ ಶಹದಾರ ಠಾಣೆಯ ಇನ್‌ಸ್ಪೆಕ್ಟರ್ ಅರುಣ್ ಕುಮಾರ್ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗಿತ್ತು. ಈ ವರ್ಗಾವಣೆ ಆದೇಶದ ಬೆನ್ನಲ್ಲೇ ವಕೀಲರು ತಮ್ಮ ಮುಷ್ಕರವನ್ನು ಹಿಂಪಡೆದಿದ್ದರು.

    ಪೊಲೀಸರಿಂದಲೇ ಪ್ರತಿಭಟನಾ ಧಾಟಿ:

    ಆದರೆ, ಇಬ್ಬರೂ ಅಧಿಕಾರಿಗಳ ವರ್ಗಾವಣೆ ಆದೇಶವನ್ನು ವಿರೋಧಿಸಿ ಸುಮಾರು 150ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಸೋಮವಾರ ದೆಹಲಿ ಪೊಲೀಸ್ ಪ್ರಧಾನ ಕಚೇರಿ ಎದುರು ಮುಗಿಬಿದ್ದು ಪ್ರತಿಭಟನೆ ನಡೆಸಿದರು. ವರ್ಗಾವಣೆಗೊಂಡಿರುವ ಅಧಿಕಾರಿಗಳನ್ನು ಮತ್ತೆ ಹಿಂದಿನ ಹುದ್ದೆಗಳಿಗೇ ಮರುನೇಮಕ ಮಾಡಬೇಕು ಎಂದು ಪಟ್ಟು ಹಿಡಿದರು. ಮಹಿಳಾ ಪೊಲೀಸ್ ಸಿಬ್ಬಂದಿಯೂ ಭಾಗವಹಿಸಿದ್ದ ಈ ಪ್ರತಿಭಟನೆಯಲ್ಲಿ, ‘ಸಮವಸ್ತ್ರಕ್ಕೆ ಆಗುವ ಅವಮಾನವನ್ನು ಸಹಿಸುವುದಿಲ್ಲ’ ಎಂಬ ಘೋಷಣೆಗಳು ಮೊಳಗಿದವು.

    ಪ್ರತಿಭಟನಾಕಾರರ ನಿಯೋಗವು ಪೊಲೀಸ್ ಆಯುಕ್ತ ಅನುರಾಗ್ ಕುಮಾರ್ ಅವರನ್ನು ಭೇಟಿ ಮಾಡಿ, ಶಹದಾರ ಗಲಾಟೆಗೆ ಕಾರಣರಾದ ವಕೀಲರ ವಿರುದ್ಧ ಎಫ್‌ಐಆರ್ ದಾಖಲಿಸುವುದು ಸೇರಿದಂತೆ ಐದು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿತ್ತು. ಸ್ವಯಂಪ್ರೇರಿತವಾಗಿ ಆರಂಭವಾದ ಈ ಪ್ರತಿಭಟನೆಯಲ್ಲಿ ತಾವೂ ಭಾಗವಹಿಸಿರುವುದಾಗಿ ಎಸಿಪಿ ಮನಸ್ವಿ ವಶಿಷ್ಠ ತಿಳಿಸಿದ್ದರು.

    ಪೊಲೀಸ್ ಸಿಬ್ಬಂದಿಯೇ ರಸ್ತೆಗಿಳಿದು ಪ್ರತಿಭಟನೆ ನಡೆಸಿದ ಈ ಅಪರೂಪದ ಘಟನೆ ಹಾಗೂ ಇದೀಗ ಎಸಿಪಿ ಮನಸ್ವಿ ವಶಿಷ್ಠ ಅವರ ಅಮಾನತು ಕ್ರಮವು ರಾಷ್ಟ್ರ ರಾಜಧಾನಿಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.




    #national
    Previous Articleಬಳ್ಕೂರಿನಲ್ಲಿ ಟಿಪ್ಪರ್–ಸ್ಕೂಟರ್ ಭೀಕರ ಅಪಘಾತ; ಚಿಕಿತ್ಸೆ ಫಲಿಸದೆ ಕಾಲೇಜು ವಿದ್ಯಾರ್ಥಿ ಸಾವು
    Next Article ಪ್ರದೀಪ್ ಪೂಜಾರಿ ಹಲ್ಲೆ, ಆತ್ಮಹತ್ಯೆ ಪ್ರಕರಣ; ಮಧ್ಯಪ್ರದೇಶದಲ್ಲಿ ಇಬ್ಬರು ಆರೋಪಿಗಳು ವಶಕ್ಕೆ

    Related Posts

    ಅಸ್ಸಾಂನಲ್ಲಿ ಬೆಚ್ಚಿಬೀಳಿಸಿದ ರಸ್ತೆ ಅಪಘಾತ; ಮಿನಿ ಬಸ್ ಜಖಂಗೊಂಡು 23 ಮಂದಿ ದುರ್ಮರಣ

    November 13, 2026

    ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳ ಹತ್ಯೆ ಪ್ರಕರಣ; 6 ಶಂಕಿತರನ್ನು ವಶಕ್ಕೆ ಪಡೆದ ಪೊಲೀಸರು

    November 13, 2026

    ಉದ್ಘಾಟನೆಯ ಸಂಭ್ರಮದ ಬೆನ್ನಲ್ಲೇ ತನಿಷ್ಕ್ ಮಳಿಗೆಯಲ್ಲಿ ಕಳ್ಳತನ; ಟ್ರಾಲಿ ಬ್ಯಾಗ್‌ನಲ್ಲಿ ಆಭರಣ ಸಾಗಿಸಿದ ಕಳ್ಳ

    November 13, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.