Close Menu
    What's Hot

    ಉಪ್ಪಿನಂಗಡಿ: ಆಟೊಗೆ ಹಿಂಬದಿಯಿಂದ ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಚಾಲಕ ಸಾವು

    November 14, 2026

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಮೈಸೂರು ಅರಮನೆ ನಮ್ಮ ಖಾಸಗಿ ಸ್ವತ್ತು; ಸರ್ಕಾರದ ಔದಾರ್ಯದಿಂದ ವಾಸವಿಲ್ಲ: ಪ್ರಮೋದಾದೇವಿ ಒಡೆಯರ್ ಸ್ಪಷ್ಟನೆ
    ಕರ್ನಾಟಕ

    ಮೈಸೂರು ಅರಮನೆ ನಮ್ಮ ಖಾಸಗಿ ಸ್ವತ್ತು; ಸರ್ಕಾರದ ಔದಾರ್ಯದಿಂದ ವಾಸವಿಲ್ಲ: ಪ್ರಮೋದಾದೇವಿ ಒಡೆಯರ್ ಸ್ಪಷ್ಟನೆ

    adminBy adminNovember 4, 2026No Comments2 Mins Read

    ಮೈಸೂರು: ಮೈಸೂರು ಅರಮನೆ ಖಾಸಗಿ ಸ್ವತ್ತು. ಅರಮನೆ ಕಟ್ಟಿಸಿದ್ದು ಸರ್ಕಾರ ಅಲ್ಲ. ಸರ್ಕಾರದ ಔದಾರ್ಯದಿಂದ ನಾವು ಅರಮನೆಯಲ್ಲಿ ವಾಸ ಇಲ್ಲ. ನ್ಯಾಯಾಲಯದ ನಿರ್ದೇಶನದಂತೆ ಇಲ್ಲಿದ್ದೇವೆ ಎಂದು ಪ್ರಮೋದಾ ದೇವಿ ಒಡೆಯರ್ ಸ್ಪಷ್ಟಪಡಿಸಿದ್ದಾರೆ.

    ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅರಮನೆಯ ಮಾಲೀಕತ್ವ ಹಾಗೂ ನಿರ್ವಹಣೆ ವಿಚಾರವಾಗಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು. ಅರಮನೆ ನಿರ್ವಹಣೆಗೆ ಅರಮನೆ ಆಡಳಿತ ಮಂಡಳಿ ರಚನೆ ಆಗಿದೆ. ಇದನ್ನು ನ್ಯಾಯಾಲಯದಲ್ಲಿ ನಾವು ಪ್ರಶ್ನಿಸಿದ್ದೇವೆ. ಇದು ಇನ್ನೂ ವಿಚಾರಣೆಯಲ್ಲಿದೆ. ನಾವು ಸರ್ಕಾರದ ವಿಶೇಷ ಅನುಗ್ರಹದಿಂದ ಇಲ್ಲಿ ವಾಸ ಇಲ್ಲ ಎಂದರು.

    ಅಂಬಾರಿಗೆ ಬಾಡಿಗೆ ಕೊಡುತ್ತಿಲ್ಲ. ಅಂಬಾರಿ ಇಟ್ಟುಕೊಂಡು ಟಿಕೆಟ್ ಮಾರಿ ಹಣ ಸಂಪಾದಿಸುತ್ತಾರೆ. ಅಂಬಾರಿ ಇಟ್ಟುಕೊಂಡು ಪ್ರಚಾರ ಮಾಡಿ ಹಣ ಮಾಡುತ್ತಾರೆ. ಇದಕ್ಕಾಗಿ ಹಣ ಕೊಡುತ್ತಾರೆ, ಅದು ಬಾಡಿಗೆ ಅಲ್ಲ. ಅಂಬಾರಿ, ಸಿಂಹಾಸನ ಎರಡು ನಮ್ಮ ವಶದಲ್ಲಿದೆ. ಹಿಂದೆಯೂ ನಮ್ಮ ವಶದಲ್ಲಿತ್ತು. ನಮ್ಮ ವಶದಲ್ಲೇ ಇರುತ್ತದೆ ಎಂದು ಸ್ಪಷ್ಟಪಡಿಸಿದರು.

    ಅಂಬಾರಿಗೆ ಎಷ್ಟು ಗೌರವಧನ ನೀಡಲಾಗಿದೆ ಎಂಬುದನ್ನು ನಾನು ಬಹಿರಂಗಪಡಿಸುವುದಿಲ್ಲ. ಸರ್ಕಾರ ಬೇಕಾದರೆ ಎಷ್ಟು ಹಣ ನೀಡಿದೆ ಎಂಬುದನ್ನು ಬಹಿರಂಗವಾಗಿ ಹೇಳಲಿ. ಅಂಬಾರಿಯನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಿಕೊಳ್ಳುತ್ತಿರುವುದರಿಂದ ಹಣ ಕೇಳಲಾಗುತ್ತಿದೆ. ಸರ್ಕಾರ ಬೇಕಾದರೆ ಇನ್ನೊಂದು ಅಂಬಾರಿಯನ್ನು ಮಾಡಿಸಿಕೊಳ್ಳಲಿ. ಇದಕ್ಕೆ ನನ್ನ ಯಾವುದೇ ಅಭ್ಯಂತರವಿಲ್ಲ. ಈ ಹಿಂದೆಯೂ ಸರ್ಕಾರಕ್ಕೆ ಇದೇ ಸಲಹೆ ನೀಡಿದ್ದೆ. ಸರ್ಕಾರದ ಬಳಿ ಸಂಪನ್ಮೂಲವಿದೆ. ಹೊಸ ಅಂಬಾರಿ ಮಾಡಿಸಿಕೊಳ್ಳಬಹುದಿತ್ತು. ಆದರೆ, ಸರ್ಕಾರ ಮಾಡಿಸಲಿಲ್ಲ ಅಷ್ಟೇ ಎಂದು ಹೇಳಿದರು.

    ಅಂಬಾರಿ ಹೊರುವ ಆನೆಯ ಬಗ್ಗೆ ತಿಳಿದುಕೊಳ್ಳುವ ಸಂಪೂರ್ಣ ಹಕ್ಕು ನನಗಿದೆ. ಅಂಬಾರಿಯ ಮಾಲೀಕರಾಗಿ ಅದನ್ನು ಹೊರುವ ಆನೆ ಯಾವುದು ಎಂಬುದನ್ನು ತಿಳಿದುಕೊಳ್ಳುವುದು ನನ್ನ ಹಕ್ಕು. ಶಿಷ್ಟಾಚಾರದ ಪ್ರಕಾರ ನನಗೆ ತಿಳಿಸಬೇಕು ಎಂದು ನಾನು ಹೇಳಿಲ್ಲ. ಇದಕ್ಕೆ ಶಿಷ್ಟಾಚಾರ ಇಲ್ಲ ಎಂಬುದು ನನಗೂ ಗೊತ್ತು. ಅನೇಕ ವಿಚಾರಗಳು ಪರಸ್ಪರ ನಂಬಿಕೆ, ಸಹಕಾರ ಮತ್ತು ತಿಳುವಳಿಕೆಯಿಂದ ನಡೆಯುತ್ತವೆ. ಅಂಬಾರಿ ಹೊರುವ ಆನೆಯನ್ನು ಮೊದಲೇ ನಿರ್ಧರಿಸಬಹುದಿತ್ತು. ಕೇವಲ ಐದು ದಿನ ಮುಂಚಿತವಾಗಿ ತಿಳಿಸಿದರೆ ನಾನು ಹೇಗೆ ಭರವಸೆ ಮೂಡಿಸಿಕೊಳ್ಳಲಿ? ಯಾವ ಭರವಸೆಯ ಮೇಲೆ ಅಂಬಾರಿಯನ್ನು ನೀಡಲಿ ಎಂದು ಪ್ರಶ್ನಿಸಿದರು.

    ಮಾತುಕತೆ ಮೂಲಕ ಬಗೆಹರಿಸಿಕೊಳ್ಳುತ್ತೇನೆ ಎಂದು ಸಿಎಂ ಹೇಳಿರುವುದಕ್ಕೆ ಧನ್ಯವಾದಗಳು. ಇದನ್ನು ಜಾಸ್ತಿ ದೊಡ್ಡದು ಮಾಡುವುದು ಬೇಡ. ಪೊಲೀಸರ ಭದ್ರತಾ ವ್ಯವಸ್ಥೆ ಹೆಸರಿನಲ್ಲಿ ತೊಂದರೆ ಆಗಿತ್ತು. ಅದರ ಬಗ್ಗೆ ಧ್ವನಿ ಎತ್ತಿದ್ದೇನೆ. ಜಟ್ಟಿ ಕಾಳಗ ನಡೆಸುವವರನ್ನು ಒಳಗೆ ಬಿಟ್ಟಿಲ್ಲ. ಇದು ತೊಂದರೆ ಆಯಿತು. ಆಯುಧ ಪೂಜೆ ಮತ್ತು ವಿಜಯಯಾತ್ರೆಗೆ ಪ್ರತಿ ವರ್ಷವೂ ತೊಂದರೆ ಆಗುತ್ತಿದೆ. ನಾನು ಎಲ್ಲಿಯೂ ರಾಜ್ಯ ಸರ್ಕಾರವನ್ನು ದೂಷಿಸಿಲ್ಲ. ಏಳು ದಿನ ನವರಾತ್ರಿ ಮಾಡಿ ಎಂದು ಹೇಳಿಲ್ಲ. ಏಳು ದಿನಕ್ಕೆ ಅರ್ಧ ಮುಗಿಸಿ ನಂತರ ಮಾಡಿ ಎಂದು ಹೇಳಿದ್ದೇನೆ. ನಾನು ಸಲಹೆ ಮಾತ್ರ ಕೊಟ್ಟಿದ್ದೇನೆ. ನಾನು ಸರ್ಕಾರಕ್ಕೆ ನಿರ್ದೇಶನ ನೀಡಿಲ್ಲ. ನಾನು ಸರ್ಕಾರಕ್ಕೆ ಪತ್ರವೇ ಬರೆದಿಲ್ಲ. ಬರೀ ಮಾಧ್ಯಮಕ್ಕೆ ಪತ್ರ ಬರೆದು ಸಾರ್ವಜನಿಕರ ಸಹಕಾರ ಕೇಳಿದ್ದೇನೆ. ಈ ಸಮಸ್ಯೆ ಮತ್ತು ಗೊಂದಲವನ್ನು ಮುಂದಿನ ದಸರಾವರೆಗೂ ಮುಂದುವರಿಸುವುದಿಲ್ಲ. ದಸರಾ ಪ್ರಾಧಿಕಾರ ರಚನೆಯಿಂದಲೇ ಎಲ್ಲ ಸಮಸ್ಯೆಗಳು ಬಗೆಹರಿಯುತ್ತವೆ ಎಂದು ನಾನು ಹೇಳುವುದಿಲ್ಲ. ಈ ವಿಚಾರವನ್ನು ಇನ್ನು ಮುಂದೆ ಮುಂದುವರಿಸುವುದು ಬೇಡ ಎಂದು ತಿಳಿಸಿದರು.

    ಅಂಬಾರಿಯ ತೂಕ ಎಷ್ಟು, ಅದರಲ್ಲಿ ಎಷ್ಟು ಚಿನ್ನವಿದೆ ಎಂಬುದನ್ನು ನಾನು ತೂಕ ಹಾಕಿಲ್ಲ. ಮುಂದೆಯೂ ತೂಕ ಹಾಕುವುದಿಲ್ಲ. ಈ ಬಗ್ಗೆ ಯಾರಿಗೆ ಏನು ಅನಿಸುತ್ತದೆಯೋ ಅದನ್ನು ಬರೆದುಕೊಳ್ಳಲಿ, ಮಾತನಾಡಲಿ. ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು.




    #karnataka
    Previous Articleಮಂಗಳೂರಿನಲ್ಲಿ ಮೀನು ಸಾಗಾಟದ ವಾಹನಗಳಿಂದ ರಸ್ತೆಗೆ ಕೊಳಚೆ ನೀರು; 604 ಪ್ರಕರಣ ದಾಖಲು, ₹3.02 ಲಕ್ಷ ದಂಡ ವಸೂಲಿ
    Next Article ಪ್ರಯಾಣಿಕಳ ಜೊತೆಗಿನ ಜಗಳ ದುರಂತ ಅಂತ್ಯ; ಚಲಿಸುವ ಬಸ್ಸಿನಿಂದ ತಳ್ಳಲ್ಪಟ್ಟ ಮಹಿಳಾ ಕಂಡಕ್ಟರ್ ಚಿಕಿತ್ಸೆ ಫಲಿಸದೆ ಸಾವು

    Related Posts

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026

    ಮಗಳ ಮದುವೆ ಲಗ್ನಪತ್ರಿಕೆ ಹಂಚಲು ಹೋಗಿದ್ದ ದಂಪತಿಗೆ ಸಿಮೆಂಟ್ ಲಾರಿ ಡಿಕ್ಕಿ; ಪತ್ನಿ ಸಾವು, ಪತಿಯ ಕಾಲು ತುಂಡು

    November 13, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಉಪ್ಪಿನಂಗಡಿ: ಆಟೊಗೆ ಹಿಂಬದಿಯಿಂದ ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಚಾಲಕ ಸಾವು

    November 14, 2026

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.