Close Menu
    What's Hot

    ಕೇರಳದ ಸಮುದ್ರ ವ್ಯಾಪ್ತಿಯಲ್ಲಿ ಅಕ್ರಮ ಮೀನುಗಾರಿಕೆ ಆರೋಪ; ಉಳ್ಳಾಲದ ಬೋಟ್ ಅಧಿಕಾರಿಗಳ ವಶಕ್ಕೆ

    November 13, 2026

    ನಂತೂರು ಜಂಕ್ಷನ್‌ನಲ್ಲಿ ಭೀಕರ ಅಪಘಾತ; ಲಾರಿಗೆ ಕಾರು ಡಿಕ್ಕಿಯಾಗಿ ಚಾಲಕ ಸೇರಿ ಇಬ್ಬರಿಗೆ ಗಂಭೀರ ಗಾಯ

    November 13, 2026

    ವಿವಾವಿಹೇತರ ಸಂಬಂಧ, ಚೀನಾ ಗೂಢಚಾರಿಕೆಯ ನಂಟಿನ ವಿವಾದ; ಎನ್ವಿಡಿಯಾ ಸಿಇಒ ಜೆನ್ಸನ್ ಹುವಾಂಗ್ ರಾಜೀನಾಮೆ

    November 13, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಉಡುಪಿ: ಪ್ರದೀಪ್ ಪೂಜಾರಿ ಪ್ರಕರಣದಲ್ಲಿ ಪೊಲೀಸ್ ಕಾರ್ಯಾಚರಣೆ; ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು
    ಅಪರಾಧ

    ಉಡುಪಿ: ಪ್ರದೀಪ್ ಪೂಜಾರಿ ಪ್ರಕರಣದಲ್ಲಿ ಪೊಲೀಸ್ ಕಾರ್ಯಾಚರಣೆ; ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

    adminBy adminNovember 8, 2026No Comments1 Min Read

    ಉಡುಪಿ: ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸರು ಉತ್ತರ ಪ್ರದೇಶದ ಪವನ್ ಕುಮಾರ್ ಸೇರಿದಂತೆ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

    ಪ್ರಕರಣದ ಆರೋಪಿಗಳ ಪತ್ತೆಗಾಗಿ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಅವರ ಮಾರ್ಗದರ್ಶನದಲ್ಲಿ, ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರ ನೇತೃತ್ವದಲ್ಲಿ ಬ್ರಹ್ಮಾವರ ವೃತ್ತ ನಿರೀಕ್ಷಕರ ವಿಶೇಷ ತಂಡವನ್ನು ರಚಿಸಲಾಗಿತ್ತು.

    ಈ ತಂಡದ ಸಿಬ್ಬಂದಿ ನವೆಂಬರ್ 3ರಂದು ಮಧ್ಯಪ್ರದೇಶಕ್ಕೆ ತೆರಳಿ ಭೋಪಾಲ್ ರೈಲ್ವೆ ನಿಲ್ದಾಣದ ಬಳಿ ಉತ್ತರ ಪ್ರದೇಶದ ಖುಷಿನಗರ ಜಿಲ್ಲೆಯ ಪತ್ರಾವನದ ಸುಖ್ಪುರ, ಬಂಗಾಲಿ ಪಟ್ಟಿಯ ನಿವಾಸಿ ಪವನ್ ಕುಮಾರ್ (24) ಹಾಗೂ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ವಶಕ್ಕೆ ಪಡೆದಿದ್ದರು. ಪವನ್ ಕುಮಾರ್ನನ್ನು ನವೆಂಬರ್ 5ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ಸುರಕ್ಷತೆಯ ದೃಷ್ಟಿಯಿಂದ ಪರಿವೀಕ್ಷಣಾಲಯದಲ್ಲಿ ಇರಿಸಲಾಗಿದೆ.

    ಪ್ರಕರಣದ ಉಳಿದ ಆರೋಪಿಗಳಾದ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ವರಂಗ ಗ್ರಾಮದ ಮುನಿಯಾಲು, ವೀರ ಸಾವರ್ಕರ್ ನಗರದ ಗಾಂಧಿ ಮೈದಾನದ ಬಳಿಯ ನಿವಾಸಿ ಆದರ್ಶ ಕಾಂಚನ್ ಹಾಗೂ ಕಾರ್ಕಳ ತಾಲೂಕಿನ ವರಂಗ ಗ್ರಾಮದ ಮುನಿಯಾಲು ಅಂಚೆಯ ದಿನೇಶ್ ಶೆಟ್ಟಿ ಅವರನ್ನು ನವೆಂಬರ್ 7ರ ರಾತ್ರಿ ಕಾರ್ಕಳದಲ್ಲಿ ವಶಕ್ಕೆ ಪಡೆಯಲಾಗಿದೆ.

    ಹಿರಿಯಡ್ಕ ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ಉಪನಿರೀಕ್ಷಕಿ ಮುಕ್ತಾಬಾಯಿ ಹಾಗೂ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿ, ಪ್ರಕರಣದ ತನಿಖಾಧಿಕಾರಿಯಾಗಿರುವ ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರ ಮುಂದೆ ಹಾಜರುಪಡಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.




    #crime #udupi
    Previous Articleವಿದೇಶಕ್ಕೆ ತೆರಳುವ ಮುನ್ನ ಲಾಕ್ ಮಾಡಿದ್ದ ಗಾಡ್ರೇಜ್‌ನಿಂದ ಚಿನ್ನಾಭರಣ ಮಾಯ; ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲು
    Next Article ಹೈದರಾಬಾದ್‌ನಲ್ಲಿ ಭೀಕರ ರಸ್ತೆ ಅಪಘಾತ; ಟ್ರಕ್‌ಗೆ ಆಟೋ ಡಿಕ್ಕಿಯಾಗಿ ಮೂವರು ಸಾವು, 14 ಮಂದಿಗೆ ಗಾಯ

    Related Posts

    ಕೇರಳದ ಸಮುದ್ರ ವ್ಯಾಪ್ತಿಯಲ್ಲಿ ಅಕ್ರಮ ಮೀನುಗಾರಿಕೆ ಆರೋಪ; ಉಳ್ಳಾಲದ ಬೋಟ್ ಅಧಿಕಾರಿಗಳ ವಶಕ್ಕೆ

    November 13, 2026

    ನಂತೂರು ಜಂಕ್ಷನ್‌ನಲ್ಲಿ ಭೀಕರ ಅಪಘಾತ; ಲಾರಿಗೆ ಕಾರು ಡಿಕ್ಕಿಯಾಗಿ ಚಾಲಕ ಸೇರಿ ಇಬ್ಬರಿಗೆ ಗಂಭೀರ ಗಾಯ

    November 13, 2026

    ವಿವಾವಿಹೇತರ ಸಂಬಂಧ, ಚೀನಾ ಗೂಢಚಾರಿಕೆಯ ನಂಟಿನ ವಿವಾದ; ಎನ್ವಿಡಿಯಾ ಸಿಇಒ ಜೆನ್ಸನ್ ಹುವಾಂಗ್ ರಾಜೀನಾಮೆ

    November 13, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕೇರಳದ ಸಮುದ್ರ ವ್ಯಾಪ್ತಿಯಲ್ಲಿ ಅಕ್ರಮ ಮೀನುಗಾರಿಕೆ ಆರೋಪ; ಉಳ್ಳಾಲದ ಬೋಟ್ ಅಧಿಕಾರಿಗಳ ವಶಕ್ಕೆ

    November 13, 2026

    ನಂತೂರು ಜಂಕ್ಷನ್‌ನಲ್ಲಿ ಭೀಕರ ಅಪಘಾತ; ಲಾರಿಗೆ ಕಾರು ಡಿಕ್ಕಿಯಾಗಿ ಚಾಲಕ ಸೇರಿ ಇಬ್ಬರಿಗೆ ಗಂಭೀರ ಗಾಯ

    November 13, 2026

    ವಿವಾವಿಹೇತರ ಸಂಬಂಧ, ಚೀನಾ ಗೂಢಚಾರಿಕೆಯ ನಂಟಿನ ವಿವಾದ; ಎನ್ವಿಡಿಯಾ ಸಿಇಒ ಜೆನ್ಸನ್ ಹುವಾಂಗ್ ರಾಜೀನಾಮೆ

    November 13, 2026

    ಕೊಂಕಣ ರೈಲ್ವೆ ವಿಲೀನಕ್ಕೆ ನಾಲ್ಕು ರಾಜ್ಯಗಳ ಸಮ್ಮತಿ ಕಡ್ಡಾಯ; ಮಂಗಳೂರಿನಲ್ಲಿ ರೈಲ್ವೆ ಸಚಿವರಿಂದ ಮಹತ್ವದ ಘೋಷಣೆ

    November 13, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ವಿಎಒ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳು ಅಮಾನತು, ಅಧಿಕಾರಿಗಳಿಗೆ ನೋಟಿಸ್

    November 12, 2026

    ನಿರಪರಾಧಿಗೆ ಜೈಲು ಶಿಕ್ಷೆ; ಎರಡೂವರೆ ವರ್ಷಗಳ ಬಳಿಕ ಜೀವಂತವಾಗಿ ಪ್ರತ್ಯಕ್ಷವಾದ ಕೊಲೆಯಾದ ಮಹಿಳೆ

    November 12, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.