Close Menu
    What's Hot

    ಬಳಸಿದ ಅಡುಗೆ ಎಣ್ಣೆ ಮರುಬಳಕೆಗೆ ಬ್ರೇಕ್; ಮಂಗಳೂರು ಸೇರಿ ನಾಲ್ಕು ನಗರಗಳಲ್ಲಿ ಸಂಗ್ರಹಣಾ ಕೇಂದ್ರ ಸ್ಥಾಪನೆ

    November 12, 2026

    ಬೆಳ್ತಂಗಡಿಯಲ್ಲಿ ಭೀಕರ ಅಪಘಾತ; 15 ಅಡಿ ಆಳದ ಹೊಂಡಕ್ಕೆ ಉರುಳಿದ ಕಾರು,ಐವರಿಗೆ ಗಾಯ

    November 12, 2026

    ವಿಎಒ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳು ಅಮಾನತು, ಅಧಿಕಾರಿಗಳಿಗೆ ನೋಟಿಸ್

    November 12, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಒಂದು ಕಡೆ ಉಚಿತ ಯೋಜನೆ, ಮತ್ತೊಂದೆಡೆ ಬೆಲೆ ಏರಿಕೆ; ಸರ್ಕಾರದ ವಿರುದ್ಧ ಕಿಡಿಕಾರಿದ ಹೈಕೋರ್ಟ್
    ಕರ್ನಾಟಕ

    ಒಂದು ಕಡೆ ಉಚಿತ ಯೋಜನೆ, ಮತ್ತೊಂದೆಡೆ ಬೆಲೆ ಏರಿಕೆ; ಸರ್ಕಾರದ ವಿರುದ್ಧ ಕಿಡಿಕಾರಿದ ಹೈಕೋರ್ಟ್

    adminBy adminNovember 9, 2026No Comments2 Mins Read

    ಬೆಂಗಳೂರು: ಸರ್ಕಾರ ಒಂದು ಕಡೆ ಉಚಿತ ಯೋಜನೆಗಳನ್ನು  ಘೋಷಿಸುತ್ತಿದ್ದರೆ, ಮತ್ತೊಂದೆಡೆ ಅಗತ್ಯ ವಸ್ತುಗಳ ಬೆಲೆಗಳನ್ನು ಹೆಚ್ಚಿಸಲಾಗುತ್ತಿದೆ. ಇದರಿಂದ ಸಾಮಾನ್ಯ ಜನರು ಜೀವನ ಸಾಗಿಸುವುದೇ ಕಷ್ಟವಾಗಿದೆ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

    ಅರ್ಜಿಯೊಂದರ ವಿಚಾರಣೆ ವೇಳೆ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಕುರಿತು ನ್ಯಾಯಮೂರ್ತಿ ಶ್ರೀಶಾನಂದ ಅವರಿದ್ದ ಪೀಠ ಕಳವಳ ವ್ಯಕ್ತಪಡಿಸಿದೆ. ಯೋಜನೆ ಉಚಿತ, ಆದರೆ ಬೆಲೆ ಏರಿಕೆ ಖಚಿತ ಎಂದು ವ್ಯಂಗ್ಯವಾಡಿದ ನ್ಯಾಯಪೀಠ, ಸರ್ಕಾರದ ಎಲ್ಲ ಯೋಜನೆಗಳೂ ಹೀಗೆಯೇ ಎಂದು ಪ್ರಶ್ನಿಸಿದೆ.

    ದೀಪಾವಳಿಗೆ ತುಪ್ಪದ ಯಮದೀಪ ಹಚ್ಚಬೇಕು:
    ಕಳೆದ ತಿಂಗಳು ಒಂದು ಕೆ.ಜಿ. ತುಪ್ಪ ಖರೀದಿಸಲು ಹೋದಾಗ 650 ರೂ. ಇತ್ತು. ಆದರೆ ಈಗ ಅದರ ಬೆಲೆ 850 ರೂ.ಗೆ ಏರಿಕೆಯಾಗಿದೆ. ದೀಪಾವಳಿಗೆ ತುಪ್ಪದ ಯಮದೀಪ ಹಚ್ಚಬೇಕು. ಇಷ್ಟೊಂದು ಬೆಲೆ ಹೆಚ್ಚಾದರೆ ಜನರು ಯಮದೀಪ ಹಚ್ಚುವುದಾದರೂ ಹೇಗೆ? ಯಮದೀಪ ಹಚ್ಚುವ ಬದಲು ನನ್ನನ್ನೇ ಕರೆದುಕೊಂಡು ಹೋಗು ಎಂದು ಯಮನಿಗೆ ಹೇಳಬೇಕಷ್ಟೇ. ಅಗತ್ಯ ವಸ್ತುಗಳ ಬೆಲೆ ಹೀಗೆಯೇ ಹೆಚ್ಚುತ್ತಾ ಹೋದರೆ ಮನುಷ್ಯ ಎಲ್ಲಿಗೆ ಹೋಗಬೇಕು? ಸಾಮಾನ್ಯ ಜನರು ಜೀವನ ನಡೆಸುವುದಾದರೂ ಹೇಗೆ ಎಂದು ನ್ಯಾಯಪೀಠ ಪ್ರಶ್ನಿಸಿದೆ.

    ಪ್ರತಿ ಕೆ.ಜಿ. ಅಕ್ಕಿಗೆ 103 ರೂ. ಬೆಲೆಯಾಗಿದೆ ಎಂಬ ವಿಚಾರವೂ ನ್ಯಾಯಪೀಠದ ಗಮನಕ್ಕೆ ಬಂದಿದೆ. ಹಾಲಿನ ಬೆಲೆ ಹಾಗೂ ಬಸ್ ಟಿಕೆಟ್ ದರ ಕೂಡ ಹೆಚ್ಚಳವಾಗಿದೆ. ಒಂದು ಕಡೆ ಸರ್ಕಾರ ಉಚಿತ ಯೋಜನೆಗಳನ್ನು ನೀಡುತ್ತಿದ್ದರೆ, ಮತ್ತೊಂದೆಡೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ದಿನಸಿ ಖರೀದಿಗೆ ಹೋದರೂ ಬಸ್ ಟಿಕೆಟ್ ದರ ಹೆಚ್ಚಳದ ಹೊರೆ ಜನರ ಮೇಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

    ಸರ್ಕಾರ ಟನ್ ಕಬ್ಬಿಗೆ 3,600 ರೂ. ಬೆಂಬಲ ಬೆಲೆ ಘೋಷಿಸಿದೆ. ಆದರೆ ದೀಪಾವಳಿ ಮುಗಿದ ಬಳಿಕ ಒಂದು ಕೆ.ಜಿ. ಸಕ್ಕರೆ ಬೆಲೆ 90 ರೂ.ಗೆ ಏರಿಕೆಯಾಗಲಿದೆ ಎಂಬ ಆತಂಕವನ್ನೂ ಕೋರ್ಟ್ ಹೊರಹಾಕಿದೆ.

    ಹಳೆಯ ದಾಸ್ತಾನಿನ ವಸ್ತುಗಳಿಗೂ ಹೊಸ ಬೆಲೆ ವಿಧಿಸಲಾಗುತ್ತಿದೆ ಎಂಬ ವಿಚಾರವನ್ನು ನ್ಯಾಯಪೀಠ ಪ್ರಸ್ತಾಪಿಸಿದೆ. ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ದಾಸ್ತಾನು ಮಾಡಲಾಗಿದ್ದ ಅಕ್ಕಿ ಮತ್ತು ಗೋಧಿಯಲ್ಲಿ 320 ಕ್ವಿಂಟಲ್ ಅಕ್ಕಿ ಹಾಗೂ 85 ಕ್ವಿಂಟಲ್ ಗೋಧಿ ಕೊರತೆ ಕಂಡುಬಂದಿರುವ ಬಗ್ಗೆಯೂ ವಿಚಾರಣೆ ವೇಳೆ ಉಲ್ಲೇಖವಾಗಿದೆ.

    ಮೈಸೂರು ಉಗ್ರಾಣದ ಹಿರಿಯ ವ್ಯವಸ್ಥಾಪಕರು ತಮ್ಮ ವಿರುದ್ಧ ದಾಖಲಿಸಿದ್ದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್ ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ನವೆಂಬರ್ 11ಕ್ಕೆ ಮುಂದೂಡಲಾಗಿದೆ.




    Previous Articleಹಾಸನ ಲಂಚ ಆರೋಪದ ಆಡಿಯೋ-ಚಾಟ್ ಪ್ರಕರಣಕ್ಕೆ ಹೊಸ ತಿರುವು; ನಕಲಿ ವಾಟ್ಸಾಪ್ ಸಂದೇಶ ಹರಡಿದ ಆರೋಪದಡಿ ಡಿಸಿ ಪಿಎಯಿಂದ ದೂರು
    Next Article ಕಣ್ಣೀರಿಟ್ಟು ಹೃದಯಾಘಾತವೆಂದು ನಾಟಕವಾಡಿದ ಪತ್ನಿಯ ಅಸಲಿ ಮುಖವಾಡ ಬಯಲು; ಪತ್ನಿ, ಪ್ರಿಯಕರ ಅರೆಸ್ಟ್

    Related Posts

    ವಿಎಒ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳು ಅಮಾನತು, ಅಧಿಕಾರಿಗಳಿಗೆ ನೋಟಿಸ್

    November 12, 2026

    ನಿರಪರಾಧಿಗೆ ಜೈಲು ಶಿಕ್ಷೆ; ಎರಡೂವರೆ ವರ್ಷಗಳ ಬಳಿಕ ಜೀವಂತವಾಗಿ ಪ್ರತ್ಯಕ್ಷವಾದ ಕೊಲೆಯಾದ ಮಹಿಳೆ

    November 12, 2026

    ಮೂರು ಬಾರಿ ವಿಚಾರಣೆ ನಡೆಸಿದರೂ ಮತ್ತೆ ಹಾಜರಾಗಲು ಸೂಚನೆ; ಸಿಸಿಬಿ ಅಧಿಕಾರಿಗಳ ವಿರುದ್ಧ ಕೃಪಾ ಆಳ್ವ ಆಕ್ರೋಶ

    November 12, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಬಳಸಿದ ಅಡುಗೆ ಎಣ್ಣೆ ಮರುಬಳಕೆಗೆ ಬ್ರೇಕ್; ಮಂಗಳೂರು ಸೇರಿ ನಾಲ್ಕು ನಗರಗಳಲ್ಲಿ ಸಂಗ್ರಹಣಾ ಕೇಂದ್ರ ಸ್ಥಾಪನೆ

    November 12, 2026

    ಬೆಳ್ತಂಗಡಿಯಲ್ಲಿ ಭೀಕರ ಅಪಘಾತ; 15 ಅಡಿ ಆಳದ ಹೊಂಡಕ್ಕೆ ಉರುಳಿದ ಕಾರು,ಐವರಿಗೆ ಗಾಯ

    November 12, 2026

    ವಿಎಒ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳು ಅಮಾನತು, ಅಧಿಕಾರಿಗಳಿಗೆ ನೋಟಿಸ್

    November 12, 2026

    ಮಣಿಪಾಲ ಎಂಐಟಿ ಹಾಸ್ಟೆಲ್‌ನಲ್ಲಿ ಬಿಟೆಕ್ ವಿದ್ಯಾರ್ಥಿನಿ ಶವವಾಗಿ ಪತ್ತೆ; ಪ್ರಕರಣ ದಾಖಲು

    November 12, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ವಿಎಒ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳು ಅಮಾನತು, ಅಧಿಕಾರಿಗಳಿಗೆ ನೋಟಿಸ್

    November 12, 2026

    ನಿರಪರಾಧಿಗೆ ಜೈಲು ಶಿಕ್ಷೆ; ಎರಡೂವರೆ ವರ್ಷಗಳ ಬಳಿಕ ಜೀವಂತವಾಗಿ ಪ್ರತ್ಯಕ್ಷವಾದ ಕೊಲೆಯಾದ ಮಹಿಳೆ

    November 12, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.