ಬೆಂಗಳೂರು: ಕೆಪಿಎಸ್ಸಿ ನೇಮಕಾತಿಯಲ್ಲಿ ಅಕ್ರಮ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಶಿವಶಂಕರಪ್ಪ ಸಾಹುಕಾರ್ ಮತ್ತು ಬಸವರಾಜ್ ಕನ್ನಾಳೆ ಜಾಮೀನು ಅರ್ಜಿಯನ್ನು ಬೆಂಗಳೂರಿನ 4ನೇ ಸಿಸಿಎಚ್ ನ್ಯಾಯಾಧೀಶ ಮಂಜುನಾಥ್ ಸಂಗ್ರೇಶಿ ವಜಾಗೊಳಿಸಿ ಬುಧವಾರ ಆದೇಶ ಹೊರಡಿಸಿದ್ದಾರೆ. ಇ.ಡಿ ಅಧಿಕಾರಿಗಳು ಶಿವಶಂಕರಪ್ಪ ಮತ್ತು ಬಸವರಾಜ ಕನ್ನಾಳೆಯನ್ನು ಬಂಧಿಸಿದ್ದರು. ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು, ಆದರೆ ನ್ಯಾಯಾಲಯವು ಅವರ ಅರ್ಜಿಯನ್ನು ತಿರಸ್ಕರಿಸಿದೆ. ಇನ್ನು ಇದೇ ಪ್ರಕರಣದಲ್ಲಿ ಕೆಪಿಎಸ್ಸಿ ಸದಸ್ಯೆ ಗೀತಾಗೆ ಇ.ಡಿ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.







